Karnataka Assembly Election 2023: 'ಅಸೆಂಬ್ಲಿ ಚುನಾವಣಾ ಪ್ರಚಾರಕ್ಕೆ ಕರ್ನಾಟಕಕ್ಕೆ ಬರ್ತಾರೆ ಪ್ರಿಯಾಂಕಾ'

Published : May 24, 2022, 07:30 AM IST
Karnataka Assembly Election 2023: 'ಅಸೆಂಬ್ಲಿ ಚುನಾವಣಾ ಪ್ರಚಾರಕ್ಕೆ ಕರ್ನಾಟಕಕ್ಕೆ ಬರ್ತಾರೆ ಪ್ರಿಯಾಂಕಾ'

ಸಾರಾಂಶ

*  ನವದೆಹಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಘೋಷಣೆ *  ಮೇಲ್ಮನೆ ಚುನಾವಣೆ ಟಿಕೆಟ್‌ ವಿಚಾರದಲ್ಲಿ ನಾನು ಯಾರ ಪರವೂ ನಿಂತಿಲ್ಲ *  ಕಾಂಗ್ರೆಸ್‌ ಪಕ್ಷಕ್ಕೆ ಏನು ಒಳ್ಳೆಯದಾಗುತ್ತೋ ಅದನ್ನು ಮಾಡಿ ಅಂತ ಹೈಕಮಾಂಡ್‌ಗೆ ಹೇಳಿದ್ದೇನೆ: ಡಿಕೆಶಿ

ನವದೆಹಲಿ(ಮೇ.24): ಮುಂಬರುವ ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಬರಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸೋಮವಾರ ಈ ವಿಚಾರವಾಗಿ ದೆಹಲಿಯಲ್ಲಿ ಮಾತನಾಡಿದ ಅವರು, ರಾಜ್ಯಸಭೆಗೆ ಪ್ರಿಯಾಂಕಾ ಗಾಂಧಿ ಅವರು ರಾಜ್ಯದಿಂದ ಸ್ಪರ್ಧಿಸಬೇಕೆಂಬ ಆಸೆ ಇತ್ತಾದರೂ ಈ ಬಗ್ಗೆ ಎಲ್ಲೂ ಚರ್ಚೆ ಆಗಿಲ್ಲ. ಆದರೆ, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕಕ್ಕೆ ಬಂದು ಚುನಾವಣೆ ಪ್ರಚಾರ ಮಾಡಲು ಅವರು ಒಪ್ಪಿದ್ದಾರೆ ಎಂದು ತಿಳಿಸಿದರು.

ಯಾರ ಪರವೂ ಇಲ್ಲ: 

ಮೇಲ್ಮನೆ ಚುನಾವಣೆ ಟಿಕೆಟ್‌ ವಿಚಾರದಲ್ಲಿ ನಾನು ಯಾರ ಪರವೂ ನಿಂತಿಲ್ಲ. ಕಾಂಗ್ರೆಸ್‌ ಪಕ್ಷಕ್ಕೆ ಏನು ಒಳ್ಳೆಯದಾಗುತ್ತೋ ಅದನ್ನು ಮಾಡಿ ಅಂತ ಹೈಕಮಾಂಡ್‌ಗೆ ಹೇಳಿದ್ದೇನೆ. ನಾನು ಮತ್ತು ಸಿದ್ದರಾಮಯ್ಯ ಇಬ್ಬರೂ ಸೇರಿ ಹೆಸರುಗಳನ್ನು ಕೊಟ್ಟಿದ್ದೇವೆ ಎಂದರು.

ಅಜ್ಜಿ-ಅಮ್ಮನಂತೆ ಪ್ರಿಯಾಂಕಾಗೂ ರಾಜ್ಯದಿಂದಲೇ ರಾಜಕೀಯ ಭವಿಷ್ಯಕ್ಕೆ ತಿರುವು ಸಿಗುತ್ತಾ?

ಎಸ್‌.ಆರ್‌.ಪಾಟೀಲ ಪಕ್ಷಕ್ಕಾಗಿ ದುಡಿದಿದ್ದಾರೆ. ತಂದೆಗೆ ವಯಸ್ಸಾಯ್ತು ಅಂತ ಹೊರಗಡೆ ಹಾಕಲು ಸಾಧ್ಯವೇ? ಎಂದು ಹೇಳುವ ಮೂಲಕ ಪರೋಕ್ಷವಾಗಿ ಪಾಟೀಲರ ಪರ ಡಿ.ಕೆ.ಶಿವಕುಮಾರ್‌ ಒಲವು ಪ್ರದರ್ಶಿಸಿದರು.

ಇದೇ ವೇಳೆ ಮೇಲ್ಮನೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಒಂದೇ ದಿನ ಬಾಕಿ ಇರುವ ಕುರಿತು ಪ್ರತಿಕ್ರಿಯಿಸಿದ ಅವರು, ಮಂಗಳವಾರ ನಾಮಪತ್ರ ಸಲ್ಲಿಸಿದರೆ ಏನೂ ಆಗಲ್ಲ. ಅವೆಲ್ಲ ನಮ್ಮ ನಂಬಿಕೆಗಳು ಅಷ್ಟೆ. ನಾನು ಅಮವಾಸ್ಯೆ ದಿನ ಹುಟ್ಟಿದ್ದೇನೆ. ಎಲ್ಲಾ ಸಮಯ, ವಾರವೂ ಒಳ್ಳೆಯದೇ ಎಂದು ಹೇಳಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ
ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ