
ನವದೆಹಲಿ (ಮೇ 01): ಕರ್ನಾಟಕದಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಘನಘೋರ ಕೃತ್ಯದ ಬಗ್ಗೆ ಪ್ರಧಾನಿ ನರೇಂದ್ರಮೋದಿ ಮೌನವಹಿಸಿರುವುದು ನಾಚಿಕೆಗೇಡಿನ ವಿಚಾರವಾಗಿದೆ. ನೂರಾರು ಹೆಣ್ಣುಮಕ್ಕಳನ್ನು ಶೋಷಣೆ ಮಾಡಿದ ವಿಚಾರ ಗೊತ್ತಿದ್ದರೂ ಕೇವಲ ಮತಕ್ಕಾಗಿ ರಾಕ್ಷಸನ ಪರವಾಗಿ ಪ್ರಚಾರ ಮಾಡಿದ್ದು ಯಾಕೆ? ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್‌ನ ಮೂಲಕ ಪೋಸ್ಟ್ ಹಂಚಿಕೊಂಡಿರುವ ರಾಹುಲ್ ಗಾಂಧಿ ಅವರು, ಕರ್ನಾಟಕದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಪ್ರಧಾನಿ ಮೌನವಹಿಸಿರುವುದು ನಾಚಿಕೆಗೇಡಿನ ವಿಚಾರವಾಗಿದೆ. ಈ ಘೋರ ಅಪರಾಧದ ಬಗ್ಗೆ ಪ್ರಧಾನಿ ಮೌನವಹಿಸಿದ್ದು ಯಾಕೆ? ಕೂಡಲೇ ಪ್ರಧಾನಿ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಎಂ ಕೈವಾಡ ಇದೆ; ಎಚ್‌ಡಿ ಕುಮಾರಸ್ವಾಮಿ ಆರೋಪ
ಕರ್ನಾಟಕದಲ್ಲಿ ನಡೆದ ಘಟನೆಯ ಬಗ್ಗೆ ಗೊತ್ತಿದ್ದರೂ ಕೇವಲ ಮತಕ್ಕಾಗಿ ನೂರಾರು ಹೆಣ್ಣು ಮಕ್ಕಳನ್ನು ಶೋಷಿಸುವ ರಾಕ್ಷಸನ ಪರವಾಗಿ ಪ್ರಚಾರ ಮಾಡಿದ್ದು ಯಾಕೆ? ಅಷ್ಟಕ್ಕೂ, ಇಷ್ಟು ದೊಡ್ಡ ಕ್ರಿಮಿನಲ್ ದೇಶದಿಂದ ಹೇಗೆ ಸುಲಭವಾಗಿ ತಪ್ಪಿಸಿಕೊಂಡರು? ಕೈಸರ್‌ಗಂಜ್‌ನಿಂದ ಕರ್ನಾಟಕದವರೆಗೆ ಮತ್ತು ಉನ್ನಾವೊದಿಂದ ಉತ್ತರಾಖಂಡದವರೆಗೆ ಹೆಣ್ಣು ಮಕ್ಕಳ ಅಪರಾಧಿಗಳಿಗೆ ಪ್ರಧಾನಿ ಮೌನ ಬೆಂಬಲ ನೀಡುತ್ತಿರುವುದು ದೇಶಾದ್ಯಂತ ಅಪರಾಧಿಗಳಿಗೆ ಧೈರ್ಯ ತುಂಬುತ್ತಿದೆ. ಇನ್ನು ಎಲ್ಲ ಅಪರಾಧಿಗಳು ಮೋದಿಯವರ 'ರಾಜಕೀಯ ಕುಟುಂಬದ' ಭಾಗವಾಗುವುದು ಕ್ರಿಮಿನಲ್‌ಗಳಿಗೆ 'ಭದ್ರತೆಯ ಖಾತರಿ' ಆಗಿದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.
ಪ್ರಜ್ವಲ್ ನಗ್ನ ವಿಡಿಯೋ ಲೀಕ್ ಮಾಡಿದ್ಯಾರು..? ಕಾಮಕಾಂಡದ ವಿಡಿಯೋ ಮೊದಲು ಸಿಕ್ಕಿದ್ದು ಯಾರಿಗೆ..?
ವಿದೇಶದಿಂದ ಮೇ.3ಕ್ಕೆ ಬೆಂಗಳೂರಿಗೆ ಆಗಮಿಸಲಿರುವ ಪ್ರಜ್ವಲ್ ರೇವಣ್ಣ: ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ನಂತರ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮೇ 3 ಮಧ್ಯರಾತ್ರಿ ಬೆಂಗಳೂರಿನ ಕೆಂಪೇಗೌಡ ಏರ್‌ಫೋರ್ಟ್‌ಗೆ ಪ್ರಜ್ವಲ್ ರೇವಣ್ಣ ಆಗಮಿಸಲಿದ್ದು ಮೇ 4ರಂದು ವಿಚಾರಣೆಗೆ ಹಾಜರಾಗುತ್ತಾರೆ ಎಂಬ ಎಕ್ಸ್ ಕ್ಲೂಸಿವ್ ಮಾಹಿತಿ ಏಷ್ಯಾ ನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ದೇಶಕ್ಕೆ ಮರಳಲು ಲುಪ್ತನಾ ಏರ್‌ಲೈನ್ಸ್ ನಲ್ಲಿ ಟಿಕೆಟ್ ಬುಕ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜರ್ಮನಿಯ ಫ್ರಾಂಕ್‌ಪರ್ಟ್‌ನಲ್ಲಿ ವಿದೇಶಿ ಪ್ರವಾಸದಲ್ಲಿರುವ ಪ್ರಜ್ವಲ್ ರೇವಣ್ಣ ತಮ್ಮ ವಕೀಲರ ಜೊತೆ ಸಂಪರ್ಕ ಸಾಧಿಸಿದ್ದು, ತಮ್ಮ ವಿರುದ್ಧ ದಾಖಲಾದ ಪ್ರಕರಣ ರದ್ದುಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಸುವರ್ಣ ನ್ಯೂಸ್‌ಗೆ ಮಾಹಿತಿ ಸಿಕ್ಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.