ಕರ್ನಾಟಕದಲ್ಲಿ ಮೋದಿ 20 ರ‍್ಯಾಲಿ ಆಯೋಜಿಸಲು ಸಿದ್ಧತೆ: ಸಿಎಂ ಬೊಮ್ಮಾಯಿ

By Kannadaprabha News  |  First Published Apr 21, 2023, 2:30 AM IST

ಏ.24ರಿಂದಲೇ ಮೋದಿಯವರು ರಾಜ್ಯದ ಚುನಾವಣೆಯ ಪ್ರಚಾರಕ್ಕೆ ಧುಮುಕಲಿದ್ದಾರೆ. ಆ ಮೂಲಕ ಕರುನಾಡು ಚುನಾವಣೆಗೆ ಬಿಜೆಪಿ ಪರ ಮತಬೇಟೆ ನಡೆಸಲಿದ್ದಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 


ಕಲಬುರಗಿ(ಏ.21): ರಾಜ್ಯದಲ್ಲಿ ಮತ್ತೊಂದು ಬಾರಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಪಣತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು, ಮುಂಬರುವ ದಿನಗಳಲ್ಲಿ ರಾಜ್ಯದ 20 ಕಡೆ ರ‍್ಯಾಲಿ ನಡೆಸಲಿದ್ದಾರೆ. ರಾಜ್ಯದ ಎಲ್ಲ ಭಾಗಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಮೋದಿಯವರ ಪ್ರಚಾರ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅಫಜಲ್ಪುರದಲ್ಲಿ ಬಿಜೆಪಿ ಅಭ್ಯರ್ಥಿ ಮಾಲೀಕಯ್ಯ ಗುತ್ತೇದಾರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಏ.24ರಿಂದಲೇ ಮೋದಿಯವರು ರಾಜ್ಯದ ಚುನಾವಣೆಯ ಪ್ರಚಾರಕ್ಕೆ ಧುಮುಕಲಿದ್ದಾರೆ. ಆ ಮೂಲಕ ಕರುನಾಡು ಚುನಾವಣೆಗೆ ಬಿಜೆಪಿ ಪರ ಮತಬೇಟೆ ನಡೆಸಲಿದ್ದಾರೆ. ರಾಜ್ಯದ ಎಲ್ಲ ವಿಭಾಗಗಳಲ್ಲಿ, ಜೊತೆಗೆ ಪ್ರಮುಖ ಕ್ಷೇತ್ರಗಳಲ್ಲಿ ಮೋದಿಯವರು ರ‍್ಯಾಲಿ ನಡೆಸಲಿದ್ದಾರೆ. ರ‍್ಯಾಲಿ ಜೊತೆಗೆ ಹಲವೆಡೆ ಬಹಿರಂಗ ಸಭೆ ಉದ್ದೇಶಿಸಿ ಕೂಡ ಮಾತನಾಡಲಿದ್ದಾರೆ. ರಾಜ್ಯದ ಎಲ್ಲ ಭಾಗಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಮೋದಿಯವರ ಪ್ರಚಾರ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

Latest Videos

undefined

ಬಸವಣ್ಣನ ವಿಚಾರಧಾರೆ ಮೇಲೆ ಆರ್‌ಎಸ್‌ಎಸ್ ಬಿಜೆಪಿ ಆಕ್ರಮಣ, ಬೀದರ್‌ನಲ್ಲಿ ರಾಹುಲ್ ವಾಗ್ದಾಳಿ!

ಎಲ್ಲರಿಗಿಂತ ಮೊದಲೇ ತಿಳಿಯುವುದು ಇಲ್ಲೇ

ರಾಜ್ಯದಲ್ಲಿ ಮೋದಿ 20 ರ‍್ಯಾಲಿ ನಡೆಸುವ ಬಗ್ಗೆ ಏ.3ರಂದೇ ಕನ್ನಡಪ್ರಭ ಪ್ರಕಟಿಸಿತ್ತು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

click me!