'ನಾ ನಾಯಕಿ’ ಸಮಾವೇಶ: ಜ.16ಕ್ಕೆ ಪ್ರಿಯಾಂಕ ಗಾಂಧಿ ಕರ್ನಾಟಕ್ಕೆ ಆಗಮನ

By Kannadaprabha NewsFirst Published Jan 10, 2023, 8:00 AM IST
Highlights

ಹೆಣ್ಣು ಸಮಾಜದ ಕಣ್ಣು. ಹೆಣ್ಣು ಒಂದು ಶಕ್ತಿಯಾಗಿದ್ದು, ಸಬಲೀಕರಣಕ್ಕೆ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಸಮಾವೇಶ ಆಗಮಿಸಲಿರುವ ಪ್ರಿಯಾಂಕ ಅವರು ಸಮಾವೇಶದಲ್ಲಿ ಕಾಂಗ್ರೆಸ್‌ ಪಕ್ಷ ಮಹಿಳೆಯರಿಗೆ ನೀಡುವ ಭರವಸೆಗಳನ್ನು ಘೋಷಣೆ ಮಾಡಲಿದ್ದಾರೆ. 

ಬೆಂಗಳೂರು(ಜ.10):  ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್‌ ಪಕ್ಷದ ವತಿಯಿಂದ ಜನವರಿ 16ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ‘ನಾ ನಾಯಕಿ’ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಆಗಮಿಸುತ್ತಿದ್ದಾರೆ. ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಅವರು ಬಿಡುಗಡೆ ಮಾಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಹೆಣ್ಣು ಸಮಾಜದ ಕಣ್ಣು. ಹೆಣ್ಣು ಒಂದು ಶಕ್ತಿಯಾಗಿದ್ದು, ಸಬಲೀಕರಣಕ್ಕೆ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಸಮಾವೇಶ ಆಗಮಿಸಲಿರುವ ಪ್ರಿಯಾಂಕಾ ಅವರು ಸಮಾವೇಶದಲ್ಲಿ ಕಾಂಗ್ರೆಸ್‌ ಪಕ್ಷ ಮಹಿಳೆಯರಿಗೆ ನೀಡುವ ಭರವಸೆಗಳನ್ನು ಘೋಷಣೆ ಮಾಡಲಿದ್ದಾರೆ. ಪ್ರಿಯಾಂಕ ಗಾಂಧಿ ಅವರು ಮಹಿಳೆಯರ ಧ್ವನಿಯಾಗಿ ಸಂದೇಶ ನೀಡುತ್ತಿದ್ದಾರೆ. ಇದು ಮಹಿಳೆಯರಿಗಾಗಿ ನಾವು ಮಾಡುವ ಕೆಲಸದ ಬಗ್ಗೆ ಗ್ಯಾರಂಟಿ ಪತ್ರವಾಗಲಿದೆ ಎಂದು ಭರವಸೆ ನೀಡಿದ್ದಾರೆ.

ರಾಹುಲ್‌ ಜೊತೆ ಹೆಜ್ಜೆ ಹಾಕಿದ ಪ್ರಿಯಾಂಕ ನಾಯಿ!

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದೇಶದಲ್ಲಿ ಬೆಲೆ ಏರಿಕೆ ದೊಡ್ಡ ಪಿಶಾಚಿಯಾಗಿ ದಿನನಿತ್ಯ ಜನರ ಬದುಕಿನಲ್ಲಿ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಬೆಲೆ ಏರಿಕೆ ಮೂಲಕ ಬಿಜೆಪಿ ಸರ್ಕಾರ ಜನರ ಜೇಬನ್ನು ಪಿಕ್‌ ಪಾಕೆಟ್‌ ಮಾಡುತ್ತಿದೆ. ಜನರ ಆದಾಯ ಡಬಲ್‌ ಮಾಡುವುದಾಗಿ ಹೇಳಿ ಜನಸಾಮಾನ್ಯರ ಜೀವನ ನಿರ್ವಹಣಾ ವೆಚ್ಚವನ್ನು ದುಪ್ಪಟ್ಟು ಮಾಡಿದ್ದಾರೆ. ರಾಜ್ಯ ಹಾಗೂ ದೇಶದ ಜನಸಂಖ್ಯೆಯಲ್ಲಿ ಶೇ.50ರಷ್ಟು ಮಹಿಳೆಯರಿದ್ದಾರೆ. ಹೀಗಾಗಿ ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ ಮಾಡಲು ಕಾಂಗ್ರೆಸ್‌ ನಿರ್ಧರಿಸಿದೆ ಎಂದು ಹೇಳಿದರು.

ಕಾಂಗ್ರೆಸ್‌ ಪಕ್ಷ ಮಹಿಳೆಯರಿಗೆ ನಾಯಕತ್ವ, ಶಕ್ತಿ ನೀಡುತ್ತಾ ಬಂದಿದೆ. ಈ ಹಿಂದೆ ಅಂಗನವಾಡಿ ಕಾರ್ಯಕ್ರಮ, ಆಶಾ ಕಾರ್ಯಕರ್ತರು, ಸ್ತ್ರೀಶಕ್ತಿ ಸ್ವಸಹಾಯ ಕಾರ್ಯಕ್ರಮಗಳನ್ನು ಕಾಂಗ್ರೆಸ್‌ ನೀಡಿದೆ. ಹೀಗಾಗಿ ಈ ಬಾರಿಯೂ ಚುನಾವಣೆಗೂ ಮುನ್ನ ಮಹಿಳೆಯರ ಸಬಲೀಕರಣಕ್ಕೆ ಮಹಿಳೆಯರಿಗೆ ನೀಡುವ ಭರವಸೆ ಬಿಡುಗಡೆ ಮಾಡಲಾಗುವುದು. ಈ ಹಿನ್ನೆಲೆಯಲ್ಲಿ ಜ.15ರ ಒಳಗೆ ಎಲ್ಲ ಹೆಣ್ಣು ಮಕ್ಕಳು ಹಾಗೂ ನಾಯಕರುಗಳು ತಮ್ಮ ಸಲಹೆ ನೀಡಬಹುದು ಎಂದು ಕರೆ ನೀಡಿದರು.

ಸ್ಯಾಂಟ್ರೋ, ಬಿಎಂಡಬ್ಲ್ಯು ಬಗ್ಗೆ ಗೊತ್ತಿರಲಿಲ್ಲ: ಡಿಕೆಶಿ

ಸ್ಯಾಂಟ್ರೋ ರವಿ ಜತೆಗೆ ಸಚಿವರ ಸಂಬಂಧದ ಬಗ್ಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ‘ನನಗೆ ಈ ಸ್ಯಾಂಟ್ರೋ, ಬಿಎಂಡಬ್ಲ್ಯೂ ಬಗ್ಗೆ ಗೊತ್ತಿರಲಿಲ್ಲ. ಇದು ಅವರಿಗೂ ಹಾಗೂ ಬಿಜೆಪಿಗೂ ಇರುವ ಸಂಬಂಧ. ಪ್ರಕರಣದ ಬಗ್ಗೆ ಮುಖ್ಯಮಂತ್ರಿಗಳು, ಗೃಹ ಸಚಿವರು ಪಾರದರ್ಶಕ ತನಿಖೆ ಮಾಡಿಸಬೇಕು. ರಾಜಕೀಯದಲ್ಲಿ ಯಾರೋ ಬಂದು ನಮ್ಮ ಜತೆ ಫೋಟೋ ತೆಗೆಸಿಕೊಳ್ಳುತ್ತಾರೆ. ಆದರೆ ದೂರವಾಣಿ ಸಂಭಾಷಣೆ, ಚಾಟ್‌, ಮಾತುಕತೆಗಳು ಏನಾದರೂ ವ್ಯವಹಾರ ಇದ್ದರೆ ಮಾತ್ರ ಇದು ನಡೆಯುತ್ತದೆ’ ಎಂದರು.

click me!