ಮತದಾರರಿಗೆ ನೀಡಿದ್ದ ಭರವಸೆ ಈಡೇರಿಸುವೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

By Kannadaprabha News  |  First Published Mar 9, 2024, 1:18 PM IST

ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ನೀಡಿದ್ದ ಭರವಸೆ ಈಡೇರಿಸಲು ಬದ್ಧನಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸುತ್ತೆನೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭರವಸೆ ನೀಡಿದರು. 


ಹಲಗೂರು (ಮಾ.09): ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ನೀಡಿದ್ದ ಭರವಸೆ ಈಡೇರಿಸಲು ಬದ್ಧನಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸುತ್ತೆನೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭರವಸೆ ನೀಡಿದರು. ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಅನುದಾನದ ಅಡಿಯಲ್ಲಿ ೨ ಕೋಟಿ ರು.ವೆಚ್ಚದಲ್ಲಿ ವಿವಿಧ ಗ್ರಾಮಗಳಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಮತ್ತು ೩ ಕೋಟಿ ವೆಚ್ಚದಲ್ಲಿ ಧನಗೂರು ಗ್ರಾಮದಲ್ಲಿ ನೂತನ ಎಂಯುಎಸ್‌ಎಸ್ ವಿದ್ಯುತ್ ವಿತರಣಾ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಯತ್ತಂಬಾಡಿ ಗ್ರಾಮದಲ್ಲಿ ಶ್ರೀಕಾಳೇಶ್ವರ ಸ್ವಾಮಿ ದೇವಾಲಯದ ಬಳಿ ಸಮುದಾಯ ಭವನ ಮತ್ತು ಬಾಣಸಮುದ್ರ ಗ್ರಾಮದಲ್ಲಿ ಬೆಂಗಳೂರಯ್ಯ ದೇವಾಲಯದ ಬಳಿ ಸಮುದಾಯ ಭವನ ನಿರ್ಮಾಣ ಮಾಡುವುದಾಗಿ ಚುನಾವಣೆಯಲ್ಲಿ ಭರವಸೆ ನೀಡಿದ್ದು, ಕೊಟ್ಟ ಮಾತಿನಂತೆ ಮುಂದಿನ ದಿನಗಳಲ್ಲಿ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಕಸಬಾ ಹೋಬಳಿಯ ಅಂತರವಳ್ಳಿ, ಯತ್ತಂಬಾಡಿ, ಬೆಳತೂರು, ಅಪ್ಪಾಜಯ್ಯನದೊಡ್ಡಿ, ಬಾಣಗಹಳ್ಳಿ, ಹುಲ್ಲಹಳ್ಳಿ, ಹುಲ್ಲಾಗಾಲ, ದಡಮಹಳ್ಳಿ, ಬಾಣಸಮುದ್ರ, ಕೋಡಿಪುರ, ಚೆನ್ನೀಪುರ, ಡಿ.ಹಲಸಹಳ್ಳಿ, ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನಡೆಸಿದ್ದು, ಈಗಾಗಲೇ ಇನ್ನೂ ಹಲವು ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗಿದ್ದು, ಲೋಕಸಭಾ ಚುನಾವಣೆಯ ನಂತರ ಕಾಮಗಾರಿ ಆರಂಭಿಸುವುದಾಗಿ ತಿಳಿಸಿದರು.

Latest Videos

undefined

ಮುಖ್ಯಮಂತ್ರಿ ಹುದ್ದೆಗೆ ಯಾವ ಜಾತಿ, ಕುಲದ ಮಾನದಂಡವಲ್ಲ: ಶಾಸಕ ಕೆ.ಎಂ.ಉದಯ್

ಬಾಣಸಮುದ್ರ ಗೇಟ್‌ನಲ್ಲಿ ಒಂದು ಬಸ್ ತಂಗುದಾಣ ನಿರ್ಮಿಸಬೇಕು ಮತ್ತು ಕೆಎಸ್‌ಆರ್‌ಟಿಸಿ ಬಸ್ ಕೋರಿಕೆ ನಿಲುಗಡೆ ಇದ್ದು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಬಸ್ಸುಗಳನ್ನು ನಿಲ್ಲಿಸಲು ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಗ್ರಾಮಸ್ಥರು ಶಾಸಕರಲ್ಲಿ ಮನವಿ ಮಾಡಿದರು. ಯೂತ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೆ.ಕೃಷ್ಣಮೂರ್ತಿ, ಕಾರ್ಯಾದ್ಯಕ್ಷ ಶಿವಮಾದೇಗೌಡ, ಮುಖಂಡರಾದ ಆರ್.ಎನ್.ವಿಶ್ವಾಸ್, ಮಾದೇಶ್, ಎಚ್.ಆರ್.ಶಿವಮಾದೇಗೌಡ, ಚಂದ್ರಕುಮಾರ್, ಕುಂತೂರು ಗೋಪಾಲ್, ಎಂ.ಶಿವಕುಮಾರ್, ಕೃಷ್ಣಪ್ಪ, ಕೆ.ಎಸ್.ದ್ಯಾಪೇಗೌಡ, ಸಿ.ಪಿ.ರಾಜು, ಅಂಬರೀಶ್, ರೋಹಿತ್, ಚಿಕ್ಕಸ್ವಾಮಿ ಸೇರಿದಂತೆ ಹಲವರಿದ್ದರು.

ನೂರಾರು ಕೋಟಿ ಅನುದಾನದಿಂದ ಕ್ಷೇತ್ರ ಸಮಗ್ರ ಅಭಿವೃದ್ಧಿ ಮಾಡುವೆ: ಗ್ಯಾರಂಟಿ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸುವ ಜೊತೆಗೆ ನೂರಾರು ಕೋಟಿ ಅನುದಾನ ತಂದು ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಿ ವಿರೋಧಿಗಳ ಬಾಯಿ ಮುಚ್ಚಿಸುವ ಕೆಲಸ ಮಾಡಲಾಗಿದೆ ಎಂದು ಶಾಸಕ ಪಿ.ಎಂ. ನರೇಂದ್ರಸ್ವಾಮಿ ಹೇಳಿದರು. ತಾಲೂಕಿನ ನಾಗೇಗೌಡನದೊಡ್ಡಿ, ತಂಮ್ಮಡಹಳ್ಳಿ, ಮೊಳೇದೊಡ್ಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸುಮಾರು 8.5 ಕೋಟಿ ರು. ವೆಚ್ಚದ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಿ ಮಾತನಾಡಿದರು.

ನೀರಾವರಿ ಇಲಾಖೆಯಿಂದ 170 ಕೋಟಿ, 184 ಕೋಟಿ ಕುಡಿಯುವ ನೀರಿನ ಯೊಜನೆ, 25 ಕೋಟಿ ವಿಶೇಷ ಅನುದಾನ, ಎಸ್‌ಸಿಪಿ ಟಿಎಸ್‌ಪಿ 6 ಕೋಟಿ, ಪುರಸಭೆ ವ್ಯಾಪ್ತಿಯಲ್ಲಿ 15 ಕೋಟಿಗೂ ಹೆಚ್ಚು ಅನುದಾನ ತಂದಿದ್ದು, ಕಾಮಗಾರಿ ಆರಂಭಿಗೊಂಡಿದೆ ಎಂದರು. ಮುಖ್ಯಮಂತ್ರಿ ಆಗಮನ ವೇಳೆ ತುರ್ತು ಕಾಮಗಾರಿ ಕೈಗೊಂಡು ಪಟ್ಟಣದಲ್ಲಿ ಹಲವು ಕಾಮಗಾರಿ ಕೈಗೊಳ್ಳಲಾಗಿದೆ. ಪಿಡ್ಲ್ಯೂಡಿ ಇಲಾಖೆಯಿಂದಲೂ 40 ಕೋಟಿ ಅನುದಾನ ಬಿಡುಗಡೆ ಮಾಡಿ ಎಸ್‌ಸಿಪಿ, ಟಿಎಸ್‌ಪಿ ಅನುದಾನ ಮತ್ತು ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದ ಗ್ರಾಮಗಳ ರಸ್ತೆ ಅಭಿವೃದ್ಧಿಗೆ ಮುಂದಾಗಿದ್ದು ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆಯಲ್ಲಿ ಗುದ್ದಲಿ ಪೂಜೆ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಕಾಂಗ್ರೆಸ್‌ ಪಂಚ ಗ್ಯಾರಂಟಿಗಳಿಂದ ಬಡ ಜನರಿಗೆ ಪ್ರಯೋಜನ: ಯು.ಟಿ. ಖಾದರ್‌

ಹಿಂದಿನ ಆಡಳಿತದಲ್ಲಿ ಸಾವಿರಾರು ಎಕರೆ ಸರ್ಕಾರಿ ಭೂಮಿಯನ್ನು ಕಂದಾಯ ಇಲಾಖೆ ಹಾಗೂ ಉಪ ನೋಂದಣಿ ಕಚೇರಿ ಅಧಿಕಾರಿಗಳ ಭ್ರಷ್ಟಾಚಾರದಿಂದಾಗಿ ಅಕ್ರಮಭೂಮಿ ಪರಭಾರೆ ಮಾಡಲಾಗಿದೆ. ಅದನ್ನು ಸರಿಪಡಿಸುವ ಜವಾಬ್ದಾರಿ ಈಗಾಗಲೇ ನಡೆಯುತ್ತಿದೆ. ಸುಮಾರು 800 ಎಕರೆ ವಾಪಸ್ ಪಡೆಯಲಿದೆ. ತನಿಖೆ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಎಲ್ಲವು ಬೆಳಕಿಗೆ ಬರಲಿದೆ ಎಂದರು. ಮುಖ್ಯಮಂತ್ರಿಗಳಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ತರುವುದರ ಜೊತೆಗೆ ವಿಶೇಷ ಶಾಲೆಗಳಿಗೂ ಮಂಜೂರಾತಿ ಪಡೆಯಲಾಗಿದೆ. ಹಲಗೂರು ಮತ್ತು ಬೆಳಕವಾಡಿಗೆ ಸಿಎಚ್‌ಸಿ ತರಲು ಸರ್ಕಾರಕ್ಕೆ ಬೇಡಿಕೆ ನೀಡಲಾಗಿದೆ ಎಂದರು.

click me!