ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿ ನಮಗೆ ಗೊತ್ತಿಲ್ಲ: ಜಿಟಿ ದೇವೇಗೌಡ

By Ravi Janekal  |  First Published May 16, 2024, 12:07 PM IST

ಪ್ರಜ್ವಲ್ ಎಲ್ಲಿದ್ದಾರೆ ಎಂಬ ಮಾಹಿತಿ ನಮಗೆ ಗೊತ್ತಿಲ್ಲ. ಕುಟುಂಬಸ್ಥರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದು ಜೆಡಿಎಸ್ ಶಾಸಕ ಜಿಟಿ ದೇವೇಗೌಡ ತಿಳಿಸಿದರು


ಮೈಸೂರು (ಮೇ.16): ಶ್ರೀಕಂಠೇಗೌಡ ಜನತಾ ಪಕ್ಷದ ಕಟ್ಟಾಳು. ದೇವೇಗೌಡರು, ಕುಮಾರಸ್ವಾಮಿಯ ಅಪ್ಪಟ ಶಿಷ್ಯ. ಶ್ರೀಕಂಠೇಗೌಡರ ಮುಂದಾಳತ್ವದಲ್ಲಿಯೇ ಈ ಚುನಾವಣೆ ನಡೆಯತ್ತೆ. ಯಾರೂ ಅನುಮಾನ ಪಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಶಾಸಕ ಜಿಟಿ ದೇವೇಗೌಡ ತಿಳಿಸಿದರು.

ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಟಿಕೆಟ್ ಗೊಂದಲ ವಿಚಾರ ಸಂಬಂಧ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿಜಯೇಂದ್ರ ಅವ್ರು ಬರಬೇಕಿತ್ತು. ಅನಿವಾರ್ಯ ಕಾರಣದಿಂದ ಬಂದಿಲ್ಲ. ರಾಘವೇಂದ್ರ, ಆರ್.ಅಶೋಕ್ ಬರ್ತಾರೆ. ಸಣ್ಣ ವ್ಯತ್ಯಾಸದಿಂದ ನಿಂಗರಾಜ್ ಗೌಡಗೆ ಟಿಕೆಟ್ ಘೋಷಣೆ ಆಗಿತ್ತು ಅಷ್ಟೇ. ಈಗ ವಿವೇಕನಂದ ಪರ ಎಲ್ಲರೂ ಕೆಲಸ ಮಾಡ್ತಾರೆ. ಶ್ರೀಕಂಠೇಗೌಡರೇ ಚುನಾವಣೆ ಜವಾಬ್ದಾರಿ ತೆಗೆದುಕೊಂಡು ಚುನಾವಣೆಯಲ್ಲಿ ವಿವೇಕಾನಂದರನ್ನು ಗೆಲ್ಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Tap to resize

Latest Videos

undefined

ಬೆಂಗಳೂರು ನಗರ ಪದವೀದರ ಕ್ಷೇತ್ರ ವಿಧಾನ ಪರಿಷತ್ ಚುನಾವಣೆ; ಬಿಜೆಪಿಗೆ ಬಂಡಾಯದ ಬಿಸಿ!

ಇನ್ನು ಹಾಸನ ಪೆನ್‌ಡ್ರೈವ್ ಪ್ರಕರಣದ ಬಳಿಕ ಸಂಸದ ಪ್ರಜ್ವಲ್ ರೇವಣ್ಣ ತಲೆ ಮರೆಸಿಕೊಂಡಿರುವ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಅವರು, ನಿಜಕ್ಕೂ ಪ್ರಜ್ವಲ್ ಎಲ್ಲಿದ್ದಾರೆ ಎಂಬ ಮಾಹಿತಿ ನಮಗೆ ಗೊತ್ತಿಲ್ಲ. ಕುಟುಂಬಸ್ಥರ ಸಂಪರ್ಕಕ್ಕೂ ಸಿಕ್ಕಿಲ್ಲ. ರಾಜ್ಯ ಸರ್ಕಾರವೇ ಬ್ಲೂ ಕಾರ್ನರ್ ನೋಟಿಸ್ ನೀಡಿದೆ.ಎಸ್ ಐಟಿ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಈ ಕೇಸ್ ಸಿಬಿಐ ವಹಿಸೊಲ್ಲ ಅಂತ ಸಿಎಂ ಈಗಾಗಲೇ ಹೇಳಿದ್ದಾರೆ. ನಾವು ಕಿಡ್ನಾಪ್ ಪ್ರಕರಣದಲ್ಲಿ ರೇವಣ್ಣ(HD Revanna) ಬಂಧಿಸಿದ್ದ ವಿರುದ್ಧ ಪ್ರತಿಭಟನೆ ಮಾಡಿದ್ದೆವು. ಆದರೆ ಪ್ರಜ್ವಲ್ ರೇವಣ್ಣ(Prajwal Revanna) ಪರವಾಗಿ ನಾವು ಪ್ರೊಟೆಸ್ಟ್ ಮಾಡಿಲ್ಲ.

ವಿಧಾನ ಪರಿಷತ್‌ ಚುನಾವಣೆ: ಗೊಂದಲದ ಗೂಡಾದ ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಟಿಕೆಟ್‌

ತಮಿಳುನಾಡು ಸೇರಿದಂತೆ ಇತರೆ ಕಡೆ ಪೆನ್ ಡ್ರೈವ್(Hassan pendrive) ತಯಾರಿಸಿದ್ದಾರೆ ಹೀಗಾಗಿ ಈ ಪ್ರಕರಣವನ್ನ ಸಿಬಿಐಗೆ ಕೊಡಿ ಅಂತ ಹೇಳಿದ್ದೇವೆ. ಆದರೆ ಎಸ್‌ಐಟಿ ಅಧಿಕಾರಿಗಳು ತನಿಖೆ ಮಾಡಿ ಸತ್ಯಾಸತ್ಯತೆ ಬಯಲಿಗೆ ತರುತ್ತಾರೆ. ಈ ಪ್ರಕರಣದಲ್ಲಿ ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗುತ್ತೆ ಎಂದರು.

click me!