ಕೆಪಿಸಿಸಿ ಸಂವಹನ ವಿಭಾಗಕ್ಕೆ ಪ್ರಿಯಾಂಕ್‌, ಗೂಳಿಗೌಡ ನೇಮಕ

Published : Jul 08, 2022, 09:58 AM IST
ಕೆಪಿಸಿಸಿ ಸಂವಹನ ವಿಭಾಗಕ್ಕೆ  ಪ್ರಿಯಾಂಕ್‌, ಗೂಳಿಗೌಡ ನೇಮಕ

ಸಾರಾಂಶ

ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷರಾಗಿ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಕೆಪಿಸಿಸಿ ಸಂವಹನ ಮತ್ತು ಸಾಮಾಜಿಕ ಜಾಲತಾಣದ ವಿಭಾಗದ ಸಹ ಅಧ್ಯಕ್ಷ ಸ್ಥಾನಕ್ಕೆ ಮನ್ಸೂರ್‌ ಅಲಿ ಖಾನ್‌  

ಬೆಂಗಳೂರು (ಜು.8): ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷರಾಗಿ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಉಪಾಧ್ಯಕ್ಷರನ್ನಾಗಿ ವಿಧಾನಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಅವರನ್ನು ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ.

 

ಕೆಪಿಸಿಸಿ ಸಂವಹನ ಮತ್ತು ಸಾಮಾಜಿಕ ಜಾಲತಾಣದ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಪ್ರಿಯಾಂಕ್‌ ಖರ್ಗೆ, ಸಹ ಅಧ್ಯಕ್ಷ ಸ್ಥಾನಕ್ಕೆ ಮನ್ಸೂರ್‌ ಅಲಿ ಖಾನ್‌, ಮುಖ್ಯ ವಕ್ತಾರ ಹಾಗೂ ಸಂಚಾಲಕರನ್ನಾಗಿ ಪರಿಷತ್‌ ಸದಸ್ಯ ನಾಗರಾಜ್‌ ಯಾದವ್‌ರನ್ನು ನೇಮಿಸಲಾಗಿದೆ.

ಸಿದ್ದರಾಮೋತ್ಸವ ಮಾಡಲು ಹೊರಟಿರುವುದು ಕಾಂಗ್ರೆಸ್‌ನ ಶಿಖಂಡಿತನ: KS ESHWARAPPA

 

ಉಳಿದಂತೆ ಉಪಾಧ್ಯಕ್ಷರಾಗಿ ದಿನೇಶ್‌ ಗೂಳಿಗೌಡ, ಮಾಜಿ ಪರಿಷತ್‌ ಸದಸ್ಯ ರಮೇಶ್‌ ಬಾಬು ಅವರನ್ನು ನೇಮಿಸಲಾಗಿದೆ. ವಕ್ತಾರರು ಹಾಗೂ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿಗಳನ್ನಾಗಿ ಲಾವಣ್ಯ ಬಲ್ಲಾಳ್‌, ಕವಿತಾ ರೆಡ್ಡಿ, ಡಾ. ನಾಗಲಕ್ಷ್ಮೇ, ಐಶ್ವರ್ಯ ಮಹದೇವ್‌ ಅವರನ್ನು ನೇಮಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಆದೇಶ ಹೊರಡಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

2026ರಲ್ಲೇ ಮಾತನಾಡುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಯ ಹಿಂದಿನ ರಹಸ್ಯವೇನು?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ