ಪ್ರಲ್ಹಾದ್ ಜೋಶಿಗೆ ಬಡವರ ಮಾಹಿತಿ ಬೇಕಾಗಿಲ್ಲ: ಸಚಿವ ಶಿವರಾಜ ತಂಗಡಗಿ ಕಿಡಿ

Published : Sep 30, 2025, 10:24 AM IST
Shivaraja tangadagi

ಸಾರಾಂಶ

ಬಡವರು, ಹಿಂದುಳಿದವರ ಸಮೀಕ್ಷೆ ಪ್ರಲ್ಹಾದ್ ಜೋಶಿ ಅವರಿಗೆ ಬೇಕಾಗಿಲ್ಲ. ಈ ಕಾರಣಕ್ಕಾಗಿಯೇ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಸಚಿವ ಶಿವರಾಜ ತಂಗಡಗಿ ಕಿಡಿಕಾರಿದ್ದಾರೆ.

ಕೊಪ್ಪಳ (ಸೆ.30): ಬಡವರು, ಹಿಂದುಳಿದವರ ಸಮೀಕ್ಷೆ ಮತ್ತು ಅವರ ಮಾಹಿತಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಬೇಕಾಗಿಲ್ಲ. ಈ ಕಾರಣಕ್ಕಾಗಿಯೇ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಕಿಡಿಕಾರಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಇನ್ನೂ ಯಾವ ಕಾಲದಲ್ಲಿದ್ದಾರೆ? ಈಗಲೂ ಅವರು ಜೋಶಿಯಾಗಿಯೇ ಇರಬೇಕು ಎನ್ನುವಂತಿದ್ದಾರೆ. ಈ ಕಾರಣಕ್ಕಾಗಿಯೇ ಸಮೀಕ್ಷೆ ವಿರೋಧಿಸುತ್ತಿದ್ದಾರೆ.

ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡವರು, ಹಿಂದುಳಿದವರು, ದಲಿತರ ಕುರಿತು ಮಾಹಿತಿ ಸಂಗ್ರಹಿಸಿ, ಏನಾದರೂ ಕೊಡಬೇಕು ಎನ್ನುವ ಚಿಂತನೆ ಮಾಡುತ್ತಿದ್ದಾರೆ ಎಂದರು. ಸಮೀಕ್ಷೆ ಮಾಡುವುದನ್ನು ಯಾಕೆ ವಿರೋಧ ಮಾಡುತ್ತಾರೆ? ಸಮೀಕ್ಷೆಯಲ್ಲಿ ವೈಯಕ್ತಿಕ ಮಾಹಿತಿಯನ್ನೇನೂ ಕೇಳಿಲ್ಲ. ಕೊಠಡಿ ಸಂಖ್ಯೆ ಕೇಳಿದರೆ ತಪ್ಪೇನು ಎಂದು ಪ್ರಶ್ನೆ ಮಾಡಿದರು. ಜೋಶಿ ಅವರ ವೈಯಕ್ತಿಕ ಜೀವನದ ಬಗ್ಗೆ ಏನೂ ಕೇಳಿಲ್ಲ ಎಂದರು. ರಾಜ್ಯಾದ್ಯಂತ ಈಗಾಗಲೇ ಒಂದು ಕೋಟಿ ಜನರ ಸಮೀಕ್ಷೆಯಾಗಿದೆ. 27 ಲಕ್ಷ ಮನೆಗಳ ಸರ್ವೆ ಮಾಡಲಾಗಿದೆ ಎಂದು ಹೇಳಿದರು. ಸಚಿವ ಸಂಪುಟ ಪುನರ್ ರಚನೆಯ ಬಗ್ಗೆ ನನಗೆ ಮಾಹಿತಿ ಇಲ್ಲ. ಅದನ್ನು ದೊಡ್ಡವರು ನೋಡಿಕೊಳ್ಳುತ್ತಾರೆ ಎಂದರು.

ಪೆಂಕಾಕ್‌ ಸಿಲತ್ ಕ್ರೀಡೆಗೆ ರಾಜ್ಯ ಸರ್ಕಾರದ ಮಾನ್ಯತೆ

ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಸಂಸ್ಥೆಯನ್ನು ಹೊಂದಿರುವ ಪೆಂಕಾಕ್ ಸಿಲತ್ ಕ್ರೀಡೆಗೆ ಮುಖ್ಯಮಂತ್ರಿ ಅವರ ಹಂತದಲ್ಲಿ ಬಾಕಿ ಇರುವ ಮಾನ್ಯತೆಯನ್ನು ಜಿಲ್ಲೆಯ ಶಾಸಕರೊಂದಿಗೆ ಸಿಎಂ ಬಳಿ ವಿವರಿಸಿ ಮಾನ್ಯತೆ ಕೊಡಿಸುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಭರವಸೆ ನೀಡಿದರು.

ಭಾರತೀಯ ಪೆಂಕಾಕ್ ಸಿಲತ್ ಮಾರ್ಗದರ್ಶನದಲ್ಲಿ ಕರ್ನಾಟಕ ರಾಜ್ಯ ಪೆಂಕಾಕ್ ಸಿಲತ್ ಅಸೊಸಿಯೇಷನ್, ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಕಾರದಲ್ಲಿ ನಗರದಲ್ಲಿ ನಡೆದ 13ನೇ ರಾಷ್ಟ್ರೀಯ ಪೆಂಕಾಕ್ ಸಿಲತ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ತಾವೂ ಒಬ್ಬ ಕ್ರೀಡಾಪಟುವಾಗಿದ್ದು, ಬರುವ ದಿನಗಳಲ್ಲಿ ಕ್ರೀಡೆಗೆ ಇನ್ನಷ್ಟು ಒತ್ತು ನೀಡಿ ಸಹಕಾರ ಕೊಡಲಾಗುವುದು. ಕ್ರೀಡೆಯಿಂದ ಮನುಷ್ಯ ಹೆಚ್ಚು ಬೆಳಗುತ್ತಾನೆ. ಆರೋಗ್ಯಕ್ಕೂ ಒಳ್ಳೆಯದು. ಜಿಲ್ಲೆಯ ಕ್ರೀಡಾಪಟುಗಳು ಇನ್ನಷ್ಟು ಸಾಧನೆ ಮಾಡಲಿ ಎಂದರು.

ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಮಾತನಾಡಿ, ರಾಷ್ಟ್ರ 33 ರಾಜ್ಯಗಳ 1500 ಜನರು ಕೊಪ್ಪಳಕ್ಕೆ ಬಂದಿರುವುದು ವಿಸ್ಮಯ ತಂದಿದೆ ಎಂದರು.ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಮಹಾಂತೇಶ ಪಾಟೀಲ್ ಮಾತನಾಡಿ, ಇಡೀ ದೇಶವೇ ಇಂದು ಕೊಪ್ಪಳದಲ್ಲಿ ನಿಂತ ಹಾಗೆ ಭಾಸವಾಗುತ್ತಿದೆ. ಇಷ್ಟು ಜನರನ್ನು ಕರೆಸಿ ಕ್ರೀಡಾಕೂಟ ನಡೆಸಿರುವುದು ಸಾಮಾನ್ಯವಲ್ಲ. ಬಹುಭಾಷೆ, ಬಹುಸಂಸ್ಕೃತಿ, ಬಹು ಆಯಾಮದ ಭಾರತಕ್ಕೆ ಕೊಪ್ಪಳವನ್ನು ಪರಿಚಯಿಸಿದ ಸಂಘಟಕರು ಅಭಿನಂದನಾರ್ಹರು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!