ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದೆ. ನಾವು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಹಿಂದಕ್ಕೆ ಪಡೆಯುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ರಿವೇಂಜ್ ಪೊಲಿಟಿಕ್ಸ್ ಶುರು ಮಾಡಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆರೋಪಿಸಿದರು.
ಬೆಳಗಾವಿ (ಜೂ.22) ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದೆ. ನಾವು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಹಿಂದಕ್ಕೆ ಪಡೆಯುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ರಿವೇಂಜ್ ಪೊಲಿಟಿಕ್ಸ್ ಶುರು ಮಾಡಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆರೋಪಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಹಿತದೃಷ್ಟಿಯಿಂದ ಇರುವ ಯೋಜನೆಗಳಿಗೆ ನೀವು ಕೈ ಹಚ್ಚಬೇಡಿ. ಜನರ ಹಿತ ಬದಿಗೊತ್ತಿ ರಿವೇಂಜ್ ಪೊಲಿಟಿಕ್ಸ್ ಮಾಡಿದರೆ ರಾಜ್ಯದ ಜನ ನಿಮ್ಮನ್ನು ಕ್ಷಮಿಸುವುದಿಲ್ಲ. ಏನೇ ತಪ್ಪಾಗಿದ್ದರೂ ತಪ್ಪಿತಸ್ಥರು ಶಿಕ್ಷೆಗೆ ಅರ್ಹರಾಗುತ್ತಾರೆ ಎಂದರು.
ಜನರ ಒಳಿತಿಗೆ ಬಿಜೆಪಿ ಸರ್ಕಾರಗಳು ಬದ್ಧ: ಈರಣ್ಣ ಕಡಾಡಿ
ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸಿದೆ. ಪಠ್ಯಕ್ರಮ ಬದಲಾವಣೆ ಮಾಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿತ್ಯ ಅವರ ಹೇಳಿಕೆಗಳು, ನಿರ್ಣಯಗಳನ್ನು ಎಲ್ಲರೂ ಗಮನಿಸುತ್ತಿದ್ದಾರೆ ಎಂದ ಅವರು, ವ್ಯಾಕ್ಸಿನ್ ಡಿಪೋದಲ್ಲಿ ಜಾಗ ಖಾಲಿ ಇರುವುದನ್ನು ನಾನು ಕೂಡ ಗಮನಿಸಿದ್ದೇನೆ. ಸ್ಮಾರ್ಚ್ ಸಿಟಿ ಯೋಜನೆಯಡಿ ಆಸ್ತಿ ನಿರ್ಮಾಣವಾಗಿದೆ. ಆಸ್ತಿ ನಿರ್ಮಾಣವಾಗದೇ ದುಡ್ಡು ಖರ್ಚು ಆಗಿದ್ದರೆ ತನಿಖೆ ಮಾಡಬೇಕಾಗುತ್ತದೆ. ಕಾಮಗಾರಿಗಳ ವೇಳೆ ಏನಾದರೂ ಹೆಚ್ಚು ಕಮ್ಮಿ ಆಗಿದ್ದರೂ ಈಗ ಅದನ್ನು ಸರಿಪಡಿಸಿಕೊಳ್ಳಬೇಕು ಎಂದರು.
ಮಹದಾಯಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಗೋವಾ ಬೆನ್ನಿಗೆ ನಿಂತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮಹದಾಯಿ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡ ದೃಢ ಹೆಜ್ಜೆಯನ್ನು ಯಾರೂ ತೆಗೆದುಕೊಂಡಿಲ್ಲ. ಎಲ್ಲ ಅಡೆತಡೆಗಳನ್ನು ನಿವಾರಿಸಿ ಯೋಜನೆ ಜಾರಿಗೆ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ. ಮೂರು ಕಡೆ ಬಿಜೆಪಿ ಸರ್ಕಾರ ಇದ್ದಾಗ ಯೋಜನೆ ಜಾರಿಗೊಳಿಸುವಂತೆ ಕಾಂಗ್ರೆಸ್ ಒತ್ತಾಯ ಮಾಡಿತ್ತು. ಯಾವುದೇ ಪಕ್ಷಗಳು ಇರಲಿ, ರಾಜ್ಯದ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಮಾತನಾಡುತ್ತಾರೆ. ಆದರೂ ಸಮನ್ವಯತೆ ತರುವ ದೃಷ್ಟಿಯಿಂದ ಕೇಂದ್ರ ಸರ್ಕಾರ ದಿಟ್ಟಹೆಜ್ಜೆ ಇಟ್ಟಿದೆ ಎಂದು ಹೇಳಿದರು.
Karnataka Politics: ಬೆಂಕಿ ಹಚ್ಚೋ ಕೆಲಸದಿಂದ ಕೈ ಸುಟ್ಟುಕೊಂಡಿದ್ದ ಕಾಂಗ್ರೆಸ್: ಕಡಾಡಿ