
ಬೆಂಗಳೂರು (ಆ.29): ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಅಕ್ರಮಗಳ ಕುರಿತು ಮಾತನಾಡುತ್ತಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೆಪಿಎಸ್‌ಸಿ ಅಧ್ಯಕ್ಷರ ನೇಮಕಾತಿಯ ಬಗ್ಗೆಯೂ ಮಾತನಾಡುವ ಧೈರ್ಯ ತೋರಿಸಲಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಕೆಪಿಎಸ್‌ಸಿ ನೇಮಕಾತಿಯಲ್ಲಿ ಅಕ್ರಮದ ಬಗ್ಗೆ ಮಾತನಾಡುವ ಕುಮಾರಸ್ವಾಮಿ ಅವರು ಶಿವಶಂಕರಪ್ಪ ಸಾಹುಕಾರ್ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷರನ್ನಾಗಿ ನೇಮಿಸಿದ್ದು ಯಾರು? ಎಂಬುದನ್ನೂ ಹೇಳಬೇಕು ಎಂದು ಒತ್ತಾಯಿಸಿದರು.
ಸಾಹುಕಾರ್ ಅವರ ಮನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಥವಾ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಫೋಟೋ ಇಲ್ಲ. ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ಫೋಟೋ ಇದೆ ಎಂದು ಹೇಳಲಾಗುತ್ತಿದೆ. 200 ಕೋಟಿ ರು. ನೀಡಿ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು ಎಂದು ಬಿಜೆಪಿ ಮಾಜಿ ಶಾಸಕರೇ ಆರೋಪಿಸಿದ್ದಾರೆ. ಇದು ನಿಜವೇ? ಇದರ ಬಗ್ಗೆ ಮಾತನಾಡಲು ಕುಮಾರಸ್ವಾಮಿ ಅವರಿಗೆ ಧೈರ್ಯವಿದೆಯೇ? ಎಂದು ಸವಾಲು ಹಾಕಿದರು.
ನನ್ನ ನಾಲಿಗೆಯ ಬಗ್ಗೆ ಮಾತನಾಡಲು ಜೆಡಿಎಸ್‌ನವರಿಗೆ ಯಾವ ನೈತಿಕತೆ ಇದೆ? ಈವರೆಗೂ ಬಿಜೆಪಿಯ ನಾಯಕರಿಗೆ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಪ್ರಿಯಾಂಕ್ ಖರ್ಗೆ ಬೇಕಿತ್ತು. ಈಗ ಜೆಡಿಎಸ್‌ಗೂ ಅನಿವಾರ್ಯ ಎಂದಾದರೆ ಮಾತನಾಡಿಕೊಳ್ಳಲಿ ಒಳ್ಳೆಯದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.