ವಿಧಾನಪರಿಷತ್‌ 7 ಸ್ಥಾನಗಳ ಎಲೆಕ್ಷನ್‌ಗೆ ಚುನಾವಣಾ ಆಯೋಗದ ಸಿದ್ಧತೆ

By Kannadaprabha News  |  First Published Aug 12, 2023, 12:30 AM IST

ನವೆಂಬರ್‌ 6ರಂದು ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನವಾಗಿದೆ. ಮತದಾರರ ಪಟ್ಟಿ ಕರಡು ಸಿದ್ಧಪಡಿಸಲು ನ.20ರಂದು ಕಡೆಯ ದಿನವಾಗಿದ್ದು, ನ.23ರಂದು ಕರಡು ಪಟ್ಟಿಯನ್ನು ಪ್ರಕಟಿಸಬೇಕು. ನ.23ರಿಂದ ಡಿ.9ರವರೆಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನವಾಗಿದೆ. ಡಿ.25ರಂದು ಆಕ್ಷೇಪಣೆಗಳ ವಿಲೇವಾರಿ ನಡೆಯಲಿದೆ. ಡಿ.30ರಂದು ಅಂತಿಮವಾಗಿ ಮತದಾರರ ಪಟ್ಟಿಯನ್ನು ಪ್ರಕಟಿಸಬೇಕು ಎಂದು ತಿಳಿಸಿದ ಚುನಾವಣಾ ಆಯೋಗ 


ಬೆಂಗಳೂರು(ಆ.12): ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಂತೆ ಕೇಂದ್ರ ಚುನಾವಣೆ ಆಯೋಗವು ಸೂಚನೆ ನೀಡಿದ್ದು, ಸೆ.30ರಿಂದ ಮತದಾರರ ನೋಂದಣಿ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಿದೆ.

ನವೆಂಬರ್‌ 6ರಂದು ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನವಾಗಿದೆ. ಮತದಾರರ ಪಟ್ಟಿ ಕರಡು ಸಿದ್ಧಪಡಿಸಲು ನ.20ರಂದು ಕಡೆಯ ದಿನವಾಗಿದ್ದು, ನ.23ರಂದು ಕರಡು ಪಟ್ಟಿಯನ್ನು ಪ್ರಕಟಿಸಬೇಕು. ನ.23ರಿಂದ ಡಿ.9ರವರೆಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನವಾಗಿದೆ. ಡಿ.25ರಂದು ಆಕ್ಷೇಪಣೆಗಳ ವಿಲೇವಾರಿ ನಡೆಯಲಿದೆ. ಡಿ.30ರಂದು ಅಂತಿಮವಾಗಿ ಮತದಾರರ ಪಟ್ಟಿಯನ್ನು ಪ್ರಕಟಿಸಬೇಕು ಎಂದು ಆಯೋಗವು ತಿಳಿಸಿದೆ.

Tap to resize

Latest Videos

ಮರಳು ಮಾಫಿಯಾದಿಂದ ಪೇದೆ ಹತ್ಯೆ: ವಿಧಾನ ಪರಿಷತ್‌ನಲ್ಲಿ ಬಿಜೆಪಿ ಧರಣಿ

2024ರ ಜೂನ್‌ ತಿಂಗಳಲ್ಲಿ ಆರು ಮಂದಿಯ ಸದಸ್ಯತ್ವ ಮುಕ್ತಾಯವಾಗಲಿದೆ. ಜತೆಗೆ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರಿರುವ ಪುಟ್ಟಣ್ಣ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಹೀಗಾಗಿ ಒಟ್ಟು ಏಳು ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಈಶಾನ್ಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಡಾ.ಚಂದ್ರಶೇಖರ್‌ ಬಿ.ಪಾಟೀಲ್‌, ನೈಋುತ್ಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಆಯನೂರು ಮಂಜುನಾಥ್‌, ಬೆಂಗಳೂರು ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಎ.ದೇವೇಗೌಡ, ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಡಾ.ವೈ.ಎ.ನಾರಾಯಣಸ್ವಾಮಿ, ನೈಋುತ್ಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಎಸ್‌.ಎಲ್‌.ಭೋಜೇಗೌಡ, ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಮರಿತಿಬ್ಬೇಗೌಡ ಅವರ ಅವಧಿಯು 2024ರ ಜೂನ್‌ ತಿಂಗಳಿಗೆ ಮುಕ್ತಾಯವಾಗಲಿದ್ದು, ಸಾರ್ವತ್ರಿಕ ಚುನಾವಣೆ ನಡೆಯಲಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಪುಟ್ಟಣ್ಣ ಅವಧಿಯು 2026ರ ನವೆಂಬರ್‌ಗೆ ಮುಕ್ತಾಯವಾಗುತ್ತಿತ್ತು. ಆದರೆ, ಪುಟ್ಟಣ್ಣ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ ಹಿನ್ನೆಲೆಯಲ್ಲಿ ಮೇಲ್ಮನೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಅವರ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.

click me!