
ಹಾವೇರಿ(ನ.07): ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಬಿಜೆಪಿ ಆರೋಪವನ್ನು ತಳ್ಳಿಹಾಕಿರುವ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ 'ಇದು ನನ್ನ ವಿರುದ್ಧದ ರಾಜಕೀಯ ಷಡ್ಯಂತ್ರ. ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ' ಎಂದಿದ್ದಾರೆ.
ಶಿಗ್ಗಾಂವಿ ಉಪಚುನಾವಣೆ ಪ್ರಚಾರಕ್ಕೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ನನ್ನ ಮೇಲೆ ಬಂದಿರುವ ಆರೋಪ ರಾಜಕೀಯ ಷಡ್ಯಂತ್ರ. ನಮ್ಮ ಇಲಾಖೆಯಲ್ಲಿ ಈ ರೀತಿಯ ಯಾವುದೇ ಅವ್ಯವಹಾರ ನಡೆದಿಲ್ಲ.ಯಾವುದೇನೇಮಕಾತಿ ನಡೆದಿಲ್ಲ, ಯಾವುದೇವರ್ಗಾವಣೆ ನಡೆದಿಲ್ಲ. ಯಾವುದೇ ಬಡ್ತಿ ನೀಡಿಲ್ಲ' ಎಂದರು.
ನೀವು ಒಬ್ಬ ದೇಶದ ಮಾರಕ ಪ್ರಧಾನಿ ಆಗ್ತೀರಿ: ಮೋದಿ ವಿರುದ್ಧ ಹರಿಹಾಯ್ದ ತಿಮ್ಮಾಪುರ
ನಾನು ಯಾರನ್ನೂ ವರ್ಗಾವಣೆ ಮಾಡೇ ಇಲ್ಲ. ಅವರು ಯಾರಿಗೆ ಹಣ ಕೊಟ್ಟಿದ್ದಾರೆ ಗೊತ್ತಿಲ್ಲ? ಆ ರೀತಿ ಹಣ ನೀಡಿದ್ದರೆ ಯಾರಿಗೆ ನೀಡಿದ್ದಾರೆ ಕೇಳಿ. ನಾನು ಯಾವುದೇ ಹಣ ತಗೊಂಡಿಲ್ಲ. ಲೈಸೆನ್ಸ್ ನವೀಕರಣಕ್ಕೆ ಯಾರಿಗೂ ಯಾವುದೇ ಕಿರುಕುಳ ನೀಡಿಲ್ಲ ಮತ್ತು ಹಣ ಪಡೆದಿಲ್ಲ' ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.