Congress ವಿರುದ್ಧ ಕಾಫಿನಾಡಲ್ಲಿ ಫೋಸ್ಟರ್ ಅಭಿಯಾನ: ಸಿದ್ದು ವಿರುದ್ಧ ಶ್ಯಾಡೋ ಸಿಎಂ ಪೋಸ್ಟರ್

By Govindaraj S  |  First Published Nov 18, 2023, 9:23 AM IST

ರಾಜ್ಯದಲ್ಲಿ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ,ವಿಪಕ್ಷ ನಾಯಕನ ಆಯ್ಕೆ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಆಕ್ಟಿವ್ ಆಗಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಕಾಫಿನಾಡಿನಲ್ಲಿ ಆಕ್ಟಿವ್ ಆಗಿ ಪೋಸ್ಟರ್ ಅಭಿಯಾನ ನಡೆಸಿದ್ದಾರೆ. 


ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು (ನ.18): ರಾಜ್ಯದಲ್ಲಿ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ,ವಿಪಕ್ಷ ನಾಯಕನ ಆಯ್ಕೆ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಆಕ್ಟಿವ್ ಆಗಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಕಾಫಿನಾಡಿನಲ್ಲಿ ಆಕ್ಟಿವ್ ಆಗಿ ಪೋಸ್ಟರ್ ಅಭಿಯಾನ ನಡೆಸಿದ್ದಾರೆ. ಸರ್ಕಾರದ ಪಂಚ ಗ್ಯಾರಂಟಿಗಳ ವಿರುದ್ಧ ವ್ಯಂಗ್ಯ-ಆಕ್ರೋಶ ಹೊರಹಾಕಿ ಸಿಎಂ ಸಿದ್ದು ವಿರುದ್ಧ ಶ್ಯಾಡೋ ಸಿಎಂ ಪೋಸ್ಟರ್ ಗಳನ್ನು ಅಂಟಿಸಿದ್ದಾರೆ.

Latest Videos

undefined

ವ್ಯಂಗ್ಯ ಚಿತ್ರದ ಮೂಲಕ ವ್ಯಂಗ್ಯ: ಚಿಕ್ಕಮಗಳೂರು‌ ನಗರದಲ್ಲಿ ಬಿಜೆಪಿ ಯುವಮೋರ್ಚಾದಿಂದ ಸರ್ಕಾರದ ವಿರುದ್ಧ ವ್ಯಂಗ್ಯ ಹಾಗೂ ಆಕ್ರೋಶದ ಫೋಸ್ಟರ್ ಅಂಟಿಸುವ ಮೂಲಕ ವಿಭಿನ್ನ ಪ್ರತಿಭಟನೆ ನಡೆಸಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಶ್ಯಾಡೋ ಸಿ.ಎಂ ಪೋಸ್ಟರ್ ಅಂಟಿಸಿದ್ದಾರೆ.ನಗರದ ತಾಲೂಕು ಆಫೀಸ್, ಮೆಸ್ಕಾಂ ಕಚೇರಿ, ತಾಲೂಕು ಪಂಚಾಯಿತಿ, ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಅಭಿಯಾನ ನಡೆಸಲಾಗಿದೆ. ಚಿಕ್ಕಮಗಳೂರು ನಗರದ ವಿವಿದೆಡೆ ಪೋಸ್ಟರ್ ಅಭಿಯಾನ ನಡೆಸಿರೋ ಬಿಜೆಪಿ ಕಾರ್ಯಕರ್ತರು ಮುಂಜಾನೆಯೇ ಪ್ರತಿಭಟನೆಗೆ ಇಳಿದಿದ್ದಾರೆ. ವ್ಯಂಗ್ಯ ಚಿತ್ರದ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇಂಧನ ಸಚಿವರು ಕಾಣೆ ಪೋಸ್ಟರ್: ರಾಜ್ಯವನ್ನ ಕತ್ತಲೆಗೆ ದೂಡಿ ಇಂಧನ ಸಚಿವರು ನಾಪತ್ತೆ ಎಂದು ಪೋಸ್ಟರ್ ಹಾಕಿದ್ದು, ಕೆ.ಜೆ.ಜಾರ್ಜ್ ಇಂಧನ ಸಚಿವ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕಾಣೆ ಎಂದು ಪೋಸ್ಟ್ ಸಹಾ ಅಂಟಿಸಲಾಗಿದೆ. ಈ ತಿಂಗಳ ಕಪ್ಪ ಎಲ್ಲಿ ಎಂದು ಪ್ರಶ್ನೆ ಕೇಳಿರೋ ಸೋನಿಯಾ ಗಾಂಧಿ ರೀತಿಯ ಪೋಸ್ಟರ್ ಸಹಾ ಅಂಟಿಸಲಾಗಿದೆ.ಅದಕ್ಕೆ ಉತ್ತರ ಎಂಬಂತೆ ಈಗ ತಾನೇ ವಿದ್ಯುತ್ ಬಿಲ್ ಹೆಚ್ಚಳವಾಗಿದೆ.

ನಾನು, ವಿಜಯೇಂದ್ರ ಜೋಡೆತ್ತುಗಳು, ಬಿಜೆಪಿ ಅಧಿಕಾರಕ್ಕೆ ತರಲು ಹೋರಾಟ: ಆರ್‌.ಅಶೋಕ್‌

ಇರೀ ಮ್ಯಾಮ್ ಎನ್ನುತ್ತಿರೋ ಇಂಧನ ಸಚಿವರ ಫೋಟೋ ಅಲ್ಲದೇ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ವಿರುದ್ಧ ವ್ಯಂಗ್ಯ-ಆಕ್ರೋಶದಿಂದ ಕೂಡಿದ ಪೋಸ್ಟರ್ ಗಳನ್ನು ಅಂಟಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಜಿಲ್ಲಾ ಉಸ್ತುವಾರಿ ಸಚಿವರು, ಇಂಧನ ಸಚಿವರ ಕಛೇರಿಗೆ ಅಂಟಿಸಿದ್ದ ಪೋಸ್ಟರ್ ಗಳನ್ನು ಸಿಬ್ಬಂದಿಗಳ ತೆರೆವುಗೊಳಿಸಿದ್ದು ಇನ್ನು ಸರ್ಕಾರಿ ಕಛೇರಿಗಳಲ್ಲಿ ಅಂಟಿಸಲಾಗಿದ್ದ ಪೋಸ್ಟರ್ ಗಳನ್ನ ಪೊಲೀಸರು ತೆರವುಗೊಳಿಸಿದ್ದಾರೆ.

click me!