ಲೋಕಸಭೆ ಚುನಾವಣೆಗೆ ಪ್ರಕಾಶ ಹುಕ್ಕೇರಿ ಸ್ಪರ್ಧಿಸಲು ತಿಳಿಸಿರುವೆ: ಸಿಎಂ ಸಿದ್ದರಾಮಯ್ಯ

By Kannadaprabha News  |  First Published Jan 19, 2024, 7:43 AM IST

ಅಭಿವೃದ್ಧಿ ಹಾಗೂ ಜನಪರ ಕಾರ್ಯಗಳ ಮೂಲಕ ರಾಜಕಾರಣ ಮಾಡುತ್ತಿರುವ ವಿಧಾನ ಪರಿಷತ್‌ ಸದಸ್ಯ ಪ್ರಕಾಶ ಹುಕ್ಕೇರಿ ಕಾರ್ಯ ಶ್ಲಾಘನೀಯ. ಅವರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 


ಬೆಳಗಾವಿ (ಜ.19): ಅಭಿವೃದ್ಧಿ ಹಾಗೂ ಜನಪರ ಕಾರ್ಯಗಳ ಮೂಲಕ ರಾಜಕಾರಣ ಮಾಡುತ್ತಿರುವ ವಿಧಾನ ಪರಿಷತ್‌ ಸದಸ್ಯ ಪ್ರಕಾಶ ಹುಕ್ಕೇರಿ ಕಾರ್ಯ ಶ್ಲಾಘನೀಯ. ಅವರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಖಾಸಗಿ ಹೋಟೆಲಿನಲ್ಲಿ ವಿಧಾನಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರ ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ ಜಿಲ್ಲೆಯ ಒಟ್ಟು 88 ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳಿಗೆ ಲ್ಯಾಪ್‌ಟಾಪ್ ಮತ್ತು ಕಲರ್ ಪ್ರಿಂಟರ್‌ಗಳನ್ನು ವಿತರಿಸಿ ಮಾತನಾಡಿದರು.

ಪ್ರಕಾಶ ಹುಕ್ಕೇರಿ ಗ್ರಾ.ಪಂ, ಜಿ.ಪಂ ಸದಸ್ಯರಾಗಿ ತಮ್ಮ ರಾಜಕೀಯ ಜೀವನ ಪ್ರಾರಂಭಿಸಿ ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಸಚಿವರಿದ್ದ ಸಮಯದಲ್ಲಿ ಅಭಿವೃದ್ಧಿ ಕೆಲಸಗಳನ್ನು ಇಟ್ಟುಕೊಂಡೇ ನಮ್ಮ ಬಳಿ ಬರುತ್ತಿದ್ದರು. ಕೆಲಸ ಆಗದಿದ್ದರೆ ವಿಪರೀತ ಸಿಟ್ಟಾಗಿ ರಾಜೀನಾಮೆ ಕೊಡುತ್ತೇನೆ ಎಂದು ಹೆದರಿಸುತ್ತಿದ್ದರು. ಇದು ಅವರಿಗಿರುವ ಜನಪರ ಕಾಳಜಿಗೆ ಸಾಕ್ಷಿಯಾಗಿದೆ ಎಂದರು. ಪ್ರಕಾಶ ಹುಕ್ಕೇರಿ ಲೋಕಸಭಾ ಸದಸ್ಯರೂ ಆಗಿದ್ದರು. ಶಿಕ್ಷಕರ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಯೋಚನೆ ಮಾಡಿ ನಿರ್ಧರಿಸುವಂತೆ ನಾನೂ ಸಲಹೆ ನೀಡಿದ್ದೆ.

Tap to resize

Latest Videos

ಅಲ್ಲೂ ಸಹ ಗೆದ್ದು ತೋರಿಸಿದ್ದಾರೆ. ಜನಪರವಾಗಿ ಕೆಲಸ ಮಾಡುವುದರ ಜತೆಗೆ ಚುನಾವಣೆಯಲ್ಲಿ ಗೆಲ್ಲುವ ಕಲೆಯೂ ಅವರಿಗೆ ಗೊತ್ತಿದೆ. ಆದ್ದರಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ತಿಳಿಸಿದ್ದೇನೆ ಎಂದು ಹೇಳಿದರು. ಪ್ರಕಾಶ ಹುಕ್ಕೇರಿ ಮಾತನಾಡಿ, ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಈವರೆಗೂ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನಾನು ಸ್ಪರ್ಧಿಸಲು ಆಸಕ್ತಿ ತೋರಿದಾಗ ಅನೇಕರು ಸ್ಪರ್ಧೆ ಬೇಡ ಎಂದು ತಿಳಿಸಿದ್ದರು. 

ಕಡಿಮೆ ವಿದ್ಯುತ್‌ ಬಳಕೆದಾರರಿಗೆ ಗೃಹಜ್ಯೋತಿ ಅಡಿ ಹೆಚ್ಚು ಯುನಿಟ್‌: ಸಚಿವ ಎಚ್‌.ಕೆ.ಪಾಟೀಲ್‌

ಆದರೆ, ವಿಧಾನಪರಿಷತ್ ಸದಸ್ಯನಾಗಿ ಆಯ್ಕೆಯಾದ ಬಳಿಕ ನನ್ನ ಮಾತೋಶ್ರೀಯವರ ಹೆಸರಿನ ಫೌಂಡೇಶನ್ ಹಾಗೂ ಸರ್ಕಾರದ ಮೂಲಕ ಶಿಕ್ಷಕರ ಕ್ಷೇತ್ರದಲ್ಲಿ ₹11 ಕೋಟಿ ಮೌಲ್ಯದ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. 2163 ಶಿಕ್ಷಕರ ನೇಮಕಾತಿಯಾಗಿದೆ. ನನಗೆ ಟಿಕೆಟ್ ನೀಡಿದ ಪಕ್ಷದ ಮುಖಂಡರ ವಿಶ್ವಾಸ ಉಳಿಸಿಕೊಂಡಿದ್ದೇನೆ ಎಂದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ, ಶಾಸಕ ಅಶೋಕ ಪಟ್ಟಣ, ಗಣೇಶ ಹುಕ್ಕೇರಿ, ಆಸೀಫ್‌ (ರಾಜು) ಸೇಠ್, ಮಹೇಂದ್ರ ತಮ್ಮಣ್ಣವರ್‌, ಶಿಕ್ಷಕರ ಸಂಘದ ರಾಮು ಗುಗವಾಡ ಸೇರಿದಂತೆ ಮೊದಲಾದವರು ಇದ್ದರು.

click me!