'ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಪ್ರಜಾಧ್ವನಿ ಯಾತ್ರೆ'

By Kannadaprabha News  |  First Published Jan 17, 2023, 11:30 PM IST

ಕಾಂಗ್ರೆಸ್‌ ಪಕ್ಷದ ಪ್ರಜಾಧ್ವನಿ ಬಸ್‌ ಯಾತ್ರೆ ಜ.18ರಂದು ಕೊಪ್ಪಳದಿಂದ ಬಾಗಲಕೋಟ ಜಿಲ್ಲೆಗೆ ಆಗಮಿಸಲಿದೆ ಯಾತ್ರೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜಿವಾಲಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹಾಗೂ ಕಾಂಗ್ರೆಸ್‌ ಪಕ್ಷದ ಎಲ್ಲ ಮುಖಂಡರು ಭಾಗವಹಿಸಲಿದ್ದಾರೆ. 


ಲೋಕಾಪುರ(ಜ.17):  ಜನರಿಗೆ ಉತ್ತಮ ಆಡಳಿತ ಒದಗಿಸುವಲ್ಲಿ ವಿಫಲವಾದ ಉಭಯ ಸರ್ಕಾರಗಳ ವಿರುದ್ಧ ಆಂದೋಲನ ಮಾದರಿಯಲ್ಲಿ ಪ್ರಜಾಧ್ವನಿ ಯಾತ್ರೆಯನ್ನು ಕಾಂಗ್ರೆಸ್‌ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದೇವೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಆರ್‌.ಬಿ.ತಿಮ್ಮಾಪುರ ಹೇಳಿದರು. ಪಟ್ಟಣದ ಉದುಪುಡಿ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದ ಪ್ರಜಾಧ್ವನಿ ಬಸ್‌ ಯಾತ್ರೆ ಜ.18ರಂದು ಕೊಪ್ಪಳದಿಂದ ಬಾಗಲಕೋಟ ಜಿಲ್ಲೆಗೆ ಆಗಮಿಸಲಿದೆ ಯಾತ್ರೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜಿವಾಲಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹಾಗೂ ಕಾಂಗ್ರೆಸ್‌ ಪಕ್ಷದ ಎಲ್ಲ ಮುಖಂಡರು  ಭಾಗವಹಿಸಲಿದ್ದಾರೆ ಎಂದರು.

ವಿಧಾನಸಭೆ ಚುನಾವಣೆ ಎದುರಿಸಲು ಕಾಂಗ್ರೆಸ್‌ ಪಕ್ಷವು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಒಗ್ಗಟ್ಟಿನಿಂದ ಚುನಾವಣೆಗೆ ತಯಾರಾಗಿದೆ. 18ರಂದು ಯಾತ್ರೆ ಬಾಗಲಕೋಟೆಯ ನವನಗರದ ಕಾಳಿದಾಸ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 11ಕ್ಕೆ ಜರುಗಲಿದೆ. ಕಾರ್ಯಕ್ರಮವನ್ನು ಯಶ್ವಸಿಗೊಳಿಸಲು ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

Tap to resize

Latest Videos

undefined

ಮೋದಿ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ: ಈಶ್ವರಪ್ಪ

ಲೋಕಾಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅಶೋಕ ಕಿವಡಿ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ, ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಿದೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ, ರಾಜ್ಯ ಸರ್ಕಾರವಂತೂ ಭ್ರಷ್ಟಾಚಾರದಲ್ಲಿ ಮುಳುಗಿದೆ ಇವುಗಳನ್ನು ಜನರಿಗೆ ತಿಳಿಸಿ ಬಿಜೆಪಿ ಹಟಾವೋ ಚಳವಳಿ ನಡೆಸಲಾಗುವುದು ಎಂದರು.

ಕಾಂಗ್ರೆಸ್‌ ಯುವ ಮುಖಂಡ ಗುರುರಾಜ ಉದಪುಡಿ ಮಾತನಾಡಿ, ವಿಧಾನಸಭಾ ಚುನಾವಣೆ ಎದುರಿಸಲು ಇಂದಿನಿಂದ ಕಾಂಗ್ರೆಸ್‌ ಮತ್ತೊಂದು ಮಹತ್ವದ ಹೆಜ್ಜೆಯನ್ನು ಇರಿಸಲಿದೆ. ಬಾಗಲಕೋಟೆಗೆ ಆಗಮಿಸುವ ಪ್ರಜಾಧ್ವನಿ ಬಸ್‌ ಯಾತ್ರೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು ಕಾರ್ಯಕರ್ತರು ಬರುವ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಧಿಕಾರಕ್ಕೆ ಬಂದೇ ಬರುತ್ತದೆ ಪಕ್ಷದ ಮುಖಂಡರು, ಕಾರ್ಯಕರ್ತರು ತಮಗೆ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ಮಾಡಲು ವಿನಂತಿಸಿದರು.

ತಾ.ಪಂ. ಮಾಜಿ ಸದಸ್ಯ ರಫೀಕ್‌ ಭೈರಕದಾರ, ಮಾತನಾಡಿದರು. ಈ ವೇಳೆ ವೆಂಕನಗೌಡ ಪಾಟೀಲ, ಬಿ.ಕೆ.ಮಠದ, ಗೋವಿಂದ ಕೌಲಗಿ, ಲಕ್ಷ್ಮಣ ಮಾಲಗಿ, ಗೋಪಾಲಗೌಡ ಪಾಟೀಲ, ಮಹೇಶ ಮಳಲಿ, ಕೃಷ್ಣಾ ಜಟ್ಟೆನ್ನವರ, ಅಬ್ದುಲ್‌ ರೆಹೆಮಾನ್‌ ತೊರಗಲ್‌, ಲೋಕಣ್ಣ ಉಳ್ಳಾಗಡ್ಡಿ, ಮಹಿಳಾ ಘಟಕದ ಅಧ್ಯಕ್ಷ ರೇಖಾ ಪಾಟೀಲ, ರಾಜುಗೌಡ ಪಾಟೀಲ, ಹಣಮಂತಗೌಡ ಪಾಟೀಲ, ಭೀಮನಗೌಡ ಪಾಟೀಲ, ಕುಮಾರ ಕಾಳಮ್ಮನವರ, ರಾಮಣ್ಣಾ ತುಬಾಕಿ, ಗೋವಿಂದಪ್ಪ ದಾಸರ, ರಿಯಾಜ್‌ ಬಾಗವಾನ, ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಇದ್ದರು.

click me!