ಶಿವಮೊಗ್ಗ: ಖರ್ಗೆ ವಿರುದ್ಧ ಜ್ಞಾನೇಂದ್ರ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Published : Aug 04, 2023, 06:39 AM IST
ಶಿವಮೊಗ್ಗ: ಖರ್ಗೆ ವಿರುದ್ಧ  ಜ್ಞಾನೇಂದ್ರ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಸಾರಾಂಶ

ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಶಾಸಕ ಜ್ಞಾನೇಂದ್ರ ಅವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗುರುವಾರ ಶಿವಮೊಗ್ಗ ನಗರ ದಕ್ಷಿಣ ಬ್ಲಾಕ್‌ ಕಾಂಗ್ರೆ​ಸ್‌ ಸಮಿತಿ ವತಿಯಿಂದ ಎಸ್‌ಪಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗ (ಆ.4) ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಶಾಸಕ ಜ್ಞಾನೇಂದ್ರ ಅವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗುರುವಾರ ಶಿವಮೊಗ್ಗ ನಗರ ದಕ್ಷಿಣ ಬ್ಲಾಕ್‌ ಕಾಂಗ್ರೆ​ಸ್‌ ಸಮಿತಿ ವತಿಯಿಂದ ಎಸ್‌ಪಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ತೀರ್ಥಹಳ್ಳಿಯಲ್ಲಿ ಆ.1ರಂದು ಡಾ. ಕಸ್ತೂರಿ ರಂಗನ್‌ ವರದಿ ವಿರೋಧಿಸಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಅವರು ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದರಿಂದ ಕೋಟ್ಯಂತರ ಕಾರ್ಯಕರ್ತರು, ಅಭಿಮಾನಿಗಳ ಮನಸ್ಸಿಗೆ ಘಾಸಿಯಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಕಲಬುರಗಿ: ಮಲ್ಲಿಕಾರ್ಜುನ ಖರ್ಗೆ ಅವಹೇಳನ, ಆರಗ ಜ್ಞಾನೇಂದ್ರ ವಿರುದ್ಧ ಎಫ್‌ಐಆರ್‌

ಗೃಹ ಸಚಿವ ಸ್ಥಾನದಂತಹ ಹುದ್ದೆ ನಿಭಾಯಿಸಿದ್ದ ಆರಗ ಜ್ಞಾನೇಂದ್ರ ಅವ​ರು ಮಲ್ಲಿಕಾರ್ಜುನ ಖರ್ಗೆ ಅವರ ಬಣ್ಣ ಹಾಗೂ ತಲೆಕೂದÜಲು ಉದಾಹರಣೆ ಕೊಟ್ಟು, ‘ದುರಾದೃಷ್ಟಏನೆಂದರೆ ನಮ್ಮ ಅರಣ್ಯ ಸಚಿವರಿಗೆ ಮರ-ಗಿಡ ಅಂದರೆ ಏನೆಂದೇ ಗೊತ್ತಿಲ್ಲ, ಸುಟ್ಟು ಕರಕಲಾಗಿರುತ್ತಾರೆ ಎಂದಿ​ದ್ದಾ​ರೆ. ಈ ಹಿನ್ನೆಲೆ ಕೂಡಲೇ ಆರಗ ಜ್ಞಾನೇಂದ್ರ ಅವರ ವಿರುದ್ಧ ಕೇಸು ದಾಖಲಿಸಿ ಅವರನ್ನು ಬಂಧಿಸಬೇಕು ಹಾಗೂ ಪಕ್ಷದ ಕಾರ್ಯಕರ್ತರಲ್ಲಿ ಆರಗ ಜ್ಞಾನೇಂದ್ರ ಬಹಿರಂಗ ಕ್ಷಮೆ ಯಾಚಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಬೀದರ್‌: ಖರ್ಗೆ, ಖಂಡ್ರೆ ವಿರುದ್ಧ ವರ್ಣಭೇದದ ಮಾತು, ಶಾಸಕ ಅರಳಿ ಖಂಡನೀಯ

ಪ್ರತಿಭಟನೆಯಲ್ಲಿ ನಗರ ದಕ್ಷಿಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕಲೀಂ ಪಾಶಾ, ಸುವರ್ಣ ನಾಗರಾಜ್‌, ಸ್ಟೆಲ್ಲಾ ಮಾರ್ಟಿನ್‌, ಶಮೀಮ್‌ ಬಾನು, ಚಂದ್ರಕಲಾ, ರಜಿಯಾ, ಮುಜೀಬ್‌, ಸುಹೇಲ್‌, ಮಂಜುನಾಥ್‌, ಅರ್ಚನಾ ಭಾಗವಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ