ರಾಹುಲ್ ಗಾಂಧಿ ಪಾರ್ಟ್ ಟೈಮ್‌ ರಾಜಕಾರಣಿ: ಪ್ರಲ್ಹಾದ್‌ ಜೋಶಿ ಟೀಕೆ

Kannadaprabha News   | Kannada Prabha
Published : Jul 06, 2025, 06:55 AM IST
Pralhad joshi

ಸಾರಾಂಶ

ರಾಹುಲ್ ಗಾಂಧಿಗೆ ಸುಂಕ ಅಂದರೆ ಏನು, ನೀತಿ ಅಂದರೇನು ಗೊತ್ತಿಲ್ಲ. ಬರೆದು ಕೊಟ್ಟದ್ದನ್ನು ಓದುತ್ತಾರೆ. ರಾಹುಲ್ ಗಾಂಧಿ ಪಾರ್ಟ್ ಟೈಮ್ ರಾಜಕಾರಣಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಟೀಕಿಸಿದರು.

ಹಾವೇರಿ (ಜು.06): ರಾಹುಲ್ ಗಾಂಧಿಗೆ ಸುಂಕ ಅಂದರೆ ಏನು, ನೀತಿ ಅಂದರೇನು ಗೊತ್ತಿಲ್ಲ. ಬರೆದು ಕೊಟ್ಟದ್ದನ್ನು ಓದುತ್ತಾರೆ. ರಾಹುಲ್ ಗಾಂಧಿ ಪಾರ್ಟ್ ಟೈಮ್ ರಾಜಕಾರಣಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಟೀಕಿಸಿದರು. ಪ್ರಧಾನಿ ನರೇಂದ್ರ ಮೋದಿ ಅಮೆರಿಕದ ಅಧ್ಯಕ್ಷ ಟ್ರಂಪ್ ಹೇಳಿದಂತೆ ಕೇಳುತ್ತಾರೆ ಎಂಬ ರಾಹುಲ್ ಗಾಂಧಿ ಹೇಳಿಕೆ ಕುರಿತು ಶನಿವಾರ ಮಾಧ್ಯಮದ ಜತೆ ಪ್ರತಿಕ್ರಿಯಿಸಿ, ಅವರಿಂದ ಇನ್ನೇನು ನಿರೀಕ್ಷೆ ಮಾಡಲು ಆಗುತ್ತದೆ. ಅಂತಾರಾಷ್ಟ್ರೀಯ ಸಂಬಂಧಗಳ ಬಗ್ಗೆ ಅವರಿಗೆ ಏನೂ ಗೊತ್ತಿಲ್ಲ. ಅವರ ಮಾತನ್ನು ಗಂಭೀರವಾಗಿ ಪರಿಗಣಿಸಲ್ಲ ಎಂದರು. ಇನ್ನು, ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ವಿಚಾರದಲ್ಲಿ ಗೊಂದಲ ಇಲ್ಲ. ಬೂತ್ ಮಟ್ಟದಿಂದ ಮಂಡಲ, ಮಂಡಲದಿಂದ ಜಿಲ್ಲೆ, ಜಿಲ್ಲೆಯಂದ ರಾಜ್ಯಾಧ್ಯಕ್ಷರ ನೇಮಕ ಮಾಡಲಾಗುತ್ತದೆ ಎಂದರು.

‘ಕೈ’ಗೆ ಶಕ್ತಿ ಇದ್ದರೆ ತ.ನಾಡನ್ನು ಮೇಕೆದಾಟುಗೆ ಒಪ್ಪಿಸಲಿ: ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತಮ್ಮ ಮೈತ್ರಿ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಲಿ. ನಾನು ಐದೇ ನಿಮಿಷದಲ್ಲಿ ಪ್ರಧಾನಮಂತ್ರಿಗಳ ಒಪ್ಪಿಗೆ ಕೊಡಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸವಾಲು ಹಾಕಿದರು. ಅಂತಾರಾಜ್ಯ ನದಿ ವಿವಾದಗಳಲ್ಲಿ ಸಂಬಂಧಿಸಿದ ರಾಜ್ಯ ಸರ್ಕಾರಗಳು ಒಪ್ಪದೇ ಇರುವುದೇ ಸಮಸ್ಯೆಯಾಗುತ್ತಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರು ಸರಿಯಾಗಿಯೇ ಹೇಳಿದ್ದಾರೆ. ಮೇಕೆದಾಟು ವಿಚಾರವಾಗಿ ಇವರು ಪಾದಯಾತ್ರೆ ಮಾಡಿದ್ದರಲ್ಲವೇ? ಇವರಿಗೆ ಆಗ ಗೊತ್ತಿರಲಿಲ್ಲವೇ ಎಂದು ಪ್ರಶ್ನಿಸಿದರು.

ಕಾವೇರಿ, ಕೃಷ್ಣಾ ವಿವಾದ ರಾಜ್ಯ ಸರ್ಕಾರಗಳು ಒಪ್ಪದೇ ಇರುವುದಕ್ಕೆ ಬಗೆಹರಿದಿಲ್ಲ. ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಇದೆ. ಮೇಕೆದಾಟುವಿನಿಂದ ತಮಿಳುನಾಡಿಗೆ ಏನೂ ತೊಂದರೆ ಆಗಲ್ಲ. ನಾವು ನೀರು ತಡೆದು ಮತ್ತೆ ಅವರಿಗೇ ಬಿಡುತ್ತೇವೆ. ಡಿಎಂಕೆ ಸರ್ಕಾರದಲ್ಲಿ ಕಾಂಗ್ರೆಸ್ ಮಂತ್ರಿಗಳಿದ್ದು, ಅವರು ಸಹಕಾರ ಕೊಡಬೇಕು. ಎರಡೂ ರಾಜ್ಯ ಸರ್ಕಾರಗಳು ಒಪ್ಪಬೇಕು. ಟ್ರಿಬ್ಯುನಲ್ ಕಾನೂನಿನಲ್ಲಿ ಬದಲಾವಣೆ ತಂದಿದ್ದೇವೆ. ಒಂದೇ ಟ್ರಿಬ್ಯುನಲ್ ಮಾಡಿ ಬೆಂಚ್‌ಗಳನ್ನು ಮಾಡಿ ಕಾಲಮಿತಿಯಲ್ಲಿ ಆಗುವಂತೆ ಕಾನೂನು ಮಾಡಿದ್ದೇವೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ವಿಚಾರದಲ್ಲಿ ಗೊಂದಲ ಇಲ್ಲ. ಇಡೀ ದೇಶದಲ್ಲಿ ಸದಸ್ಯತ್ವ ಅಭಿಯಾನ ನಡೆದಿದೆ. ಇದನ್ನ ಸಂಘಟನಾ ಪರ್ವವೆಂದು ಕರೆಯುತ್ತೇವೆ. ಬೂತ್ ಮಟ್ಟದಿಂದ ಮಂಡಲ, ಮಂಡಲದಿಂದ ಜಿಲ್ಲೆ, ಜಿಲ್ಲೆಯಂದ ರಾಜ್ಯಾಧ್ಯಕ್ಷರ ನೇಮಕ ಮಾಡಲಾಗುತ್ತದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಅಮೆರಿಕದ ಅಧ್ಯಕ್ಷ ಟ್ರಂಪ್ ಹೇಳಿದಂತೆ ಕೇಳುತ್ತಾರೆ ಎಂಬ ರಾಹುಲ್ ಗಾಂಧಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿಗೆ ಸುಂಕ ಅಂದರೆ ಏನು, ನೀತಿ ಅಂದರೇನು ಗೊತ್ತಿಲ್ಲ. ಬರೆದು ಕೊಟ್ಟದ್ದನ್ನು ಓದುತ್ತಾರೆ. ರಾಹುಲ್ ಗಾಂಧಿ ಪಾರ್ಟ್ ಟೈಮ್ ರಾಜಕಾರಣಿ. ಅವರಿಂದ ಏನು ನಿರೀಕ್ಷೆ ಮಾಡಲು ಆಗುತ್ತದೆ ಎಂದರು. ರಾಹುಲ್ ಗಾಂಧಿಗೆ ಅಂತಾರಾಷ್ಟ್ರೀಯ ಸಂಬಂಧಗಳ ಬಗ್ಗೆ ಏನೂ ಗೊತ್ತಿಲ್ಲ. ಅವರ ಮಾತು ಗಂಭೀರವಾಗಿ ಪರಿಗಣಿಸಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ಟಾಕ್ಸಿಕ್ ಸಿನಿಮಾ ರಿಲೀಸ್ ಸಮೀಪಿಸುತ್ತಿದ್ದಂತೆ ಐಟಿ ಪ್ರಕರಣದಲ್ಲಿ ನಟ ಯಶ್‌ಗೆ ಹೈಕೋರ್ಟ್ ರಿಲೀಫ್