ಸವದಿ, ಶೆಟ್ಟರ್ ರಾಜೀನಾಮೆಯಿಂದ ಬಿಜೆಪಿಗೆ ಹಾನಿ: ಪ್ರಭಾಕರ ಕೋರೆ

By Girish Goudar  |  First Published Apr 16, 2023, 12:26 PM IST

ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ರಾಜೀನಾಮೆ ಬಿಜೆಪಿಗೆ ಹಾನಿಯಾಗಲಿದೆ. ಯಾವ ಪ್ರಮಾಣದಲ್ಲಿ ಹಾನಿಯಾಗಲಿದೆ ಎಂಬುದು ಫಲಿತಾಂಶದ ಬಳಿಕವೇ ತಿಳಿಯಲಿದೆ: ಪ್ರಭಾಕರ ಕೋರೆ 


ಬೆಳಗಾವಿ(ಏ.16):  ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್‌ಗೆ ಅನ್ಯಾಯ ಆಗಿರುವುದು ನನಗೂ ಬೇಸರವಾಗಿದೆ ಅಂತ ರಾಜ್ಯಸಭೆ ಮಾಜಿ ಸದಸ್ಯ ಡಾ. ಪ್ರಭಾಕರ ಕೋರೆ ಹೇಳಿದ್ದಾರೆ. 

ಇಂದು(ಭಾನುವಾರ) ನಗರದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಮೇಲೆ ಯಾವುದೇ ಗಂಭೀರವಾದ ಆರೋಪಗಳಿಲ್ಲ. ಹೈಕಮಾಂಡ್ ಈಗಲೇ‌ ಎಚ್ಚೆತ್ತು ಜಗದೀಶ್ ಶೆಟ್ಟರ್‌ಗೆ ಆಗಿರುವ ಅನ್ಯಾಯ ಸರಿಪಡಿಸಬೇಕು ಅಂತ ಆಗ್ರಹಿಸಿದ್ದಾರೆ. 

Tap to resize

Latest Videos

ಪ್ರಧಾನ್‌ ಬಂದರೂ ಆರದ ಬಿಜೆಪಿ ಬಂಡಾಯದ ಕಾವು: ಕಮಲ ಪಾಳಯ ಇನ್ನೂ ಕೊತಕೊತ..!

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈ ಭಾಗದಲ್ಲಿ ಪಕ್ಷ ಸಂಘಟನೆಯನ್ನ ಮಾಡಿದವರು. ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ರಾಜೀನಾಮೆ ಬಿಜೆಪಿಗೆ ಹಾನಿಯಾಗಲಿದೆ. ಯಾವ ಪ್ರಮಾಣದಲ್ಲಿ ಹಾನಿಯಾಗಲಿದೆ ಎಂಬುದು ಫಲಿತಾಂಶದ ಬಳಿಕವೇ ತಿಳಿಯಲಿದೆ. ನಾನು ಸಂಜೆ ಜಗದೀಶ್ ಶೆಟ್ಟರ್ ಭೇಟಿಯಾಗಿ ಚರ್ಚೆ ನಡೆಸುವೆ ಅಂಥ ಪ್ರಭಾಕರ ಕೋರೆ ತಿಳಿಸಿದ್ದಾರೆ. 

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

click me!