ಬಿಜೆಪಿ ಅಧಿಕಾರದಲ್ಲಿ ಇರೋತನಕ ಪ್ರಜೆಗಳಿಗೆ ಯಾವುದೇ ತೊಂದರೆ ಇಲ್ಲ: ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ

By Kannadaprabha NewsFirst Published Apr 20, 2023, 9:04 PM IST
Highlights

ಬಿಜೆಪಿ ಅಧಿಕಾರದಲ್ಲಿ ಇರುವ ತನಕ ದೇಶದ ಪ್ರಜೆಗಳಿಗೆ ಯಾವುದೇ ತೊಂದರೆಯಿಲ್ಲ. ಹೀಗಾಗಿ ದೇಶ ರಕ್ಷಣೆಯ ಭರವಸೆಯೊಂದಿಗೆ ಅಭಿವೃದ್ಧಿ ಕಾರ‍್ಯಗಳನ್ನು ಮುಂದಿಟ್ಟುಕೊಂಡು ಪ್ರಚಂಡ ಗೆಲವು ಸಾಧಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಅಭ್ಯರ್ಥಿ ವಿರೂಪಾಕ್ಷಪ್ಪ ಬಳ್ಳಾರಿ ವಿಶ್ವಾಸ ವ್ಯಕ್ತಪಡಿಸಿದರು.

ಬ್ಯಾಡಗಿ (ಏ.20) : ಬಿಜೆಪಿ ಅಧಿಕಾರದಲ್ಲಿ ಇರುವ ತನಕ ದೇಶದ ಪ್ರಜೆಗಳಿಗೆ ಯಾವುದೇ ತೊಂದರೆಯಿಲ್ಲ. ಹೀಗಾಗಿ ದೇಶ ರಕ್ಷಣೆಯ ಭರವಸೆಯೊಂದಿಗೆ ಅಭಿವೃದ್ಧಿ ಕಾರ‍್ಯಗಳನ್ನು ಮುಂದಿಟ್ಟುಕೊಂಡು ಪ್ರಚಂಡ ಗೆಲವು ಸಾಧಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಅಭ್ಯರ್ಥಿ ವಿರೂಪಾಕ್ಷಪ್ಪ ಬಳ್ಳಾರಿ(Virupakshappa bellary) ವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕಿನ ಬಡಮಲ್ಲಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಬಳಿಕ ಮಾತನಾಡಿದ ಅವರು, ಕಳೆದ 10 ವರ್ಷಗಳಿಂದ ದೇಶದ ಜನರು ನೆಮ್ಮದಿಯಿಂದ ನಿದ್ದೆ ಮಾಡುತ್ತಿದ್ದಾರೆ. ಕೊರೋನಾ ಸಮಯದಲ್ಲಿಯೂ ದೇಶದ ಜನರ ಹೆಚ್ಚು ಸಾವು ನೋವುಗಳಾಗದಂತೆ ನೋಡಿಕೊಳ್ಳುವ ಮೂಲಕ ವಿಶ್ವದಲ್ಲಿಯೇ ಸುರಕ್ಷಿತ ದೇಶವೆನಿಸಿತ್ತು. ಹೀಗಾಗಿ ದೇಶ ರಕ್ಷಣೆ ಪ್ರಥಮ ಆದ್ಯತೆ ಮಾಡಿಕೊಂಡಿರುವ ಬಿಜೆಪಿ ಎಂದಿಗೂ ಪ್ರಜೆಗಳಿಗೆ ಮೋಸ ಮಾಡುವುದಿಲ್ಲ ಎಂದರು.

 

ಗೆದ್ದರೆ ಆಡಲು ಬಂದಿದ್ದೆ, ಸೋತರೆ ನೋಡಲು ಬಂದಿದ್ದೆ ಎಂಬ ನಿಲುವು ಕಾಂಗ್ರೆಸ್ಸಿನದು : ಶಾಸಕ ವಿರೂಪಾಕ್ಷಪ್ಪ ವಾಗ್ದಾಳಿ

ಕಾಂಗ್ರೆಸ್‌ ಅಧಿಕಾರದಲ್ಲಿ ಇದ್ದಾಗ ದೇಶದ ಜನರು ಅನುಭವಿಸುತ್ತಿದ್ದ ಎಲ್ಲ ಸಮಸ್ಯೆಗಳಿಗೆ ಬಿಜೆಪಿ ಸರ್ಕಾರ ಪರಿಹಾರ ಕಂಡುಕೊಂಡಿದೆ. ವಿದ್ಯುತ್‌ ಉತ್ಪಾದನೆ ಸೇರಿದಂತೆ ಪೂರೈಕೆಯಲ್ಲಿ ಇದೀಗ ದೇಶ ಸ್ವಾವಲಂಬಿ ಆಗಿದ್ದೇವೆ ಎಂದರು.

ಚುನಾವಣಾ ಪೂರ್ವದಲ್ಲಿ ಕ್ಷೇತ್ರದ ಜನತೆಗೆ ನೀಡಿದ್ದ ಭರವಸೆ ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಯಾವ ಶಾಸಕರು ಮಾಡಿರದಷ್ಟುಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರದಲ್ಲಿ ಮಾಡಿದ್ದು ಜನರು ಮತ್ತೊಮ್ಮೆ ಹರಸಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.

ನಾನು ಶಾಸಕನಾದ ಸಂದರ್ಭದಲ್ಲಿದ್ದ ಸಮಿಶ್ರ ಸರ್ಕಾರ ಕ್ಷೇತ್ರಕ್ಕೆ ಅನುದಾನ ನೀಡಲು ಸಹ ಹಿಂದೆ ಮುಂದೆ ನೋಡುವ ಪರಿಸ್ಥಿತಿಯಲ್ಲಿತ್ತು. ಆದರೆ ಯಾವಾಗ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿಯಿತೋ ಅಂದಿನಿಂದ ರಾಜ್ಯ ಹಾಗೂ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವ ಶುರುವಾಯಿತು ಎಂದರು.

ನಿರುದ್ಯೋಗಿಗಳಿಗೆ ಮಾಸಿಕ 3,000 ರೂ. ಭತ್ಯೆ: ಕಾಂಗ್ರೆಸ್‌ ಗ್ಯಾರಂಟಿ 4 ಘೋಷಣೆ

ಕೋವಿಡ್‌ ಹಾಗೂ ಪ್ರಾಕೃತಿಕ ವಿಕೋಪಗಳನ್ನು ಸಮರ್ಥವಾಗಿ ಎದುರಿಸಿರುವ ಬಿಜೆಪಿ ಸರ್ಕಾರ ಬಡವರ, ದೀನ ದಲಿತರ ಪರವಾಗಿ ನಿಂತಿದೆ. ಇದಕ್ಕೆ ರಾಜ್ಯದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳೇ ಸಾಕ್ಷಿ. ಕ್ಷೇತ್ರದಲ್ಲಿ ಅಭಿವೃದ್ಧಿಯ ಕಾರ್ಯಗಳಿಗೆ ವೇಗ ನೀಡಿ ಸರ್ವಾಂಗೀಣ ಅಭಿವೃದ್ಧಿಯ ಪ್ರೋಗ್ರೆಸ್‌ ಕಾರ್ಡ್‌ ಹಿಡಿದು ಮತ ಕೇಳುತ್ತಿದ್ದೇವೆ ಎಂದು ಹೇಳಿದರು.

ಈ ವೇಳೆ ಜಯಣ್ಣ ಮಲ್ಲಿಗಾರ, ಶಿವಾನಂದ ಯಮನಕ್ಕವರ, ಉಮೇಶ ಕರಿಗಾರ, ಬಸವರಾಜ ಹಾವನೂರ ಭಾಗವಹಿಸಿದ್ದರು.

click me!