ಹಾಸನಕ್ಕೆ ಪ್ರಜ್ವಲ್ ರೇವಣ್ಣ ಲೋಕಸಭಾ ಅಭ್ಯರ್ಥಿ: ಎಚ್.ಡಿ.ದೇವೇಗೌಡ

By Kannadaprabha News  |  First Published Dec 2, 2023, 1:21 PM IST

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಹಾಸನದಿಂದ ಸ್ಪರ್ಧಿಸಲಿದ್ದು. ಅವರ ಗೆಲುವಿಗೆ ಎಲ್ಲರೂ ಶ್ರಮಿಸಬೇಕಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕರೆಕೊಟ್ಟರು. 


ಹೊಳೆನರಸೀಪುರ (ಡಿ.02): ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಹಾಸನದಿಂದ ಸ್ಪರ್ಧಿಸಲಿದ್ದು. ಅವರ ಗೆಲುವಿಗೆ ಎಲ್ಲರೂ ಶ್ರಮಿಸಬೇಕಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕರೆಕೊಟ್ಟರು. ತಾಲೂಕಿನ ಕಟ್ಟೆಬೆಳಗುಲಿ ಗ್ರಾಮದ ಶ್ರೀ ರಾಮದೇವರಕಟ್ಟೆ ಆವರಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಜೆಡಿಎಸ್ ಚುನಾಯಿತ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಹಾಸನ ಕ್ಷೇತ್ರದ ಗೆಲುವಿಗಾಗಿ ಎಲ್ಲಾ ಶಾಸಕರು, ಮಾಜಿ ಶಾಸಕರು ಹಾಗೂ ಎಲ್ಲಾ ಚುನಾಯಿತ ಪ್ರತಿನಿಧಿಗಳು ಒಮ್ಮತದಿಂದ ಪ್ರಜ್ವಲ್ ರೇವಣ್ಣನ ಗೆಲುವಿಗೆ ಶ್ರಮಿಸುವಂತೆ ವಿನಂತಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಕೂಡ, ದೇವೇಗೌಡರು ಈ ಕ್ಷೇತ್ರದಿಂದ ಸ್ಪರ್ಧಿಸಲು ಬಯಸುವುದಾದರೆ ಈ ಕ್ಷೇತ್ರವನ್ನು ಅವರಿಗೇ ಬಿಟ್ಟುಕೊಡಲು ನಾನು ಸಿದ್ಧನಿದ್ದೇನೆ. ದೇವೇಗೌಡರು ಈ ಹಿಂದೆ ಈ ಕ್ಷೇತ್ರವನ್ನು ನನಗೆ ಬಿಟ್ಟುಕೊಟ್ಟಿದ್ದರಿಂದಲೇ ನಾನು ಸಂಸದನಾಗಿ ಆಯ್ಕೆಯಾಗಿದ್ದೇನೆ. ನನಗೆ ರಾಜಕೀಯ ಮುನ್ನುಡಿ ಬರೆದವರು ಅವರೇ. ಹಾಗಾಗಿ ಇದೀಗ ಅವರು ಈ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಛಿಸಿದಲ್ಲಿ ಕ್ಷೇತ್ರ ಬಿಟ್ಟುಕೊಡುವೆ ಎಂದರು.

Tap to resize

Latest Videos

ರೈತರನ್ನು ನಡು ನೀರಲ್ಲಿ ಕೈಬಿಟ್ಟ ಕಾಂಗ್ರೆಸ್‌ ಸರ್ಕಾರ: ಆರ್.ಅಶೋಕ್‌

ಪಂಚ ರಾಜ್ಯ ಫಲಿತಾಂಶ ಪರಿಣಾಮ ಬರಲ್ಲ: ಇತ್ತೀಚೆಗೆ ನಡೆದ ಕೆಲವು ರಾಜ್ಯದ ವಿಧಾನಸಭೆ ಚುನಾವಣೆಯ ಬಗ್ಗೆ ಅವರದೇ ರೀತಿಯಲ್ಲಿ ಹಲವಾರು ಸಮೀಕ್ಷೆಗಳು, ಮುಂದಿನ ಲೋಕಸಭೆ ಚುನಾವಣೆಗೆ ಯಾವುದೇ ಪ್ರಭಾವ ಬೀರುವುದಿಲ್ಲ. ನನ್ನ ವೈಯಕ್ತಿಕ ಭಾವನೆ ಹಾಗೂ ಅನುಭವದಲ್ಲಿ ಚುನಾವಣೆಯ ಫಲಿತಾಂಶವು ಗೌಣವಾಗಲಿದೆ. ಹಿಂದುಸ್ಥಾನದ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವು ಮೂರು ರಾಜ್ಯಗಳಲ್ಲಿ ಆಡಳಿತದಲ್ಲಿ ಇದ್ದು, ಜಿಜೆಪಿ ಪಕ್ಷವೂ ೧೬ ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಸಮೀಕ್ಷೆಗಳು ವಿರೋಧ ಭಾವನೆ ಮೂಡಿಸುತ್ತೆ ಎನ್ನಲು ಸಾಧ್ಯವಿಲ್ಲ. ಕರ್ನಾಟಕ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಬದಿಗೆ ಸರಿಸಲು ಹಲವಾರು ಪ್ರಯತ್ನ ನಡೆದಿದ್ದರೂ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರೈತರ ೨೫ ಸಾವಿರ ಕೋಟಿ ರು. ರೈತರ ಸಾಲ ಮನ್ನ ಮಾಡಿದ್ದಾರೆ ಮತ್ತು ಹಲವಾರು ಜನಪರ ಕಾರ್ಯಗಳನ್ನು ಮಾಡಿದ್ದಾರೆ ಎಂದರು.

ಶಕ್ತನಾಗಿದ್ದೇನೆ: ರಾಜ್ಯಸಭಾ ಸದಸ್ಯರಾಗಿ ಹಲವಾರು ಕೆಲಸಗಳನ್ನು ಮಾಡುತ್ತಿದ್ದು, ಮಂಡಿನೋವು ಹೊರತಾಗಿ ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದರಲ್ಲಿ ಶಕ್ತನಾಗಿದ್ದೇನೆ. ಜಿಲ್ಲೆಯಲ್ಲಿ ಎಚ್.ಡಿ.ರೇವಣ್ಣ ಕೈಗೊಂಡ ಅಭಿವೃದ್ಧಿ ಕಾರ್ಯಗಳು ನನ್ನಲ್ಲಿ ಬಹಳ ಪರಿಣಾಮ ಬೀರಿದೆ, ಮೊಸಳೆಹೊಸಳ್ಳಿ ಗ್ರಾಮದ ಎಂಜಿನಿಯರಿಂಗ್ ಕಾಲೇಜಿನಲ್ಲಿ ೩ ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ, ಇದು ಯುವಕರ ಪ್ರಗತಿಯ ಬಗ್ಗೆ ಅವರಿಗೆ ಇರುವ ಕಾಳಜಿಗೆ ಸಾಕ್ಷಿಯಾಗಿದೆ ಎಂದರು.

ಅಶೋಕ್‌ ಭೇಟಿ: ಮುಂದಿನ ೨.೫ ವರ್ಷಗಳಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಮತ್ತು ಅಗತ್ಯವಾದ ಕೆಲಸ ಕಾರ್ಯಗಳನ್ನು ಮಾಡಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸೀಟುಗಳ ಕುರಿತು ಹಿರಿಯ ನಾಯಕರು ತೀರ್ಮಾನ ಮಾಡುತ್ತಾರೆ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ನಮ್ಮ ಮನೆಗೆ ಭೇಟಿ ನೀಡಿ ಮಾತನಾಡಿದ್ದಾರೆ. ಎಲ್ಲರೂ ಜತೆಗೂಡಿ ರಾಜ್ಯದ ೨೮ ಕ್ಷೇತ್ರಗಳಲ್ಲೂ ಗೆಲ್ಲುವ ನಿಟ್ಟಿನಲ್ಲಿ ಹೋರಾಟ ಮಾಡೋಣವೆಂದು ತಿಳಿಸಿದರು.

ರಾಜ್ಯ ಸರ್ಕಾರ ಬರ ಎದುರಿಸದೆ ತೆಲಂಗಾಣ ಚುನಾವಣೆಗೆ ಹೋಗಿದ್ದಾರೆ: ಎಚ್.ಡಿ.ರೇವಣ್ಣ

ಶಾಸಕರಾದ ಎಚ್.ಡಿ.ರೇವಣ್ಣ, ಬಾಲಕೃಷ್ಣ, ಸ್ವರೂಪ್ ಪ್ರಕಾಶ್, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಮಾಜಿ ಶಾಸಕರಾದ ಕುಮಾರಸ್ವಾಮಿ, ಮಾಜಿ ಶಾಸಕ ಹಾಗೂ ಜೆಡಿಎಸ್ ರಾಜ್ಯಧ್ಯಕ್ಷ ಲಿಂಗೇಶ್, ಮುಖಂಡರಾದ ಮುತ್ತಿಗೆ ರಾಜೇಗೌಡ, ಜಗನ್ನಾಥ್, ಕರೀಗೌಡ, ಚಂದ್ರಶೇಖರ್, ದೇವರಾಜೇಗೌಡ, ಸುಪ್ರಿತ್, ಪುಟ್ಟಸೋಮಪ್ಪ, ಜ್ಯೋತಿ, ವೀಣಾ, ತ್ರಿಲೋಚನಾ, ಜವರೇಗೌಡ, ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

click me!