ಖಾತೆ ಹಂಚಿಕೆ ಬಳಿಕ ಜಗಳ, ರಾಜ್ಯದಲ್ಲಿ ಶೀಘ್ರದಲ್ಲೇ ಮತ್ತೆ ಚುನಾವಣೆ?

By Kannadaprabha NewsFirst Published Feb 9, 2020, 8:05 AM IST
Highlights

‘ಶೀಘ್ರದಲ್ಲೇ ಚುನಾವಣೆ ಬಂದರೂ ಅಚ್ಚರಿಯಿಲ್ಲ’ | ಖಾತೆ ಹಂಚಿಕೆ ಬಳಿಕ ಜಗಳ ಜೋರಾಗಲಿದೆ

ಹುಬ್ಬಳ್ಳಿ[ಫೆ.09]: ರಾಜ್ಯದಲ್ಲಿನ ಬಿಜೆಪಿ ಸರ್ಕಾರ ಸ್ಥಿರವಾಗಿಲ್ಲ. ಯಾವಾಗ ಬೇಕಾದರೂ ಚುನಾವಣೆ ಬರಬಹುದು. ಶೀಘ್ರದಲ್ಲೇ ವಿಧಾನಸಭೆ ಚುನಾವಣೆ ಬಂದರೂ ಆಶ್ಚರ್ಯವಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಭವಿಷ್ಯ ನುಡಿದಿದ್ದಾರೆ.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರದಲ್ಲಿ ಸಾಕಷ್ಟುಗೊಂದಲಗಳಿವೆ. ಬಹಳ ದಿನಗಳ ನಂತರ ಸಚಿವ ಸಂಪುಟ ವಿಸ್ತರಣೆಯಾಗಿದೆ. ಈಗಾಗಲೇ ಜಗಳ ಶುರುವಾಗಿದೆ. ಖಾತೆ ಹಂಚಿಕೆ ನಂತರ ಇದು ಇನ್ನಷ್ಟುಜೋರಾಗಲಿದೆ ಎಂದರು.

ತಮ್ಮ ಬೇಡಿಕೆಯನ್ನೂ ಮುಂದಿಟ್ಟರು ST ಸೋಮಶೇಖರ್

ಬಿಜೆಪಿಯಲ್ಲಿನ ಹಿರಿಯರಿಗೂ ಸಚಿವ ಸ್ಥಾನ ಕೊಟ್ಟಿಲ್ಲ. ಆ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಯಾವ ರೀತಿ ನಿಭಾಯಿಸುತ್ತಾರೆ ಎಂಬುದನ್ನು ಕಾಯ್ದು ನೋಡುತ್ತೇವೆ. ರಾಜ್ಯದಲ್ಲಿ ಸರ್ಕಾರ ಪತನವಾದರೆ ಚುನಾವಣೆಗೆ ಹೋಗಲು ಸಿದ್ಧರಾಗಬೇಕಿದೆ ಎಂದರು.

ಕೆಪಿಸಿಸಿ ಅಧ್ಯಕ್ಷರ ನೇಮಕ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರ ಆಯ್ಕೆಯಾಗಲಿದೆ. ಒಂದು ವಾರ ಅಥವಾ ಹದಿನೈದು ದಿನಗಳಲ್ಲಿ ಎಲ್ಲವೂ ಬಗೆಹರಿಯಲಿದೆ. ಕಾಂಗ್ರೆಸ್‌ನಲ್ಲಿ ಮೂಲ ಹಾಗೂ ವಲಸಿಗ ಎಂಬ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್‌ ಸೇರಿದ ಎಲ್ಲರೂ ಕಾಂಗ್ರೆಸ್ಸಿಗರೇ. ಪಕ್ಷ ಸಂಘಟನೆ ಹಾಗೂ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕೆಪಿಸಿಸಿ ಅಧ್ಯಕ್ಷರ ಆಯ್ಕೆ ನಡೆಯಲಿದೆ ಎಂದರು.

'ಸಿಎಂ ಯಡಿಯೂರಪ್ಪ ನನಗೆ ಒಳ್ಳೆಯ ಸ್ಥಾನ ಕೊಟ್ಟೇ ಕೊಡ್ತಾರೆ'

click me!