ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳಲು ಸಿದ್ಧ: ಪ್ರಿಯಾಂಕ್‌ ಖರ್ಗೆ

By Govindaraj SFirst Published Aug 14, 2022, 5:10 AM IST
Highlights

‘ನನ್ನ ಲಂಚ-ಮಂಚದ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳಲು ನಾನು ಸಿದ್ಧ. ಆದರೆ, ಹೆಣ್ಣು ಮಕ್ಕಳಿಗೆ ನಿಜವಾಗಿಯೂ ಅಪಮಾನ ಮಾಡಿದ ತಮ್ಮ ನಾಯಕರ ರಾಜೀನಾಮೆ ಪಡೆದು ಪ್ರಾಯಶ್ಚಿತ್ತ ಮಾಡಿಕೊಳ್ಳಲು ಬಿಜೆಪಿ ಸಿದ್ಧವಿದೆಯೇ?’

ಬೆಂಗಳೂರು (ಆ.14): ‘ನನ್ನ ಲಂಚ-ಮಂಚದ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳಲು ನಾನು ಸಿದ್ಧ. ಆದರೆ, ಹೆಣ್ಣು ಮಕ್ಕಳಿಗೆ ನಿಜವಾಗಿಯೂ ಅಪಮಾನ ಮಾಡಿದ ತಮ್ಮ ನಾಯಕರ ರಾಜೀನಾಮೆ ಪಡೆದು ಪ್ರಾಯಶ್ಚಿತ್ತ ಮಾಡಿಕೊಳ್ಳಲು ಬಿಜೆಪಿ ಸಿದ್ಧವಿದೆಯೇ?’ ಎಂದು ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಕೇಂದ್ರ ಮಂತ್ರಿಯೊಬ್ಬರು ಪರಸ್ತ್ರೀಯೊಬ್ಬರೊಂದಿಗೆ ನಡೆಸಿದ್ದ ಅಶ್ಲೀಲ ಸಂಭಾಷಣೆ ವೈರಲ್‌ ಆದಾಗ ಅವರ ಬಳಿ ಬಿಜೆಪಿಯ ಯಾರೊಬ್ಬರೂ ಕ್ಷಮೆಗೆ ಆಗ್ರಹಿಸಲಿಲ್ಲ. 

ಕೆಲಸಕ್ಕಾಗಿ ಬಂದ ಯುವತಿಗೆ ಈ ಸರ್ಕಾರದ ಸಚಿವರೊಬ್ಬರು ಮೋಸ ಮಾಡಿ, ಸಿಕ್ಕಿಬಿದ್ದು ರಾಜೀನಾಮೆ ನೀಡಬೇಕಾಯಿತು. ಅವರು ಕ್ಷಮೆ ಕೇಳಲಿಲ್ಲ. ಸದನದಲ್ಲಿ ನೀಲಿಚಿತ್ರ ವೀಕ್ಷಿಸಿ ಹೆಣ್ಣು ಕುಲಕ್ಕೆ ಅಪಮಾನ ಮಾಡಿದವರನ್ನು ವಿಧಾನಪರಿಷತ್‌ ಸದಸ್ಯರನ್ನಾಗಿ ಮಾಡಿ ಉಪಮುಖ್ಯಮಂತ್ರಿ ಮಾಡಿದ್ದು ಕೂಡ ಇದೇ ಬಿಜೆಪಿ. ತಮ್ಮ ಬಳಿಗೆ ಕೆಲಸಕ್ಕೆ ಬಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿ ಮೀಟೂ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದು ಇದೇ ಪಕ್ಷದ ಇಬ್ಬರು ಸಂಸದರು. ಅವರನ್ನು ಈವರೆಗೂ ಯಾರೊಬ್ಬರೂ ಕ್ಷಮೆ ಯಾಚಿಸುವಂತೆ ಯಾಕೆ ಕೇಳಲಿಲ್ಲ ಎಂದು ಹರಿಹಾಯ್ದಿದ್ದಾರೆ.

ಗೃಹ ಸಚಿವರ ಮನೆ ಮೇಲಿನ ದಾಳಿ ಕಾನೂನು ಕುಸಿತಕ್ಕೆ ಸಾಕ್ಷಿ: ಪ್ರಿಯಾಂಕ್‌ ಖರ್ಗೆ

ಮಂಚದ ವಿಚಾರಕ್ಕೆಹೆದರಿ ತಡೆ ಯಾಜ್ಞೆ ತಂದರು: ‘ಬಿಜೆಪಿ ನಾಯಕರು ಸಾಲು-ಸಾಲಾಗಿ ಹೋಗಿ ಮಂಚದ ವಿಚಾರಕ್ಕೆ ಹೆದರಿ ಹೈಕೋರ್ಚ್‌ನಿಂದ ತಡೆಯಾಜ್ಞೆ ತಂದರು. ಇವೆಲ್ಲವೂ ಕಣ್ಣಿಗೆ ಕಟ್ಟಿದಂತೆ ಜನರ ಮುಂದಿದೆ. ಬಿಜೆಪಿಯಲ್ಲಿ ಆಗಿರುವ ಹಾಗೂ ಈಗಲೂ ಆಗುತ್ತಿರುವ ಮಂಚ-ಲಂಚದ ಪ್ರಕರಣಗಳಿಗೆ ಕನ್ನಡಿಯಾಗಿ ಮಾತನಾಡುವುದು ವಿರೋಧಪಕ್ಷವಾಗಿ ನಮ್ಮ ಕರ್ತವ್ಯ. ಅದನ್ನು ಮಾಡುತ್ತಿರುವುದಿರಂದ ಬಿಜೆಪಿಯವರು ವಿಚಲಿತರಾಗಿದ್ದಾರೆ’ ಎಂದರು.

ಏನಿದು ವಿವಾದ: ಹಲವು ಇಲಾಖೆಗಳ ನೇಮಕಾತಿ ಪರೀಕ್ಷೆಗಳಲ್ಲೇ ಹಗರಣಗಳು ನಡೆಯುತ್ತಿವೆ, ರಾಜ್ಯ ಸರ್ಕಾರ ಹುದ್ದೆಗಳನ್ನು ಮಾರಾಟ ಮಾಡಲು ನಿಂತಿದೆ. ಯುವತಿಯರಿಗೆ ಉದ್ಯೋಗ ಬೇಕಾದರೆ ಮಂಚ ಹತ್ತಬೇಕು, ಯುವಕರಿಗೆ ಉದ್ಯೋಗ ಬೇಕಾದರೆ ಲಂಚ ಕೊಡಬೇಕು ಎನ್ನುವಂತಾಗಿದೆ. ಇದೊಂದು ಲಂಚದ ಮಂಚದ ಸರ್ಕಾರ ಎಂದು ಮಾಜಿ ಸಚಿವ, ಚಿತ್ತಾಪುರ ಶಾಸಕ ಪ್ರಿಯಾಂಕ್‌ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ನಮಗೆ ಬುದ್ಧಿ ಹೇಳಲು ಬರಬೇಡಿ: ಪ್ರಿಯಾಂಕ್‌ ಖರ್ಗೆ ತಿರುಗೇಟು

ಬಿಜೆಪಿ ವಿರುದ್ಧ ಟೀಕಿಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದರು. ಪ್ರತಿಯೊಂದು ಪರೀಕ್ಷೆಗಳಲ್ಲಿ ಹೀಗೆ ಅಕ್ರಮ ನಡೆದರೆ ಬಡವರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳು ಎಲ್ಲಿಗೆ ಹೋಗಬೇಕು? ಇದೊಂದು ಅಸಮರ್ಥ ಸರ್ಕಾರ, ಲಂಚ- ಮಂಚದ ಸರ್ಕಾರದಲ್ಲಿ ಏನೇ ಅಕ್ರಮ ಮಾಡಿದರೂ ನಡೆಯುತ್ತಿದೆ ಎನ್ನುವುದು ಅಕ್ರಮ ಮಾಡುವವರಿಗೆ ಹಾಗೂ ಮಧ್ಯವರ್ತಿಗಳಿಗೆ ಗೊತ್ತಾಗಿದೆ ಎಂದು ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದರು.

click me!