
ಬೆಂಗಳೂರು(ಜು.04): ಮುಂಬರುವ ಸಾರ್ವತ್ರಿಕ ಚುನಾವಣೆ ಸಂಬಂಧ ಕಾಂಗ್ರೆಸ್ ಪಕ್ಷದಿಂದ ಆಂತರಿಕ ಸಮೀಕ್ಷೆ ನಡೆಸಿದ್ದು, ವರದಿಯಲ್ಲಿ ಪ್ರತಿಯೊಂದು ವಿಧಾನಸಭೆ ಕ್ಷೇತ್ರದ ಕುರಿತ ಧನಾತ್ಮಕ ಹಾಗೂ ಋುಣಾತ್ಮಕ ಅಂಶಗಳ ವಿವರಗಳು ಇವೆ. ಹೀಗಾಗಿ ಹಾಲಿ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳು ನೇರವಾಗಿ ಬಂದರೆ ಕ್ಷೇತ್ರವಾರು ಸಮೀಕ್ಷೆಯ ಸಂಪೂರ್ಣ ಮಾಹಿತಿ ನೀಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಭಾನುವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಪಕ್ಷದ ಆಂತರಿಕ ಸಮೀಕ್ಷೆಯು ಪಕ್ಷದ ಪರವಾಗಿ ಬಂದಿದೆ. ಕ್ಷೇತ್ರವಾರು ಪಕ್ಷಕ್ಕಿರುವ ಸವಾಲುಗಳು ಹಾಗೂ ಪರಿಹಾರಗಳನ್ನೂ ಸಹ ಕೂಲಂಕಷವಾಗಿ ವಿವರಿಸಲಾಗಿದೆ. ಇದರಲ್ಲಿನ ಅಂಶಗಳು ಪಕ್ಷ ಸಂಘಟನೆ ಹಾಗೂ ಕ್ಷೇತ್ರದಲ್ಲಿ ಆಗುತ್ತಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ಮುಂದೆ ಚುನಾವಣೆ ಗೆಲ್ಲಲು ಅನುಕೂಲವಾಗಲಿವೆ. ಹೀಗಾಗಿ ಶಾಸಕರು ಅಥವಾ ಪರಾಜಿತ ಅಭ್ಯರ್ಥಿಗಳು, ಮುಂದೆ ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿಗಳು ನನ್ನ ಬಳಿಗೆ ನೇರವಾಗಿ ಬಂದು ತಮ್ಮ ಕ್ಷೇತ್ರದ ಬಗ್ಗೆ ಚರ್ಚೆ ಮಾಡಬಹುದು ಎಂದು ಆಹ್ವಾನ ನೀಡಿದರು ಎಂದು ಮೂಲಗಳು ತಿಳಿಸಿವೆ.
ರಾಜಿ ಪಂಚಾಯ್ತಿ ಯಶಸ್ವಿ, ಪುತ್ರನೊಂದಿಗೆ ಹಿರಿಯ ನಾಯಕ ವಾಪಸ್ ಕಾಂಗ್ರೆಸ್ ಸೇರ್ಪಡೆ
ನೀವು ವೈಯಕ್ತಿಕವಾಗಿ ಬಂದು ಭೇಟಿ ಆಗಲು ಸಾಧ್ಯವಾಗದಿದ್ದರೆ ನಾನು ಜಿಲ್ಲೆಗೆ ಬಂದಾಗ ಭೇಟಿ ನೀಡಬಹುದು. ಒಟ್ಟಿನಲ್ಲಿ ಸಮೀಕ್ಷೆ ವರದಿಯಲ್ಲಿರುವ ಅಂಶಗಳನ್ನು ತಿಳಿದು ತಮ್ಮ ಕ್ಷೇತ್ರಗಳಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಿಕೊಳ್ಳಬೇಕು. ಇದು ಮುಂದೆ ನಿಮ್ಮ ಗೆಲುವು ತನ್ಮೂಲಕ ಪಕ್ಷದ ಗೆಲುವಿಗೆ ಅನುಕೂಲವಾಗಲಿದೆ ಎಂದು ಸಲಹೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.