ಬೆಳಗಾವಿ: ಕುಡಚಿಯಲ್ಲಿಂದು ಪ್ರಧಾನಿ ಮೋದಿ ಪ್ರಚಾರ Rally

Published : Apr 29, 2023, 05:10 AM IST
ಬೆಳಗಾವಿ: ಕುಡಚಿಯಲ್ಲಿಂದು ಪ್ರಧಾನಿ ಮೋದಿ ಪ್ರಚಾರ Rally

ಸಾರಾಂಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ವಿಧಾನಸಭೆ ಚುನಾವಣೆ ಪ್ರಚಾರ ಕಣ ರಂಗೇರಿದ್ದು, ಏ. 29 ರಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ. ರಾಯಬಾಗ ತಾಲೂಕಿನ ಕುಡಚಿ ಕ್ಷೇತ್ರದ ಕೋಳಿಗುಡ್ಡ ಗ್ರಾಮದ ಹೊರವಲಯದಲ್ಲಿ ಬಿಜೆಪಿ ಬೃಹತ್‌ ಸಮಾವೇಶ ನಡೆಯಲಿದ್ದು, ಪ್ರಧಾನಿ ಮೋದಿ ಅವರು ಚುನಾವಣಾ ಪ್ರಚಾರ ನಡೆಸುವರು.

ಬೆಳಗಾವಿ (ಏ.29) : ಗಡಿ ಜಿಲ್ಲೆ ಬೆಳಗಾವಿಯಲ್ಲಿ ವಿಧಾನಸಭೆ ಚುನಾವಣೆ ಪ್ರಚಾರ ಕಣ ರಂಗೇರಿದ್ದು, ಏ. 29 ರಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ. ರಾಯಬಾಗ ತಾಲೂಕಿನ ಕುಡಚಿ ಕ್ಷೇತ್ರದ ಕೋಳಿಗುಡ್ಡ ಗ್ರಾಮದ ಹೊರವಲಯದಲ್ಲಿ ಬಿಜೆಪಿ ಬೃಹತ್‌ ಸಮಾವೇಶ ನಡೆಯಲಿದ್ದು, ಪ್ರಧಾನಿ ಮೋದಿ ಅವರು ಚುನಾವಣಾ ಪ್ರಚಾರ ನಡೆಸುವರು.

ಚುನಾವಣಾ ಘೋಷಣೆಗೂ ಮೊದಲೇ ಬೆಳಗಾವಿಯಲ್ಲಿ ರಣಕಹಳೆ ಮೊಳಗಿಸಿದ್ದ ಮೋದಿ(Narendra Modi) ಅವರು ಈಗ ಮತ್ತೊಮ್ಮೆ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಮೋದಿ ಅವರ ಚುನಾವಣಾ ಪ್ರಚಾರ(Narendra Modi election campaigning belgum)ಕ್ಕಾಗಿ ಆಯ್ಕೆ ಮಾಡಿಕೊಂಡಿರುವ ಸ್ಥಳಗಳನ್ನು ನೋಡಿದರೆ ಅಲ್ಲಿ ಕೆಲವಾರು ಮಹತ್ವದ ವಿಚಾರಗಳು ಗೋಚರಿಸುತ್ತವೆ. ಎಲ್ಲಿ ಬಿಜೆಪಿ ಪರ ಅಲೆಯಿದೆಯೋ ಅಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದೆ ಗೆಲ್ಲುತ್ತಾರೋ ಅಲ್ಲಿ ಮೋದಿಯವರ ಪ್ರಚಾರ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಬದಲಿಗೆ, ಬಿಜೆಪಿ ಅಲೆಯಿದ್ದೂ, ಆ ಪಕ್ಷದ ಅಭ್ಯರ್ಥಿಗಳು ಸ್ವಲ್ಪ ಅನುಮಾನ ಎಂಬಂತಿರುವ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಸ್ವಲ್ಪ ಪುಶ್‌ ಅಪ್‌ ಕೊಟ್ಟರೂ ಸಾಕು ಅಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂಬಂತಹ ವಾತಾವರಣ ಇರುವಂತಹ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ನಾನು ಸಿಎಂ ಆದರೂ ಬದಲಾಗಲಿಲ್ಲ ಜನ ಸಾಮಾನ್ಯನಾಗೇ ಉಳಿದೆ: ಪ್ರಧಾನಿ ಮೋದಿ

ಅಥಣಿ ಕ್ಷೇತ್ರದ(Athani constituency) ಬಿಜೆಪಿ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಪ್ರಭಾವಿ ಲಿಂಗಾಯತ ನಾಯಕ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ(Laxman savadi) ಅವರು ಬಿಜೆಪಿ ತೊರೆದು, ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿ ಅಥಣಿಯಿಂದ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿದ್ದರು. ಸವದಿ ಅವರು ತಮ್ಮ ಕ್ಷೇತ್ರದಲ್ಲಿ ಅಷ್ಟೇ ಅಲ್ಲದೇ, ಅಕ್ಕ ಪಕ್ಕದ ಕ್ಷೇತ್ರಗಳ ಮೇಲೂ ಬಿಗಿ ಹಿಡಿತ ಹೊಂದಿದ್ದಾರೆ. ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಆಪ್ತ ಮಹೇಶ ಕುಮಟಳ್ಳಿ ಅವರಿಗೆ ಬಿಜೆಪಿ ಟಿಕೆಟ್‌ ಸಿಕ್ಕಿದೆ. ಹಾಗಾಗಿ, ಮೋದಿ ಅವರು ಪ್ರಮುಖವಾಗಿ ಅಥಣಿಯನ್ನು ಗುರಿಯಾಗಿಸಿಕೊಂಡೇ ಕುಡಚಿ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ ಎನ್ನಲಾಗಿದೆ.

ಸವದಿ ವಿರುದ್ಧ ಬಿಜೆಪಿ ನಾಯಕರೆಲ್ಲರೂ ತೊಡೆತಟ್ಟಿದ್ದಾರೆ. ಕೇಸರಿ ಪಡೆಯ ನಾಯಕರೆಲ್ಲರೂ ಸವದಿ ವಿರುದ್ಧ ಮುಗಿಬಿದ್ದಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಲಿಂಗಾಯತ ಅಸ್ತ್ರ ಬಳಕೆ ಮಾಡಿದ್ದಾರೆ. ಇದೀಗ ಬಿಜೆಪಿ ನಾಯಕರು ಮೋದಿ ಅಸ್ತ್ರ ಪ್ರಯೋಗಿಸಿದ್ದಾರೆ. ಪ್ರಧಾನಿ ಮೋದಿ ಅವರು ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಅಥಣಿ, ಕುಡಚಿ, ರಾಯಬಾಗ, ತೇರದಾಳ, ಹುಕ್ಕೇರಿ, ಜಮಖಂಡಿ ಸೇರಿದಂತೆ ಮೂರು ಜಿಲ್ಲೆಗಳಲ್ಲಿ ಈ ಬಿಜೆಪಿ ಸಮಾವೇಶದ ಲಾಭ ಆಗುವಂತೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಮೋದಿ ವಿಷ ಸರ್ಪ: ಕಾಂಗ್ರೆಸ್ ಇಂಥ ವಿವಾದಾತ್ಮಕ ಹೇಳಿಕೆ ನೀಡಿದ್ದು ಇದೇ ಮೊದಲಲ್ಲ

ಹಾಗೆ ನೋಡಿದರೆ ಅಥಣಿ ಬಿಜೆಪಿಯ ಕಾರ್ಯಕರ್ತರು ಗೊಂದಲದಲ್ಲಿದ್ದಾರೆ. ಇಷ್ಟುದಿನ ಸವದಿ ಅವರನ್ನು ಬೆಂಬಲಿಸುತ್ತ ಬಂದಿರುವ ಕಾರ್ಯಕರ್ತರು, ಈಗ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಬೇಕೋ? ಸವದಿ ಅವರಿಗೆ ಬೆಂಬಲಿಸಬೇಕೋ? ಎನ್ನುವ ಗೊಂದಲದಲ್ಲಿದ್ದಾರೆ. ಈ ನಡುವೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಥಣಿ ಕ್ಷೇತ್ರದಲ್ಲಿ ಸಕ್ರೀಯರಾಜಕೀಯದಲ್ಲಿತೊಡಗಿದ್ದು, ಕಾಂಗ್ರೆಸ್‌ ಪಕ್ಷದಲ್ಲಿರುವ ನಾಯಕರನ್ನು ಬಿಜೆಪಿಯತ್ತ ಸೆಳೆಯುತ್ತಿದ್ದಾರೆ. ಮೋದಿ ಅವರ ಚುನಾವಣಾ ಪ್ರಚಾರ ರಾರ‍ಯಲಿ ಜಿಲ್ಲೆಯ ಪಕ್ಷದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಾ। ಯತೀಂದ್ರ ವಿರುದ್ಧ ಡಿಕೆಶಿ ಬಣ ಮತ್ತೆ ಬಾಣ
ಮತ್ತೆ ಟಿಪ್ಪು ಜಯಂತಿ ವಿವಾದ ಭುಗಿಲು