ಕನ್ನಡಿಗರ ಹಿತ ಕಾಯುವ ನಮ್ಮ ಬದ್ಧತೆಯಲ್ಲಿ ಯಾವುದೇ ರಾಜಿ ಇಲ್ಲ: ಸಚಿವ ಪ್ರಿಯಾಂಕ್ ಖರ್ಗೆ

Published : Mar 07, 2026, 07:12 PM IST
Priyank Kharge

ಸಾರಾಂಶ

ಸಿಎಂ ಸಿದ್ಧರಾಮಯ್ಯನವರು ಮಂಡಿಸಿದ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ನಮ್ಮ ಬದ್ದತೆಯಲ್ಲಿ ಯಾವುದೇ ರಾಜಿ ಇಲ್ಲ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಕಲಬುರಗಿ (ಮಾ.07): ಸಿಎಂ ಸಿದ್ಧರಾಮಯ್ಯನವರು ಮಂಡಿಸಿದ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ನಮ್ಮ ಬದ್ದತೆಯಲ್ಲಿ ಯಾವುದೇ ರಾಜಿ ಇಲ್ಲ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ಬಿಡುಗಡೆಗೊಂಡ ಅನುದಾನದ ಬಗ್ಗೆ ಹೇಳಿರುವ ಸಚಿವರು ಜಲ ಜೀವನ್‌ ಮಿಷನ್‌ ಯೋಜನೆಯಡಿಯಲ್ಲಿ ಒಟ್ಟಾರೆ 69,488 ಕೋಟಿ ರೂ. ಮೊತ್ತದ ಕಾಮಗಾರಿಗಳು ಅನುಮೋದನೆಯಾಗಿದೆ, ಇದರಲ್ಲಿ ಕೇಂದ್ರ ಸರ್ಕಾರದ ಪಾಲು ₹30,888 ಕೋಟಿಗಳಾಗಿದ್ದು, ರಾಜ್ಯ ಸರ್ಕಾರದ ಪಾಲು ₹38,600 ಕೋಟಿಗಳಾಗಿರುತ್ತದೆ. ಕೇಂದ್ರ ಸರ್ಕಾರದಿಂದ ಇದುವರೆಗೆ ಕೇವಲ 11,786 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಿದ್ದು, ಇನ್ನೂ 19,102 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕಾಗಿರುತ್ತದೆ ಎಂದಿದ್ದಾರೆ.

ರಾಜ್ಯ ಸರ್ಕಾರದಿಂದ ಒದಗಿಸಬೇಕಾದ ಅನುದಾನದಲ್ಲಿ ಈಗಾಗಲೇ 27,098 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, 11,502 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಬೇಕಾಗಿರುತ್ತದೆ. ಕೇಂದ್ರ ಸರ್ಕಾರ 2025-26ನೇ ಸಾಲಿನಲ್ಲಿ ಯಾವುದೇ ಅನುದಾನ ಬಿಡುಗಡೆ ಮಾಡದಿದ್ದರೂ ಸಹ ಈ ಯೋಜನೆಯ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದಿಂದ ಒಟ್ಟಾರೆ 15,500 ಕೋಟಿ ರೂ.ಗಳಷ್ಟು ಅನುದಾನವನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಿದೆ. 2026-27ನೇ ಸಾಲಿನಲ್ಲಿ ಈ ಯೋಜನೆಗಾಗಿ 10,433 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ.

ರಾಜ್ಯದ ಪ್ರಗತಿಯ ತೇರನ್ನು ಎಳೆಯುವ ಚೈತನ್ಯವಿರುವುದು ಗ್ರಾಮಗಳಲ್ಲಿ, ಗ್ರಾಮ ಪಂಚಾಯತಿಗಳನ್ನು ಸುಸ್ಥಿರ ಮತ್ತು ಸ್ವಾವಲಂಬಿಗಳನ್ನಾಗಿ ಮಾಡಲು "ಅನಂತ" ಎಂಬ ವಿನೂತನ ಯೋಜನೆಯನ್ನು ರೂಪಿಸಲಾಗಿದೆ, ವಾರ್ಷಿಕ 4000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿಯೊಂದಿಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಸೋಲಾರ್ ಮೈಕ್ರೋ ಗ್ರಿಡ್ ಗಳನ್ನು ಪಿಪಿಪಿ ಮಾದರಿಯಡಿಯಲ್ಲಿ ಸ್ಥಾಪಿಸುವ ಮಹತ್ವಾಕಾಂಕ್ಷೆಯ ಅನಂತ ಯೋಜನೆಯನ್ನು ಅನುಷ್ಠಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.

ಕೆಕೆಆರ್‌ಡಿಬಿ ಜಿಲ್ಲೆಗೆ ಹಲವು ಯೋಜನೆಗಳು

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಈ ಬಾರಿಯ ಆಯವ್ಯದಲ್ಲಿ ಹಲವಾರು ನೂತನ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲೆಯ ಜೇವರ್ಗಿಯಲ್ಲಿ ನಾಲೆಡ್ಜ್‌ ಪಾರ್ಕ ಸ್ಥಾಪನೆ ಮಾಡಲಾಗುತ್ತದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಮೈಕ್ರೊ ಅನುದಾನದ ನೆರವಿನೊಂದಿಗೆ ಕಲಬುರಗಿ ಜಿಲ್ಲೆಯ ಆಳಂದ, ಅಫಜಲ್‌ಪುರ, ಚಿತ್ತಾಪುರ, ಯಾದಗಿರಿ, ಜೇವರ್ಗಿ ಪಟ್ಟಣಗಳಲ್ಲಿ ಒಳಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಗಂಜಿ ಕೇಂದ್ರವಾಗಿದೆ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕೆ
ಕ್ರೇಜಿಸ್ಟಾರ್ ರವಿಚಂದ್ರನ್ ಮನೆಗೆ ಡಿ.ಕೆ. ಶಿವಕುಮಾರ್ ಭೇಟಿ: ಜಿಬಿಎ ಚುನಾವಣೆಗೂ ಮುನ್ನ ‘ಪವರ್‌ಫುಲ್’ ಮಾತುಕತೆ!