ಸೋನಿಯಾ ಗಾಂಧಿ ಬೇಕಿದ್ರೆ ಬಿಜೆಪಿಗೆ ಬರ್ತಾರೆ, ಹುಕ್ಕೇರಿ ಬರಲ್ಲ ಎಂದ ಬಿಜೆಪಿ ನಾಯಕ

By Suvarna NewsFirst Published Nov 25, 2020, 7:36 PM IST
Highlights

ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿರುವ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ರಾಜಕೀಯ ಗರಿಗೆದರಿದೆ.

ಬೆಂಗಳೂರು, (ನ. 25): ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಅವರು ಬೆಂಗಳೂರಿನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದು, ಭಾರೀ ಕುತೂಹಲ ಮೂಡಿಸಿದೆ.

ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವ ರಾಜಕೀಯ ವಿಷಯಗಳ ಬಗ್ಗೆಯೂ ಅವರ ಜೊತೆ ಚರ್ಚೆ ಮಾಡಿಲ್ಲ. ಬೆಳಗಾವಿ ಜಿಲ್ಲೆಯ ನೀರಾವರಿ ಕಾಮಗಾರಿಗಳ ಬಗ್ಗೆ ಚರ್ಚಿಸಲು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದೆ ಎಂಬ ಸ್ಪಷ್ಟಪಡಿಸಿದರು.

ಅವರಿಗೆ ಸಚಿವ ಸ್ಥಾನ ನೀಡುವವರೆಗೂ ಹೋರಾಟ: ರಮೇಶ್ ಜಾರಕಿಹೊಳಿ ಬಹಿರಂಗ ಹೇಳಿಕೆ

ಕಾಂಗ್ರೆಸ್ ನಾಯಕ ಪ್ರಕಾಶ್ ಹುಕ್ಕೇರಿ ಬಿಜೆಪಿಗೆ ಬರುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿ ಪ್ರಭಾಕರ್ ಕೋರೆ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬೇಕಿದ್ದರೆ ಬಿಜೆಪಿಗೆ ಬರುತ್ತಾರೆ. ಆದರೆ ಪ್ರಕಾಶ್ ಹುಕ್ಕೇರಿ ಅವರು ಮಾತ್ರ ಎಂದಿಗೂ ಬಿಜೆಪಿಗೆ ಬರೋದಿಲ್ಲ ಎಂದರು. 

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ನಾನೇನು ಈಗ ರಾಜಕೀಯದಿಂದ ನಿವೃತ್ತಿಯಾಗಿಲ್ಲ. ಪಕ್ಷ ಹೇಳಿದರೆ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಪರೋಕ್ಷವಾಗಿ ಟಿಕೆಟ್ ಎನ್ನುವುದನ್ನು ಹೇಳಿದರು.

ಇನ್ನು ರಮೇಶ್ ಜಾರಕಿಹೊಳಿ ಅವರ ಪುತ್ರ ಬೆಳಗಾವಿ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ವಿಷಯ ನನಗೆ ಗೊತ್ತಿಲ್ಲ ಎಂದರು.

click me!