
ಸುರಪುರ (ಜ.22) : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ರಮದ ಅಭೂತ ಪೂರ್ವ ಯಶಸ್ವಿಗೆ ಕಾರಣಿಭೂತರಾದ ಕಾರ್ಯಕರ್ತರು, ಅಭಿಮಾನಿಗಳಿಗೆ ಹಾಗೂ ಜಿಲ್ಲಾಡಳಿತ ಹಾಗೂ ತಾಲೂಕುಮಟ್ಟದ ಎಲ್ಲಾ ಅಧಿಕಾರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಹಾಗೂ ನನ್ನ ಜನ್ಮ ಧನ್ಯವಾಯಿತು ಎಂದು ಶಾಸಕ ನರಸಿಂಹನಾಯಕ (ರಾಜೂಗೌಡ) ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಕಾರ್ಯಕ್ರಮದಲ್ಲಿ ಅಪಾರವಾದ ಜನಸ್ತೋಮ ಜಮಾವಣೆಗೊಂಡಿತ್ತು. ಸುಮಾರು 4 ಲಕ್ಷಕ್ಕೂ ಅಧಿಕ ಜನರು ಪ್ರಧಾನಿಗಳನ್ನು ಕಣ್ತುಂಬಿಕೊಳ್ಳಲು ಆಗಮಿಸಿದರು. ಯಾವುದೇ ರೀತಿಯ ಅವಘಡಗಳು ಸಂಭವಿಸಿಲ್ಲ. ಅಚ್ಚುಕಟ್ಟಾಗಿ ಎಲ್ಲ ಕಾರ್ಯಕ್ರಮಗಳು ಜರುಗಿದವು ಎಂದರು.
Modi In Yadgiri: ವೋಟ್ ಬ್ಯಾಂಕ್ ರಾಜಕಾರಣ ನಮ್ಮದಲ್ಲ, ಅಭಿವೃದ್ಧಿ ಆಧಾರಿತ ರಾಜಕಾರಣ ಮಾಡಿದ್ದೇವೆ
ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದು, ಪ್ರಧಾನಿಗಳು ಸಂತಸಗೊಂಡಿದ್ದಾರೆ. ಪ್ರಧಾನ ಮಂತ್ರಿಗಳಿಂದ ಕಾರ್ಯಕ್ರಮದ ಯಶಸ್ವಿಯಾಗಿರುವುದಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ವಿವಿಧ ಜಿಲ್ಲೆಗಳ ಜನರು ಸುರಪುರ ತಾಲೂಕಿಗೆ ಆಗಮಿಸಿ ನನ್ನ ಮೇಲಿಟ್ಟಿರುವ ವಿಶ್ವಾಸ ಇಮ್ಮಡಿಗೊಳಿಸಿದೆ. ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆಯಿತ್ತು. ಆದರೆ, ನಾಲ್ಕು ಲಕ್ಷಕ್ಕೂ ಅಧಿಕ ಜನರು ಸೇರಿದ್ದರು. ಜನರೇ ನನ್ನ ಶಕ್ತಿ ಎಂದು ತಿಳಿಸಿದರು.
ವಿಜಯ ಸಂಕಲ್ಪ ಅಭಿಯಾನ(Vijaya sankalpa campaign) 22 ರಿಂದ 29ರವರೆಗೆ ಜರುಗುವ ಕಾರ್ಯಕ್ರಮದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳು ಮತ್ತು ಜನಪರ ಕಾರ್ಯಗಳನ್ನು ಜನರಿಗೆ ತಿಳಿಸಲಾಗುವುದು. ಕ್ಷೇತ್ರದಲ್ಲಿ ಬಿಜೆಪಿ ಡಿಜಿಟಲ್ ಸದಸ್ಯತ್ವ ಅಭಿಯಾನ ನಡೆಸಬೇಕು. ಮೊ: 80000-90009 ಸಂಖ್ಯೆಗೆ ಮಿಸ್ ಕಾಲ್ ನೀಡಿ ಸದಸ್ಯತ್ವ ಹೊಂದಬಹುದಾಗಿದೆ ಹಾಗೂ ಪ್ರಧಾನ ಮಂತ್ರಿಗಳ ಮನ್ ಕೀ ಬಾತ್ ಕಾರ್ಯಕ್ರಮವನ್ನು ಜನರಿಗೆ ತಿಳಿಸಬೇಕು ಎಂದು ತಿಳಿಸಿದರು. ದೇಶದ ಮೊದಲ SCADA Gate ಗೆ ಇಂದು ಪ್ರಧಾನಿ ಮೋದಿ ಚಾಲನೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.