
ಬೆಂಗಳೂರು(ಜು.17): ಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakumar) ಅವರನ್ನು ಯಾರೂ ಜೈಲಿಗೆ ಕಳಿಸುತ್ತಿಲ್ಲ. ಪ್ರಾಮಾಣಿಕರಾಗಿದ್ದರೆ ಅವರಿಗೆ ಯಾಕೆ ಅದರ ಭಯ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ.
ಅವರ ಹೇಳಿಕೆಗಳೆಲ್ಲವೂ ಜನರ ಅನುಕಂಪ ಗಿಟ್ಟಿಸಿಕೊಳ್ಳುವ ಒಂದು ಪ್ರಯತ್ನ ಎಂದೂ ತೀಕ್ಷ್ಣವಾಗಿ ಹೇಳಿದ್ದಾರೆ. ಜೈಲಿಗೆ ಕಳುಹಿಸುವ ಸಂಕಲ್ಪ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಪರಾಧ ಮಾಡಿದವರು ಮಾತ್ರ ಜೈಲಿಗೆ ಹೋಗುತ್ತಾರೆ. ಹಾಗಾದರೆ ಶಿವಕುಮಾರ್ ಏನು ತಪ್ಪು ಮಾಡಿದ್ದಾರಾ? ಭ್ರಷ್ಟಾಚಾರ ಎಸಗಿದ್ದಾರಾ? ವಿನಾಕಾರಣ ಅವರಿಗೇಕೆ ಜೈಲಿಗೆ ಹೋಗುವ ಭಯ? ಈಗೇಕೆ ಆ ಬಗ್ಗೆ ಮಾತನಾಡುತ್ತಿದ್ದೀರಿ ಎಂದರು. ಭ್ರಷ್ಟಾಚಾರ ಮತ್ತು ತಪ್ಪು ಮಾಡಿದ ಯಾರೇ ಆಗಲಿ ಜೈಲಿಗೆ ಹೋಗುತ್ತಾರೆ. ನಾವೇನೂ ಅವರನ್ನು ಜೈಲಿಗೆ ಕಳಿಸಲು ನೋಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: Bidadi Township Row: ಹೆಚ್‌ಡಿಕೆ ಪ್ರಾರಂಭಿಸಿದ್ದರೆ ಡಿಕೆಶಿಗೆ ಈ ಯೋಜನೆ ಮೇಲೆ ಏಕಿಷ್ಟು ಪ್ರೀತಿ?
ಅವರು ತಪ್ಪು ಮಾಡಿ, ಭ್ರಷ್ಟಾಚಾರ ಎಸಗಿ ಜೈಲಿಗೆ ಹೋದರೆ ಯಾರೂ ಏನೂ ಮಾಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡದಿ ಟೌನ್‌ಶಿಪ್ ಕುರಿತಾಗಿ ಇಷ್ಟೊಂದು ಆಸಕ್ತಿ ತೋರಿಸಿದ್ದಿಲ್ಲ. ಆದರೆ ಅವರಿಗಿಲ್ಲದ ಆಸಕ್ತಿ ಇವರಿಗೇಕೆ ಬಂತು? ಅಂದರೆ ಇದರಲ್ಲೇನೋ ಡೀಲ್ ಆಗಿದೆ ಎಂಬ ಸಂಶಯ ಬರುತ್ತದೆ ಅಲ್ಲವೇ? ಈ ಬಗ್ಗೆ ಏಕೆ ಉತ್ತರಿಸುತ್ತಿಲ್ಲ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆರೋಪಕ್ಕೆ ಸ್ಪಷ್ಟನೆ ಕೊಡುವುದು ಬಿಟ್ಟು ಅವರ ಮೇಲೇಕೆ ರೇಗಾಡುತ್ತಿದ್ದೀರಿ ಎಂದು ಜೋಶಿ ತರಾಟೆಗೆ ತೆಗೆದುಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.