
ಹುಬ್ಬಳ್ಳಿ, (ಜೂನ್.13): ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕೂಗು ಜೋರಾಗುತ್ತಿದೆ. ಇದೇ ರೀತಿ ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬದಲಾವಣೆ ಬಗ್ಗೆ ಮಾತುಗಳು ಕೇಳಿಬರುತ್ತಿವೆ.
ಇನ್ನು ಇದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದು, ಯೋಗಿ ಆದಿತ್ಯನಾಥ್ ಬದಲಾವಣೆ ಕೇವಲ ಊಹಾಪೋಹವಷ್ಟೇ. ಉತ್ತರ ಪ್ರದೇಶ ಸಿಎಂ ಯೋಗಿ ಒಳ್ಳೆಯ ನಾಯಕರಾಗಿದ್ದಾರೆ. ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಉತ್ತರ ಪ್ರದೇಶದಲ್ಲಿ ಯೋಗಿ ನಾಯಕತ್ವ ಅಬಾಧಿತ!
ಪ್ರಧಾನಿ ಮೋದಿ ಅವರನ್ನು ಆದಿತ್ಯನಾಥ್ ಭೇಟಿಯಾಗಿದ್ದಾರೆ. ಭೇಟಿಯಾದ ವಿಚಾರಕ್ಕೆ ಸಿಎಂ ಬದಲಾವಣೆ ಎಂಬ ಚರ್ಚೆಯಾಗುತ್ತಿದೆ. ಇಂತಹ ಚರ್ಚೆಗಳೇ ವಿಚಿತ್ರ ಅನಿಸುತ್ತದೆ ಎಂದರು.
ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ. ನನಗೆ ಮಾಹಿತಿ ಇಲ್ಲ. ಸಂಪುಟ ವಿಸ್ತರಣೆ ಬಗ್ಗೆ ಪ್ರಧಾನಿ ಮೋದಿ ಅವರು ನಿರ್ಧಾರ ಮಾಡುತ್ತಾರೆ. ಯಾವಾಗ ಅವಶ್ಯಕವಿದೆಯೋ ಅವಾಗ ಕೇಂದ್ರದ ನಾಯಕರು ವಿಸ್ತರಣೆ ಮಾಡುತ್ತಾರೆ ಎಂದು ತಿಳಿಸಿದರು.
ಇದೇ ವೇಳೆ ಕಾಂಗ್ರೆಸ್ ನಾಯಕತ್ವದ ಬಗ್ಗೆ ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಎರಡು ವರ್ಷವಾದರೂ ಕಾಂಗ್ರೆಸ್ ನವರಿಗೆ ತಮ್ಮ ಪಕ್ಷದ ಅಧ್ಯಕ್ಷರನ್ನ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಕಾಂಗ್ರೆಸ್‌ನವರು ಕೇವಲ ಬೇಜಾವಾಬ್ದಾರಿತನದ ಹೇಳಿಕೆಗಳನ್ನ ನೀಡುತ್ತಾರೆ ಎಂದು ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.