ರಾಯಚೂರು: ಪ್ರಧಾನಿ ಮೋದಿ ದೇಶದ ಅಭಿವೃದ್ಧಿಯ ಯಜ್ಞ ಮಾಡುತ್ತಿದ್ದಾರೆ: ಎ ನಾರಾಯಣಸ್ವಾಮಿ

Published : Mar 14, 2023, 07:13 AM IST
ರಾಯಚೂರು: ಪ್ರಧಾನಿ ಮೋದಿ ದೇಶದ ಅಭಿವೃದ್ಧಿಯ ಯಜ್ಞ ಮಾಡುತ್ತಿದ್ದಾರೆ: ಎ ನಾರಾಯಣಸ್ವಾಮಿ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಯ ಯಜ್ಞ ಮಾಡುತ್ತಿದ್ದಾರೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ

ರಾಯ​ಚೂ​ರು (ಮಾ.14) : ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಯ ಯಜ್ಞ ಮಾಡುತ್ತಿದ್ದಾರೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ(A Narayanaswamy) ಅಭಿ​ಪ್ರಾಯ ವ್ಯಕ್ತ​ಪ​ಡಿ​ಸಿ​ದ​ರು.

ಸ್ಥಳೀಯ ಮಹತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮ​ವಾರ ಹಮ್ಮಿಕೊಂಡಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವ ಉದ್ದೇ​ಶೀಸಿ ಮಾತ​ನಾ​ಡಿದ ಅವರು, ದೇಶದಲ್ಲಿ ಕುಡಿಯುವ ನೀರು, ಶೌಚಾಲಯ, ವಸತಿ ಸೌಲಭ್ಯಗಳು ಸೇರಿದಂತೆ ಇನ್ನಿತರ ಹತ್ತು ಹಲವು ಯೋಜನೆಗಳ ಅಕ್ಷಯ ಪಾತ್ರೆಯನ್ನೇ ಸರ್ಕಾರ ತಂದು ಜನರ ಮನೆ ಬಾಗಿಲಿಗೆ ಮುಟ್ಟಿ​ಸುವ ಕೆಲಸ ಮಾಡಿದೆ. ದೇಶದಲ್ಲಿ 11 ಕೋಟಿ ಶೌಚಾಲಯಗಳ ನಿರ್ಮಾಣ ಮಾಡಿದ್ದಾರೆ. 10 ಸಾವಿರ ಕೋಟಿ ಕುಟುಂಬಗಳಿಗೆ ಗ್ಯಾಸ್‌ ವಿತರಣೆ ಮಾಡಲಾಗಿದೆ. ಜನರಿಗೆ ಯಾವುದೇ ಗ್ಯಾರಂಟಿ ನೀಡದೆ ಕಾರ್ಯನಿರ್ವಹಿಸಿದ್ದಾರೆ. ಆದರೆ, ಕಾಂಗ್ರೆಸ್‌ನವರು ಗ್ಯಾರಂಟಿ ಕಾರ್ಡ್‌ ನೀಡಿ ತಮ್ಮನ್ನು ನಂಬುವಂತೆ ಜನರ ಮುಂದೆ ಹೋಗುತ್ತಿದ್ದಾರೆ ಎಂದು ಟೀಕಿಸಿದರು.

 

ಶೀಘ್ರ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ: ಯಡಿಯೂರಪ್ಪ

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj Bommai) ಪ್ರತಿಯೊಂದು ಜಾತಿಗೂ ನಿಗಮ ಸ್ಥಾಪನೆ ಮಾಡಿ, ಅನುದಾನ ಕಲ್ಪಿಸುವ ಕೆಲ​ಸ​ವನ್ನು ಮಾಡಿ​ದ್ದಾ​ರೆ ಎಂದರು.

ಸಚಿವ ಹಾಲ​ಪ್ಪ ಆಚಾರ್‌(Halappa achar) ಮಾತ​ನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ವಾಭಿಮಾನಿ ದೇಶವನ್ನು ಕಟ್ಟುತ್ತಿದ್ದಾರೆ. ಕೋವಿಡ್‌ ಸಂದರ್ಭದಲ್ಲಿ ಜನರ ಮನಸ್ಸನ್ನು ಗಟ್ಟಿಗೊಳಿಸಿ, ಎಲ್ಲರಿಗೂ ಲಸಿಕೆ ನೀಡುವ ಕೆಲಸ ಮಾಡಿದ್ದಾರೆ. 130 ಕೋಟಿ ಜನರ ಜೀವ ಉಳಿಸಲು ಲಸಿಕೆ ಕಂಡು ಹಿಡಿಯಲು ಪ್ರಧಾನಿಯು ವಿಜ್ಞಾನಿಗಳನ್ನು ಪ್ರೋತ್ಸಾಹಿಸಿದರು ಎಂದು ಹೇಳಿದರು.

ರೈತರು ಸ್ವಾಭಿಮಾನದಿಂದ ಬದುಕಲು ಅವರ ಖಾತೆಗೆ ನೇರವಾಗಿ ಸಹಾಯಧನ ಹಾಕುತ್ತಿದ್ದಾರೆ. ಯಾವುದೇ ಕಪ್ಪುಚುಕ್ಕೆ ಇಲ್ಲದೇ ಆಡಳಿತ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ದುಡಿಯುವ ಮಹಿಳೆಯರಿಗೆ ಉಚಿತ ಬಸ್‌ಪಾಸ್‌ ಒದಗಿಸಲು ಈಗಾಗಲೇ ಒಂದು ಸಾವಿರ ಕೋಟಿ ಅನುದಾನ ಒದಗಿಸಿದ್ದಾರೆ ಎಂದು ಹೇಳಿ​ದ​ರು.

ಇಂದು ಹನುಮ ಜನ್ಮಸ್ಥಳ ಅಂಜನಾದ್ರಿಗೆ ಸಿಎಂ ಬಸವರಾಜ ಬೊಮ್ಮಾಯಿ

ಸಮ್ಮೇ​ಳ​ನ​ದಲ್ಲಿ ವಿವಿಧ ಇಲಾಖೆಯಲ್ಲಿರುವ ಯೋಜನೆಗಳ 155 ಫಲಾನುಭವಿಗಳಿಗೆ ಸಾಂಕೇತಿಕವಾಗಿ ಯೋಜನೆಗಳ ಸೌಲಭ್ಯಗಳನ್ನು ನೀಡಲಾಯಿತು. ಜನರಿಗೆ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ನೀಡುವ ನಿಟ್ಟಿನಲ್ಲಿ ರೇಷ್ಮೆ ಇಲಾಖೆ, ಪಶುಪಾಲನೆ ಇಲಾಖೆ, ಕೃಷಿ ಇಲಾಖೆ, ಕಾಮಿಕ ಇಲಾಖೆ, ಆರೋಗ್ಯ ಇಲಾಖೆ, ಡೆ-ನಲ್ಮ್‌, ಸಹಕಾರ ಇಲಾಖೆ, ಮೀನುಗಾರಿಕೆ ಇಲಾಖೆ, ಸಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಸೇರಿದಂತೆ ಒಟ್ಟು 33 ಕ್ಕೂ ಅಧಿಕ ಇಲಾಖಾವಾರು ಮಳಿಗೆಗಳನ್ನು ಸ್ಥಾಪಿಸಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬಂಡವಾಳ ಆಕರ್ಷಣೆಗೆ ರಾಜ್ಯಗಳ ನಡುವೆ ಸ್ಪರ್ಧೆ ಹೆಚ್ಚಾಗಿದೆ: ಸಚಿವ ಎಂ.ಬಿ.ಪಾಟೀಲ್‌
ಬೀಚ್‌ಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ಬಗ್ಗೆ ಚರ್ಚೆ: ಡಿ.ಕೆ.ಶಿವಕುಮಾರ್‌