ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಂಕಿ-ಅಂಶ ಮುಚ್ಚಿಟ್ಟು ಕೇಂದ್ರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದೆ ಎಂದು ಕಿಡಿ ಕಾರಿದ ಸಿ.ಟಿ.ರವಿ
ಹುಬ್ಬಳ್ಳಿ(ಜ.14): ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸುತ್ತಾರೆ. ಇದನ್ನು ಸಾಬೀತುಪಡಿಸಲು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಲಿ. ಒಂದು ವೇಳೆ ಸಾಬೀತುಪಡಿಸಿದರೆ ಬಿಜೆಪಿ ರಾಜ್ಯದ 28 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನೇ ಹಾಕಲ್ಲ. ಸಾಬೀತುಪಡಿಸದಿದ್ದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಬಾರದು ಎಂದು ಮಾಜಿ ಸಚಿವ ಸಿ.ಟಿ.ರವಿ ಸವಾಲು ಹಾಕಿದ್ದಾರೆ.
ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿದ ಸಿ.ಟಿ.ರವಿ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಂಕಿ-ಅಂಶ ಮುಚ್ಚಿಟ್ಟು ಕೇಂದ್ರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಎಸ್‌ಡಿಪಿಐ, ಪಿಎಫ್ಐ ಕೇಸ್ ವಾಪಸ್, ಹಿಂದೂ ಸಂಘಟನೆ ಕೇಸ್ ರೀ ಓಪನ್: ಸಿ.ಟಿ.ರವಿ ಕೆಂಡಾಮಂಡಲ
2004ರಿಂದ 2014ರವರೆಗೆ ಕಾಂಗ್ರೆಸ್ ಸರ್ಕಾರ ಇತ್ತು. ಆವಾಗ ಕರ್ನಾಟಕಕ್ಕೆ ಬಂದ ಅನುದಾನ ಎಷ್ಟು, ಪಾಲೆಷ್ಟು ಎಂದು ತಿಳಿಸಬೇಕು ಎಂದರು.