ಬಾಗಲಕೋಟೆ, ವಿಜಯಪುರ, ಹಾವೇರಿ, ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ತುಮಕೂರು, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ.
ಬೆಂಗಳೂರು(ಜೂ.02): ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಪೈಕಿ ಬಿಜೆಪಿ 15, ಕಾಂಗ್ರೆಸ್ 11 ಹಾಗೂ ಜೆಡಿಎಸ್ ಎರಡು ಸ್ಥಾನಗಳಲ್ಲಿ ಎಂದು ಕಾಪ್ (ಸಿಒಪಿಎಸ್) ತನ್ನ ಚುನಾವಣೋತ್ತರ ಸಮೀಕ್ಷೆಯಲ್ಲಿ ತಿಳಿಸಿದೆ.
ಈ ಪೈಕಿ ಬಾಗಲಕೋಟೆ, ವಿಜಯಪುರ, ಹಾವೇರಿ, ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ತುಮಕೂರು, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ.
undefined
ಲೋಕಸಭಾ ಚುನಾವಣೆ 2024: ಸಮೀಕ್ಷೆ ಏನೇ ಇದ್ರೂ, ಕಾಂಗ್ರೆಸ್‌ಗೆ ಎರಡಂಕಿ ಸ್ಥಾನ ಗೆಲ್ಲುವ ವಿಶ್ವಾಸ
ಉಳಿದಂತೆ ಚಿಕ್ಕೋಡಿ, ಬೆಳಗಾವಿ, ಕಲಬುರಗಿ, ರಾಯಚೂರು, ಬೀದರ್, ಬಳ್ಳಾರಿ, ದಾವಣಗೆರೆ, ಹಾಸನ, ಚಿತ್ರದುರ್ಗ, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಇನ್ನು ಜೆಡಿಎಸ್ ಎರಡು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸ ಲಿದ್ದು, ಕೋಲಾರ ಹಾಗೂ ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.