ಪಾಕಿಸ್ತಾನ ಪರ ಘೋಷಣೆಯು ಕಾಂಗ್ರೆಸ್ ಸರ್ಕಾರದ ಅಜೆಂಡಾ: ಬಿ.ವೈ.ವಿಜಯೇಂದ್ರ

Published : Sep 10, 2025, 11:28 PM IST
ಪಾಕಿಸ್ತಾನ ಪರ ಘೋಷಣೆಯು ಕಾಂಗ್ರೆಸ್ ಸರ್ಕಾರದ ಅಜೆಂಡಾ: ಬಿ.ವೈ.ವಿಜಯೇಂದ್ರ

ಸಾರಾಂಶ

‘ಪಾಕಿಸ್ತಾನ ಜಿಂದಾಬಾದ್‌’ ಕೂಗಿಸುವುದು ಕಾಂಗ್ರೆಸ್ ಸರ್ಕಾರದ ಅಜೆಂಡಾ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಪಾದಿಸಿದ್ದಾರೆ.

ಬೆಂಗಳೂರು (ಸೆ.10): ‘ಪಾಕಿಸ್ತಾನ ಜಿಂದಾಬಾದ್‌’ ಕೂಗಿಸುವುದು ಕಾಂಗ್ರೆಸ್ ಸರ್ಕಾರದ ಅಜೆಂಡಾ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಪಾದಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಒಂದು ರೀತಿ ತುಘಲಕ್ ದರ್ಬಾರ್ ಇದೆ. ಕಾಂಗ್ರೆಸ್‌ ಸರ್ಕಾರದವರು ನಿಜಾಮರ ಆಡಳಿತ ನೆನಪು ಮಾಡಿ ಕೊಡುತ್ತಿದ್ದಾರೆ ಎಂದರು. ಮುಖ್ಯಮಂತ್ರಿಗಳ ಸುತ್ತ ಅಯೋಗ್ಯರನ್ನೇ ಇಟ್ಟುಕೊಂಡಂತಿದೆ. ಹಿಂದೂಗಳ ಮೇಲೆ ಕಲ್ಲೆಸೆತ, ಹಲ್ಲೆಗಳು ನಡೆಯುತ್ತಿದೆ. ಪಾಕಿಸ್ತಾನ ಜಿಂದಾಬಾದ್ ಎಂದವರನ್ನು ತಾಕತ್ತಿದ್ದರೆ ಒದ್ದು ಒಳಗಡೆ ಹಾಕಲಿ ಎಂದು ಸವಾಲು ಎಸೆದರು. ಬಿಜೆಪಿ ಹಿಂದುತ್ವದ ಪರವಾಗಿದೆ. ಆ ಕುರಿತು ಪ್ರಶ್ನೆ ಮಾಡಲು ಇವರು ಯಾರು? ಕರ್ನಾಟಕದಲ್ಲಿ ನಮ್ಮ ಸರ್ಕಾರ ಹಿಂದೂಗಳ ಪರವಾಗಿ ಇಲ್ಲವೆಂದು ಘೋಷಿಸಲಿ; ಹಿಂದೂಗಳು ಸ್ವಯಂ ರಕ್ಷಣೆ ಮಾಡಿಕೊಳ್ಳಬೇಕೆಂದು ಪ್ರಕಟಿಸಲಿ ಎಂದು ತೀಕ್ಷ್ಣವಾಗಿ ಹೇಳಿದರು.

ಪಾಕಿಸ್ತಾನ ಪರ ಘೋಷಣೆಗೆ ಖಂಡನೆ: ಮಹಮದ್ ಪೈಗಂಬರರ ಜನ್ಮದಿನ ಸಂಭ್ರಮಾಚರಣೆ ಅಂಗವಾಗಿ ನಗರದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ತಕ್ಷಣ ಅವರನ್ನು ಬಂಧಿಸುವಂತೆ ಆಗ್ರಹಿಸಿ ಮಂಗಳವಾರ ಮಾಧವಚಾರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಹಿಂದೂಪರ ಸಂಘಟನೆಗಳ ಹಾಗೂ ಭಾರತೀಯ ಜನತಾ ಪಕ್ಷ ಮತ್ತು ಜಾತ್ಯಾತೀತ ಜನತಾದಳ ಪಕ್ಷಗಳ ಪ್ರಮುಖರು, ಅಭಿಮಾನಿಗಳು ರಾಷ್ಟ್ರ ಧ್ವಜ ಹಿಡಿದು ರಾಷ್ಟ್ರಾಭಿಮಾನ ಪ್ರದರ್ಶಿಸುವ ಮೂಲಕ ಘಟನೆಯನ್ನು ಖಂಡಿಸಿದರು. ಅಲ್ಲದೆ ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದರು.

ಈ ನಡುವೆ ಪ್ರಮುಖರು ಮಾತನಾಡಿ, ಭದ್ರಾವತಿಯಂತಹ ನಗರದಲ್ಲಿ ಈ ರೀತಿಯ ಕೃತ್ಯ ನಡೆಸಿರುವುದು ಭಾರತೀಯರಾದ ನಮಗೆ ನೋವುಂಟು ಮಾಡುತ್ತದೆ. ದೇಶದ್ರೋಹ ಕೃತ್ಯ ಯಾರೇ ಮಾಡಿದರು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಭದ್ರಾವತಿ ನಗರ ಮಿನಿ ಪಾಕಿಸ್ತಾನ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ತಕ್ಷಣ ಇಂತಹ ಕೃತ್ಯಗಳಿಗೆ ಪೊಲೀಸರು ಕಡಿವಾಣ ಹಾಕಬೇಕು ಎಂದರು. ಈದ್ ಮಿಲಾದ್ ಮೆರವಣಿಗೆಯಲ್ಲಿ ಯಾರೋ ಕಿಡಿಗೇಡಿಗಳು ಪಾಕಿಸ್ತಾನ ಪರ ಜಿಂದಾಬಾದ್ ಘೋಷಣೆ ಕೂಗಿದರೂ ಸಹ ಉಳಿದವರು ಮೌನವಾಗಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಪ್ರತಿಭಟನಾಕಾರರು ಸ್ಥಳದಲ್ಲಿದ್ದ ಪೊಲೀಸರು ಆ ಕ್ಷಣವೇ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಈ ಕೃತ್ಯವನ್ನು ಮುಚ್ಚಿ ಹಾಕುವ ಹುನ್ನಾರ ನಡೆಸಲಾಗುತ್ತಿದೆ ಎಂದು ಆರೋಪಿಸಿದರು. ಮಾಧವಚಾರ್ ವೃತ್ತದಿಂದ ಮಹಾತ್ಮಗಾಂಧಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಅಂತಿಮವಾಗಿ ರಾಷ್ಟ್ರಗೀತೆ ಹಾಡುವ ಮೂಲಕ ಅಂತ್ಯಗೊಳಿಸಲಾಯಿತು. ಪ್ರತಿಭಟನೆ ಹಿನ್ನಲೆಯಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ಸುಗಮ ಸಂಚಾರಕ್ಕೆ ಹರಸಾಹಸ ಪಡುವಂತಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಂಗನವಾಡಿ, ಆಶಾ ನೌಕರರ ಗೌರವಧನ ಹೆಚ್ಚಿಸಿ: ಸಂಸದ ಡಾ.ಕೆ.ಸುಧಾಕರ್‌ ಮನವಿ
ಬಂಗಾರಪ್ಪ ಅವರ ಹೆಸರಿಗೆ ತಕ್ಕ ರೀತಿ ಮಧು ಮಾತನಾಡಲಿ: ಆರಗ ಜ್ಞಾನೇಂದ್ರ ತಿರುಗೇಟು