ಲಕ್ಕುಂಡಿ ಮಾದರಿಯಲ್ಲಿ ರಾಜ್ಯಾದ್ಯಂತ ಐತಿಹಾಸಿಕ ಸ್ಮಾರಕಗಳ ರಕ್ಷಣೆ: ಸಿದ್ದರಾಮಯ್ಯ

Kannadaprabha News   | Kannada Prabha
Published : Jun 04, 2025, 11:55 PM IST
Karnataka CM Siddaramaiah

ಸಾರಾಂಶ

ಲಕ್ಕುಂಡಿ ಮಾದರಿಯಲ್ಲಿ ರಾಜ್ಯಾಧ್ಯಂತ ಇರುವ ಐತಿಹಾಸಿಕ ಸ್ಮಾರಕ, ಶಿಲಾ ಶಾಸನ, ಕೋಟೆ ಕೊತ್ತಲುಗಳ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಗದಗ (ಜೂ.04): ಲಕ್ಕುಂಡಿ ಮಾದರಿಯಲ್ಲಿ ರಾಜ್ಯಾಧ್ಯಂತ ಇರುವ ಐತಿಹಾಸಿಕ ಸ್ಮಾರಕ, ಶಿಲಾ ಶಾಸನ, ಕೋಟೆ ಕೊತ್ತಲುಗಳ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಇಲ್ಲಿ 'ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ' ಹಮ್ಮಿಕೊಂಡಿದ್ದ ಕೋಟೆ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ಉತ್ಖನನಕ್ಕೆ ಚಾಲನೆ ನೀಡಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಲಕ್ಕುಂಡಿ ಚಾಲುಕ್ಯರ ರಾಜಧಾನಿ ಆಗಿತ್ತು. ಚಾಲುಕ್ಯರ ಕಾಲದಲ್ಲಿ ಇಲ್ಲಿ ದೇವಸ್ಥಾನ, ಕೋಟೆ ನಿರ್ಮಿಸಲಾಗಿದೆ.

ಇಲ್ಲಿ ಸಿಗುವ ಅವಶೇಷಗಳಿಂದ ಆ ಕಾಲದ ಶಿಲಾಶಾಸನಗಳ ಪರಿಚಯ ಮತ್ತು ರಾಜ್ಯಭಾರದ ಮಾಹಿತಿ ದೊರಕಿದೆ. ಸಚಿವ ಎಚ್.ಕೆ. ಪಾಟೀಲ ಆಸಕ್ತಿಯಿಂದಾಗಿ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ರಚನೆ ನಮ್ಮ ಸರ್ಕಾರದ ಅವಧಿಯಲ್ಲೇ ಆಗಿದೆ. ಇಲ್ಲಿ ದೊರೆತಿರುವ ಅವಶೇಷಗಳ‌ ಪುನರುಜ್ಜೀವನಕ್ಕೆ ಸರ್ಕಾರದಿಂದ ಹಣ ಕೊಟ್ಟಿದ್ದೇವೆ. ಇದರಿಂದ ಐತಿಹಾಸಿಕ ಕುರುಹುಗಳನ್ನು ಸಂಗ್ರಹಿಸಲು, ರಕ್ಷಿಸಲು ಸಾಧ್ಯವಾಗಿದೆ ಎಂದರು.

ಬಯಲು ವಸ್ತು ಸಂಗ್ರಹಾಲಯ: ಈಗಾಗಲೇ ಇಲ್ಲಿ ಸಾಕಷ್ಟು ಮಹತ್ವದ ಅವಶೇಷ, ಶಿಲ್ಪಕಲೆ, ಶಿಲಾಶಾಸನ, ಮೂರ್ತಿಗಳು ಪತ್ತೆಯಾಗಿವೆ. ಉತ್ಖನನದ ಮೂಲಕ ಇನ್ನಷ್ಟು ಲಭಿಸಲಿವೆ. ಈ ಎಲ್ಲ ಕುರುಹುಗಳ ರಕ್ಷಣೆ ಮತ್ತು ಪ್ರದರ್ಶನಕ್ಕಾಗಿ ಲಕ್ಕುಂಡಿಯಲ್ಲಿ "ಬಯಲು ವಸ್ತು ಸಂಗ್ರಹಾಲಯ " ನಿರ್ಮಿಸಲಾಗುವುದು. ಇದಕ್ಕೆ ಅಗತ್ಯವಿರುವ ಅನುದಾನ ನೀಡಲು ಸರ್ಕಾರ ಸಿದ್ಧವಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಹಿಂದೆ ಬಂಗಾರಪ್ಪ ಸರ್ಕಾರದಲ್ಲಿ ಇಂಥ ದೇವಸ್ಥಾನ, ಐತಿಹಾಸಿಕ ಸ್ಮಾರಕಗಳ ಪುನಃರುಜ್ಜೀವನಕ್ಕೆ ಆರಾಧನ ಯೋಜನೆ ಜಾರಿಯಲ್ಲಿತ್ತು.

ನಂತರದ ದಿನಗಳಲ್ಲಿ ಅದು ನಿಂತು ಹೋಗಿ ಪ್ರವಾಸೋದ್ಯಮ ಇಲಾಖೆ ಮೂಲಕ ಈ ಪುನಃಶ್ಚೇತನ ಕಾರ್ಯಗಳು ನಿರಂತರ ನಡೆಯುತ್ತಿವೆ. ಲಕ್ಕುಂಡಿ ಮಾದರಿಯಲ್ಲಿ ರಾಜ್ಯಾಧ್ಯಂತ ಕಾರ್ಯಗಳು ನಡೆಯಲಿವೆ ಎಂದು ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಕಾನೂನು ಉಲ್ಲಂಘಿಸಿ ಧರ್ಮದ ಹೆಸರು ಹೇಳಬಾರದು. ರಾಜ್ಯದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಎಷ್ಟೇ ಪ್ರಭಾವಿ ಆದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಪ್ರಾಚ್ಯಾವಶೇಷಗಳು ದೊರೆತ ಸ್ಥಳದ ಜಾಗ ಮತ್ತು ಮನೆಗಳನ್ನು ಸರ್ಕಾರಕ್ಕೆ ಹಸ್ತಾಂತರಿಸಿದವರಿಗೆ ಇದೇ ವೇಳೆ ಧನ್ಯವಾದ ಅರ್ಪಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ, ಸಚಿವ ರಹೀಂ ಖಾನ್, ಸಲೀಂ ಅಹ್ಮದ, ನರಗುಂದ ಶಾಸಕ ಸಿ.ಸಿ. ಪಾಟೀಲ, ಅಜ್ಜಂಪೀರ ಖಾದ್ರಿ, ಸಂಸದ ಪಿ.ಸಿ. ಗದ್ದಿಗೌಡ್ರ, ಜಿ.ಎಸ್. ಪಾಟೀಲ, ವಿಪ ಸದಸ್ಯ ಎಸ್.ವಿ. ಸಂಕನೂರ, ಜಿಪಂ ಮಾಜಿ ಅಧ್ಯಕ್ಷ ಸಿದ್ದಲಿಂಗೇಶ್ವರ ಪಾಟೀಲ ಮುಂತಾದವರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!