Lok Sabha Election 2024: ಹಾಸನದಲ್ಲಿ ಕೊನೆಗೂ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಆರಂಭಿಸಿದ ಪ್ರೀತಂ ಗೌಡ

Published : Apr 11, 2024, 10:06 AM IST
Lok Sabha Election 2024: ಹಾಸನದಲ್ಲಿ ಕೊನೆಗೂ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಆರಂಭಿಸಿದ ಪ್ರೀತಂ ಗೌಡ

ಸಾರಾಂಶ

ನನಗೆ ಪ್ರೀತಿ ತೋರಿಸಿದರೆ ಅಚ್ಚುಕಟ್ಟಾಗಿ ಕೆಲಸಮಾಡುತ್ತೇನೆ. ಏನಾದರೂ ಬಲವಂತ ಮಾಡಿದರೆ ರಾಜಕೀಯವನ್ನೇ ಬಿಡುತ್ತೇನೆ. ಒಬ್ಬ ಬಿಜೆಪಿ ಕಾರ್ಯಕರ್ತನಾಗಿ ಮೋದಿ ಅವರು ಪ್ರಧಾನಿ ಆಗಬೇಕು ಎಂದು ಪ್ರಚಾರ ಆರಂಭಿಸಿದ್ದೇನೆ. ನಾಳೆ ಸಿಮೆಂಟ್ ಮಂಜು, ಜಿಲ್ಲಾ ಬಿಜೆಪಿ ಅಧ್ಯಕ್ಷರು ಆಲೂರಿನಲ್ಲಿ ಪ್ರಚಾರ ಮಾಡಲು ಸೂಚನೆ ಕೊಟ್ಟಿದ್ದೇನೆ ಎಂದು ತಿಳಿಸಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ 

ಹಾಸನ(ಏ.11):  ಹೈಕಮಾಂಡ್ ಸೂಚನೆಗೆ ಮಣಿದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ನಗರದ ವಿದ್ಯಾನಗರದಲ್ಲಿ ಬುಧವಾರ ಪ್ರಚಾರ ನಡೆಸಿದರು.  ಮೈತ್ರಿ ಅಭ್ಯರ್ಥಿ ಪರ ಇದೇ ಮೊದಲ ಬಾರಿಗೆ ಬೆಂಬಲಿಗರೊಂದಿಗೆ ಕರಪತ್ರಗಳನ್ನು ಹಂಚುವ ಮೂಲಕ ಮತಯಾಚನೆ ಮಾಡಿದರು. 

ಈ ಮಾಧ್ಯಮದೊಂದಿಗೆ ಮಾತನಾಡಿ, ನನಗೆ ಪ್ರೀತಿ ತೋರಿಸಿದರೆ ಅಚ್ಚುಕಟ್ಟಾಗಿ ಕೆಲಸಮಾಡುತ್ತೇನೆ. ಏನಾದರೂ ಬಲವಂತ ಮಾಡಿದರೆ ರಾಜಕೀಯವನ್ನೇ ಬಿಡುತ್ತೇನೆ. ಒಬ್ಬ ಬಿಜೆಪಿ ಕಾರ್ಯಕರ್ತನಾಗಿ ಮೋದಿ ಅವರು ಪ್ರಧಾನಿ ಆಗಬೇಕು ಎಂದು ಪ್ರಚಾರ ಆರಂಭಿಸಿದ್ದೇನೆ. ನಾಳೆ ಸಿಮೆಂಟ್ ಮಂಜು, ಜಿಲ್ಲಾ ಬಿಜೆಪಿ ಅಧ್ಯಕ್ಷರು ಆಲೂರಿನಲ್ಲಿ ಪ್ರಚಾರ ಮಾಡಲು ಸೂಚನೆ ಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ. 

Lok Sabha Election 2024: ಪ್ರೀತಂಗೆ ಹಾಸನಕ್ಕೆ ಬರಬೇಡಿ ಎಂದಿದ್ದೇನೆ: ರಾಧಾಮೋಹನ್

ನಾವು ಈ ಚುನಾವಣೆಯನ್ನು ಸವಾಲಾಗಿ ತೆಗೆದುಕೊಂಡಿದ್ದೇವೆ. ನಮ್ಮ ಅಭ್ಯರ್ಥಿಗೆ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರಕ್ಕಿಂತ ಒಂದು ಮತವನ್ನು ಹೆಚ್ಚು ಕೊಡಿಸಲು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದೇನೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ