ನಿತಿನ್ ಗಡ್ಕರಿಯಿಂದ ದೇಶದಲ್ಲಿ ಬಹುದೊಡ್ಡ ರಸ್ತೆ ಕ್ರಾಂತಿ: ಪ್ರಲ್ಹಾದ್‌ ಜೋಶಿ

Kannadaprabha News   | Kannada Prabha
Published : Jul 15, 2025, 07:40 AM IST
Pralhad joshi

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ಸಚಿವ ನಿತಿನ್ ಗಡ್ಕರಿ ಅವರು ಈ ದೇಶದಲ್ಲಿ ಬಹುದೊಡ್ಡ ರಸ್ತೆ ಕ್ರಾಂತಿ ನಿರ್ಮಾಣ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ (ಜು.15): ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ಸಚಿವ ನಿತಿನ್ ಗಡ್ಕರಿ ಅವರು ಈ ದೇಶದಲ್ಲಿ ಬಹುದೊಡ್ಡ ರಸ್ತೆ ಕ್ರಾಂತಿ ನಿರ್ಮಾಣ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಸಾಗರದಲ್ಲಿ ನಡೆದ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಇವತ್ತು ಅವರು ಗಡ್ಕರಿ ಆಗಿ ಉಳಿದಿಲ್ಲ, ರೋಡ್ಕರಿಯಾಗಿ ಉಳಿದಿದ್ದಾರೆ. ಮ್ಯಾನ್ ಆಫ್‌ ನ್ಯಾಷನಲ್ ಹೈವೇ ಅಂತ ಕರೆಯುವುದಾದರೆ ಸಚಿವ ನಿತಿನ್ ಗಡ್ಕರಿ ಅವರನ್ನು ಕರೆಯಬೇಕು. ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಹೋರಾಟಕ್ಕೆ ಬಹುದೊಡ್ಡ ಇತಿಹಾಸವಿದೆ. ಹೋರಾಟದ ಪರಿಣಾಮ ಇಂದು ಸೇತುವೆ ನಿರ್ಮಾಣ ಮಾಡಿ ಜನರಿಗೆ ಸಮರ್ಪಿಸಿದ್ದಾರೆ ಎಂದರು.

ಸಿದ್ದು, ಡಿಕೆಶಿಯಿಂದ ಶಾಸಕರ ಕುದುರೆ ವ್ಯಾಪಾರ: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಹೀಗಾಗಿ, ಇಬ್ಬರೂ ನಾಯಕರು ಪರಸ್ಪರರ ಬಣದ ಶಾಸಕರ ಬೆಂಬಲ ಪಡೆಯಲು ಅವರೊಳಗೆ ಕುದುರೆ ವ್ಯಾಪಾರ ಆರಂಭಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ನಾನೇ ಪೂರ್ಣಾವಧಿ ಸಿಎಂ, ಶಿವಕುಮಾರ್ ಅವರಿಗೆ ಹೆಚ್ಚಿನ ಶಾಸಕರ ಬೆಂಬಲವಿಲ್ಲ ಎಂದು ಸಿದ್ದರಾಮಯ್ಯನವರೇ ಬಹಿರಂಗವಾಗಿ ಹೇಳಿದ್ದಾರೆ. ಇನ್ನೊಂದೆಡೆ, ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಡಿಕೆಶಿ, ಶಾಸಕರ ಬಲ ಹೆಚ್ಚಿಸಿಕೊಳ್ಳಲು ಮುಂದಾಗಿದ್ದಾರೆ.

ಹೀಗಾಗಿ, ಇಬ್ಬರೂ ನಾಯಕರು ತಮ್ಮ ಆರ್ಥಿಕ ಶಕ್ತಿ ಬಳಸಿಕೊಂಡು ಶಾಸಕರನ್ನು ಸೆಳೆಯಲು ಯತ್ನಿಸುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿಯಾಗಬೇಕೆಂದು ಡಿ.ಕೆ.ಶಿವಕುಮಾರ್‌ ಪರಸ್ಪರರ ಬಣದ ಶಾಸಕರನ್ನು ಖರೀದಿಸಲು ಯತ್ನಿಸುತ್ತಿದ್ದಾರೆ ಎಂದರು. ಕಾಂಗ್ರೆಸ್‌ನಲ್ಲಿ ಈಗ ಹೈಕಮಾಂಡ್‌ನ ನಿಯಂತ್ರಣ ತಪ್ಪಿದೆ. ಹೆಚ್ಚು ಶಾಸಕರ ಬೆಂಬಲ ತೋರಿಸಿದವರೇ ಸಿಎಂ ಆಗಬಹುದು ಎನ್ನುವ ಮನಸ್ಥಿತಿಯಿಂದ ಈ ರೀತಿಯ ವ್ಯವಹಾರಗಳು ನಡೆಯುತ್ತಿವೆ. ಹೀಗಾಗಿ, ವ್ಯಾಪಾರಕ್ಕೆ ಕುದುರೆಗಳು ತಯಾರಾಗಿವೆ. ಖರೀದಿಗೆ ಅವರಲ್ಲಿಯೇ ಸ್ಪರ್ಧೆ ನಡೆದಿದೆ. ಇಬ್ಬರ ನಡುವೆ ಕುದುರೆ ವ್ಯಾಪಾರ, ಕತ್ತೆ ವ್ಯಾಪಾರ ನಡೆಯುತ್ತಿದೆ ಎಂದು ಟೀಕಿಸಿದರು.

ಕಾಂಗ್ರೆಸ್‌ನ ಇಬ್ಬರೂ ನಾಯಕರು ಆರ್ಥಿಕವಾಗಿ ಪ್ರಬಲರಾಗಿದ್ದಾರೆ. ಆದ್ದರಿಂದ ನಾವು (ಬಿಜೆಪಿ) ಮಧ್ಯ ಪ್ರವೇಶಿಸಲು ಯಾವುದೇ ಅವಕಾಶವಿಲ್ಲ. ಅಲ್ಲದೆ, ನಾವು ಅಂತಹ ವಿಷಯಗಳಲ್ಲಿ ತೊಡಗಿಸಿಕೊಳ್ಳಲು ಬಯಸುವುದಿಲ್ಲ. ಜನರ ಜನಾದೇಶಕ್ಕೆ ವಿರುದ್ಧವಾಗಿ ಹೋಗಬಾರದು ಎಂಬುದು ಬಿಜೆಪಿಯ ಅಧಿಕೃತ ನಿಲುವು. ಜನಾದೇಶವನ್ನು ಹೊಂದಿರುವ ಕಾಂಗ್ರೆಸ್, ಐದು ವರ್ಷ ಪೂರ್ಣಗೊಳಿಸಬೇಕು ಎಂಬುದು ನಮ್ಮ ನಿಲುವು. ಹೀಗಾಗಿ, ಬಿಜೆಪಿ ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದರು.

ಇದೇ ವೇಳೆ, ‘ಬಿಜೆಪಿ ಹೈಕಮಾಂಡ್‌ 55 ಕಾಂಗ್ರೆಸ್‌ ಶಾಸಕರ ಟಾರ್ಗೆಟ್‌ ಲಿಸ್ಟ್‌ ಮಾಡಿದೆ’ ಎಂಬ ಕಾಂಗ್ರೆಸ್‌ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿಕೆಗೆ ತಿರುಗೇಟು ನೀಡಿ, ಇ.ಡಿ.ಲಿಸ್ಟ್‌ನಲ್ಲಿ ಅವರ ಹೆಸರು ಬರುತ್ತದೆ ಎಂದರೆ ಅವರು ಏನಾದರೂ ತಪ್ಪು ಮಾಡಿದ್ದಾರೆ ಅಂತ ಅರ್ಥ. ಅವ್ಯವಹಾರ, ಭ್ರಷ್ಟಾಚಾರ ಮಾಡಿದವರಷ್ಟೇ ಇ.ಡಿ. ದಾಳಿಗೆ ಸಿಲುಕುತ್ತಾರೆ. ಅವರು ಸುಮ್ಮನೆ 55 ಶಾಸಕರು ಅಂತ ಹೇಳಿ ವಿಷಯ ಡೈವರ್ಟ್ ಮಾಡುತ್ತಿದ್ದಾರೆ. ಅವರ ಆರೋಪ ಸುಳ್ಳು. ಅವರ ನೂನ್ಯತೆಗಳನ್ನು ಎತ್ತಿ ಹಿಡಿದು ಹೋರಾಟ ನಡೆಸಲು ನಮ್ಮ ನಾಯಕರಿಗೆ ಸೂಚನೆ ನೀಡಿದ್ದೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ