ಅಧಿಕಾರ ಶಾಶ್ವತವಲ್ಲ, ಭಕ್ತಿ ಶಾಶ್ವತ: ಧರ್ಮಸ್ಥಳದಲ್ಲಿ ಡಿ.ಕೆ ಶಿವಕುಮಾರ್ ಭಾವನಾತ್ಮಕ ಭಾಷಣ

Published : Apr 20, 2025, 08:31 PM ISTUpdated : Apr 20, 2025, 08:33 PM IST
ಅಧಿಕಾರ ಶಾಶ್ವತವಲ್ಲ, ಭಕ್ತಿ ಶಾಶ್ವತ: ಧರ್ಮಸ್ಥಳದಲ್ಲಿ ಡಿ.ಕೆ ಶಿವಕುಮಾರ್ ಭಾವನಾತ್ಮಕ ಭಾಷಣ

ಸಾರಾಂಶ

ನಾನು ರಾಜಕೀಯದಲ್ಲಿ ವಿವಿಧ ಹುದ್ದೆಗೆ ಏರಿದರೂ ಇಲ್ಲಿಗೆ ಮಂಜುನಾಥನ ಭಕ್ತನಾಗಿ ಬರ್ತೇನೆ. ಅಧಿಕಾರ ಬರ್ತದೆ, ಅಧಿಕಾರ ಹೋಗ್ತದೆ, ಇಲ್ಲಿ ಯಾವುದೂ ಶಾಶ್ವತ ಅಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. 

ಮಂಗಳೂರು (ಏ.20): ನಾನು ರಾಜಕೀಯದಲ್ಲಿ ವಿವಿಧ ಹುದ್ದೆಗೆ ಏರಿದರೂ ಇಲ್ಲಿಗೆ ಮಂಜುನಾಥನ ಭಕ್ತನಾಗಿ ಬರ್ತೇನೆ. ಅಧಿಕಾರ ಬರ್ತದೆ, ಅಧಿಕಾರ ಹೋಗ್ತದೆ, ಇಲ್ಲಿ ಯಾವುದೂ ಶಾಶ್ವತ ಅಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಶ್ರೀಕ್ಷೇತ್ರ ಧರ್ಮಸ್ಥಳದ ಕಲ್ಯಾಣ ಮಂಟಪ ಉದ್ಘಾಟಿಸಿ ಭಾಷಣ ಮಾಡಿದ ಅವರು, ರಾಜ ಆದವನೂ ಅಧಿಕಾರ ಕಳೆದುಕೊಳ್ತಾನೆ, ರಾಜಕಾರಣಿ ಆದವನೂ ಅಧಿಕಾರ ಕಳೆದುಕೊಳ್ತಾನೆ. ಹೆಗ್ಗಡೆಯವರು ನಡೆದು ಬಂದ ದಾರಿ ಮತ್ತು ರಾಜ್ಯಕ್ಕೆ ಕೊಟ್ಟ ಮಾರ್ಗದರ್ಶನ ದೊಡ್ಡದು. ಭಕ್ತನಿಗೂ ಭಗವಂತನಿಗೂ ವ್ಯವಹಾರ ನಡೆಯುವ ಸ್ಥಳ ದೇವಾಲಯ. ಹೆಗ್ಗಡೆಯವರು ಮಾಡಿದ ಸಾಧನೆ ಧರ್ಮ ಮತ್ತು ಧಾರ್ಮಿಕ ಚರಿತ್ರೆಯಲ್ಲಿ ದಾಖಲಾಗಿದೆ ಎಂದರು. 

ನನ್ನ ತಮ್ಮ ಪ್ರತೀ ವರ್ಷ ಧರ್ಮಸ್ಥಳದಲ್ಲೇ ಹುಟ್ಟು ಹಬ್ಬ ಆಚರಿಸ್ತಾನೆ. ನಾನು ಮತ್ತು ನನ್ನ ಕುಟುಂಬ ಕೂಡ ಇಲ್ಲಿಗೆ ಬರ್ತಾ ಇರ್ತೇವೆ. ನನ್ನ ಯಶಸ್ಸಿನಲ್ಲಿ ಈ ಶಿವನ ಕ್ಷೇತ್ರದ ಪಾಲು ದೊಡ್ಡದಿದೆ. ಮಂಜುನಾಥನ ನಂಬಿದ ಯಾರಿಗೂ ತೊಂದರೆ ಆಗಿಲ್ಲ. ಕೆಲವರು ಧರ್ಮಸ್ಥಳದ ವಿಚಾರದಲ್ಲಿ ವಾದ ಮತ್ತು ಟೀಕೆಗಳನ್ನು ಮಾಡ್ತಾರೆ. ಶ್ರೀಗಳು ಜೈನರು, ಅವರು ಹೇಗೆ ಮಂಜುನಾಥನ ನಂಬ್ತಾರೆ ಅಂತ. ಹೀಗೆ ವಾದ ಮಾಡಿದ ಕೆಲ ನಾಯಕರು, ಸಮಾಜ ಸೇವಕರು, ಚಿಂತಕರೆಲ್ಲ ಇದಾರೆ. ಧರ್ಮ ಯಾವುದಾದರೂ ತತ್ವ ಒಂದೆ, ನಾಮ ನೂರಾದರೂ ದೈವ ಒಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ. ಇಂತಹ ಪವಿತ್ರವಾದ ಕ್ಷೇತ್ರವನ್ನ ಉಳಿಸಿಕೊಂಡು ಬೆಳೆಸಿಕೊಂಡು ಹೋಗಬೇಕಿದೆ ಎಂದು ಹೇಳಿದರು.

ಸಣ್ಣಪುಟ್ಟ ಮಾತನಾಡೋರು ಹಾಗೂ ಟೀಕೆ ಮಾಡೋರು ಬೇಕಾದಷ್ಟು ಜನ ಇರ್ತಾರೆ. ನಾನು ಶ್ರೀಗಳಿಗೆ ಹೇಳೋದು ಇಷ್ಟೇ, ಟೀಕೆಗಳು ಸಾಯ್ತವೆ, ಮಾಡುವ ಕೆಲಸಗಳು ಉಳೀತಾವೆ. ಹಾಗಾಗಿ ನೀವು ಯಾವುದಕ್ಕೂ ಅಂಜುವ ಸಂಧರ್ಭನೇ ಇಲ್ಲ. ನನ್ನಂಥ ಸಾವಿರಾರು ಜನ ಡಿಕೆ ಶಿವಕುಮಾರ್ ನಿಮ್ಮ ಬೆನ್ನಿಗೆ ನಿಲ್ಲಲು ಸಿದ್ದರಿದ್ದೇವೆ. ನಿಮ್ಮ ಪರಿಶುದ್ದವಾದ ಶ್ರಮ, ಸೇವೆ ಇಡೀ ರಾಷ್ಟ್ರದಲ್ಲಿ ನಾವು ಗಮನಿಸಿದ್ದೇವೆ. ಹಾಗಾಗಿ ನೀವು ಚಿಂತೆ ಮಾಡೋದು ಬೇಡ, ಸಮಾಜ ಸೇವೆ ಮಾಡಿ. ಚಿಂತೆ ಮಾಡದೇ ಆರೋಗ್ಯ ಕಾಪಾಡಿಕೊಂಡು ಸೇವೆ ಮುಂದುವರೆಸಿ.  ನನ್ನಂಥ ನೂರಾರು ಡಿ.ಕೆ.ಶಿವಕುಮಾರ್ ಈ ಕ್ಷೇತ್ರವನ್ನ ಮತ್ತು ನಿಮ್ಮನ್ನ ರಕ್ಷಣೆ ಮಾಡೋ ಕೆಲಸ ಮಾಡ್ತಾರೆ ಎಂದು ಡಿಕೆಶಿ ತಿಳಿಸಿದರು.

ಜಾತಿಗಣತಿ ವಿಚಾರದಲ್ಲಿ ಆತುರದ ನಿರ್ಧಾರವಿಲ್ಲ: ಡಿ.ಕೆ.ಶಿವಕುಮಾರ್‌

ಬಿಜೆಪಿ ಜನಾಕ್ರೋಶ ಕೇಂದ್ರದ ವಿರುದ್ಧ ವ್ಯಕ್ತವಾಗಲಿ: ದೇಶದ ಇಂಧನ, ರಸಗೊಬ್ಬರ, ಪೆಟ್ರೋಲ್‌ ಸೇರಿ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಗೆ ಕೇಂದ್ರ ಬಿಜೆಪಿ ಸರ್ಕಾರವೇ ಕಾರಣ. ಜನಾಕ್ರೋಶ ಏನಿದ್ದರೂ ಬಿಜೆಪಿ ಸರ್ಕಾರದ ವಿರುದ್ಧ ವ್ಯಕ್ತವಾಗಬೇಕೇ ಹೊರತು ಬೆಲೆ ಏರಿಕೆ ತಗ್ಗಿಸಲು ಗ್ಯಾರಂಟಿ ಯೋಜನೆ ಕೊಟ್ಟ ನಮ್ಮ ವಿರುದ್ಧವಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿ, ಬಿಜೆಪಿಯ ರಾಜ್ಯ ನಾಯಕರಿಗೆ ನಾಚಿಕೆಯಾಗಬೇಕು. ಮೋದಿ ಅವರು ಡೀಸೆಲ್‌ ಬೆಲೆ ಏರಿಕೆ ಮಾಡಿದ್ದರಿಂದ ಸಾರಿಗೆ ವೆಚ್ಚ, ವಿದ್ಯುತ್‌ ದರ, ಕೃಷಿ ವೆಚ್ಚ, ತರಕಾರಿ ದಿನಸಿ ಬೆಲೆ, ಸಿಮೆಂಟ್‌, ಕಬ್ಬಿಣ ದರವಿಪರೀತ ಏರಿಕೆಯಾಗಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ನ್ಯಾಯವಾಗಿ ಮೋದಿ ಅವರ ಸರ್ಕಾರದ ವಿರುದ್ಧ ಹೋರಾಡಬೇಕು. ಆದರೆ, ಬಡವರ ಪರವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧವಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ