ವಿದ್ಯಾರ್ಥಿಗಳ ಸುಗಮ ಸಂಚಾರಕ್ಕೆ ನರ್ಮ್ ಬಸ್ ಕಲ್ಪಿಸಿ: ಶಾಸಕ ಯಶಪಾಲ್ ಸುವರ್ಣ

By Govindaraj S  |  First Published Jun 5, 2023, 10:43 PM IST

ಮುಂಗಾರು ಪ್ರವೇಶ ಹಾಗೂ 2023-24 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡಿದ್ದು, ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳಿಗೆ ತೆರೆಯಲು ಸೂಕ್ತ ಸಾರಿಗೆ ವ್ಯವಸ್ಥೆ ದೃಷ್ಟಿಯಿಂದ ಸ್ಥಗಿತಗೊಂಡಿರುವ ಮಾರ್ಗಗಳಲ್ಲಿ ಕೆಎಸ್‌ಆರ್‌ಟಿಸಿ ನರ್ಮ್ ಬಸ್‌ಗಳನ್ನು ಓಡಿಸಬೇಕು. 


ಉಡುಪಿ (ಜೂ.05): ಮುಂಗಾರು ಪ್ರವೇಶ ಹಾಗೂ 2023-24 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡಿದ್ದು, ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳಿಗೆ ತೆರೆಯಲು ಸೂಕ್ತ ಸಾರಿಗೆ ವ್ಯವಸ್ಥೆ ದೃಷ್ಟಿಯಿಂದ ಸ್ಥಗಿತಗೊಂಡಿರುವ ಮಾರ್ಗಗಳಲ್ಲಿ ಕೆಎಸ್‌ಆರ್‌ಟಿಸಿ ನರ್ಮ್ ಬಸ್‌ಗಳನ್ನು ಓಡಿಸಬೇಕು. ನಗರಸಭೆಯ 35 ವಾರ್ಡ್‌ಗಳಲ್ಲಿ ಬಸ್ ಗಳ ಅಗತ್ಯವಿರುವ ಮಾರ್ಗಗಳನ್ನು ಪಟ್ಟಿ ಮಾಡಿ ಹೆಚ್ಚುವರಿ ಬಸ್ ಸಂಚಾರ ಕಲ್ಪಿಸುವಂತೆ ಶಾಸಕ ಯಶಪಾಲ್ ಎ. ಸುವರ್ಣ ಸೂಚಿಸಿದ್ದಾರೆ. ಅವರು ಉಡುಪಿ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಂಗಣದಲ್ಲಿ ಮಳೆಗಾಲದ ಪೂರ್ವ ಸಿದ್ಧತೆ ಹಾಗೂ ವಿವಿಧ ಇಲಾಖೆಯ ಅಕಾರಿಗಳೊಂದಿಗೆ ಸೋಮವಾರ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಉಡುಪಿ ನಗರಕ್ಕೆ 2019-20 ನೇ ಸಾಲಿನಲ್ಲಿ 20 ನರ್ಮ್ ಬಸ್ಗಳ ಅನುಮತಿ ಸಿಕ್ಕಿ ಕಾರ್ಯಾಚರಣೆ ಮಾಡಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ 12 ಬಸ್‌ಗಳು ಕಾರ್ಯಾಚರಣೆ ಮಾಡುತ್ತಿದ್ದವು. 2022-23 ನೇ ಸಾಲಿನಲ್ಲಿ 17 ಬಸ್‌ಗಳು ಕಾರ್ಯಾಚರಣೆ ಮಾಡುತ್ತಿದೆ ಎಂದು ಅಕಾರಿಗಳು ಸಭೆಗೆ ಮಾಹಿತಿ ನೀಡಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಯಶಪಾಲ್ ಎ. ಸುವರ್ಣ, ಅಂಬಲಪಾಡಿಯಿಂದ ಮಲ್ಪೆ, ಮಣಿಪಾಲ ಪೆರಂಪಳ್ಳಿ ಟ್ರಿನಿಟಿಯಿಂದ ಹಾವಂಜೆ ಸಹಿತ ಕೆಲ ಮಾರ್ಗಗಳಲ್ಲಿ ನರ್ಮ್ ಬಸ್ ಓಡಿಸುವಂತೆ ಸಾರ್ವಜನಿಕರ ಬೇಡಿಕೆವಿದೆ. ಹೀಗಾಗಿ ಕೋವಿಡ್ ಪೂರ್ವದಲ್ಲಿದ್ದ 3 ಬಸ್‌ಗಳನ್ನು ಮರಳಿ ಉಡುಪಿಗೆ ತನ್ನಿ. 

Tap to resize

Latest Videos

undefined

ಪಂಚಾಯಿತಿ ಕೆಲಸಗಳು ವಿಳಂಬವಾಗದಿರಲಿ: ಶಾಸಕ ಶರತ್‌ ಬಚ್ಚೇಗೌಡ

ಹೆಚ್ಚುವರಿ ಬಸ್ಗಳ ಬೇಡಿಕೆವಿದ್ದರೆ ಪಟ್ಟಿ ಮಾಡಿ, ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಮಳೆಗಾಲ ಆರಂಭವಾಗುವುದರಿಂದ ಬೀದಿ ನಾಯಿಗಳ ಕಾಟ ಜೋರಾಗುತ್ತದೆ. ಮಕ್ಕಳು ಸಹಿತ ಸಾರ್ವಜನಿಕರ ಮೇಲೆ ದಾಳಿ ನಡೆಸುವ ಮುನ್ನವೇ ಪಶು ಸಂಗೋಪನೆ, ನಗರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮ ತೆಗೆದುಕೊಳ್ಳಬೇಕು. ಗ್ರಾಮಾಂತರ ಪ್ರದೇಶ ಸಹಿತ ಯಾವ ಭಾಗದಲ್ಲೂ ಸಾರ್ವಜನಿಕರಿಗೆ ಬೀದಿನಾಯಿಗಳಿಂದ ತೊಂದರೆ ಆಗಬಾರದೆಂದು ಸೂಚಿಸಿದರು. ನಗರಸಭೆಯ ಪರಿಸರ ಅಕಾರಿ ಮಾತನಾಡಿ, ಪಶು ಸಂಗೋಪನೆ ಇಲಾಖೆ ಜತೆ ಸೇರಿ ಕಳೆದೊಂದು ತಿಂಗಳ ಅವಧಿಯಲ್ಲಿ 256 ನಾಯಿಗಳನ್ನು ಸಂತಾನಹರಣ ಚಿಕಿತ್ಸೆಗೆ ಒಳಪಡಿಸಿ, ಸೂಕ್ತ ಆರೈಕೆ ಮಾಡಿದ್ದೇವೆ. 

209 ನಾಯಿಗಳಿಗೆ ರ್ಯಾಬಿಸ್ ಲಸಿಕೆ ಕೊಟ್ಟಿದ್ದೇವೆ ಎಂದರು. ನಮ್ಮಲ್ಲಿ ಸೂಕ್ತ ಪಾಲನಾ ಕೇಂದ್ರಗಳು ಇಲ್ಲದೇ ಇರುವುದರಿಂದ ಮಳೆಗಾಲದಲ್ಲಿ ನಾಯಿಗಳನ್ನು ಚಿಕಿತ್ಸೆಗೆ ಒಳಪಡಿಸುವುದು ನಾಯಿಯ ಆರೋಗ್ಯದ ದೃಷ್ಟಿಯಿಂದ ಸೂಕ್ತವಲ್ಲ. ಸಂತಾನಹರಣ ಚಿಕಿತ್ಸೆ ನಡೆಸಿದ ಗಾಯ ಒಣಗುವುದಕ್ಕೆ 7-8 ದಿನಗಳು ಬೇಕಾಗುತ್ತದೆ. ಮಳೆ ನೀರು ತಾಗಿ ಗಾಯ ದೊಡ್ಡಾಗುತ್ತದೆ ಎಂದು ವೈದ್ಯಾಕಾರಿಗಳು ಸಭೆಗೆ ಮಾಹಿತಿ ನೀಡಿದರು. ಮೆಸ್ಕಾಂ, ಅರಣ್ಯ, ಅಗ್ನಿಶಾಮಕ ಇಲಾಖೆ ಪರಸ್ಪರ ಸಮನ್ವಯದೊಂದಿಗೆ ಮುಂಗಾರು ಎದುರಿಸುವುದಕ್ಕೆ ಸಜ್ಜಾಗಬೇಕು. ಮಳೆಗಾಲ ಆರಂಭಕ್ಕೂ ಮುನ್ನವೇ ಅಪಾಯಕಾರಿ ಮರಗಳ ರೆಂಬೆ ತೆರವುಗೊಳಿಸಿ. ಮಳೆ ಹೆಚ್ಚಾಗಿ ಪ್ರವಾಹದಲ್ಲಿ ಸಿಲುಕಿರುವ ಸಾರ್ವಜನಿಕರ ರಕ್ಷಣೆಗೆ ಸೂಕ್ತ ಬೋಟ್‌ಗಳನ್ನು ಇಟ್ಟುಕೊಳ್ಳಿ. ಸಾರ್ವಜನಿಕರ ಫೋನ್ ಕರೆಗೆ ಸ್ಪಂದಿಸಿ ಜೀವ ರಕ್ಷಣೆಗೆ ಆದ್ಯತೆ ನೀಡಿ ಎಂದು ಅಕಾರಿಗಳಿಗೆ ಶಾಸಕ ಯಶಪಾಲ್ ತಿಳಿಸಿದರು. 

ಇಂದಿನಿಂದಲೇ ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದ್ದೇವೆ: ಮಾಜಿ ಸಿಎಂ ಬೊಮ್ಮಾಯಿ

ಅಗ್ನಿಶಾಮಕ ದಳದ ಜಿಲ್ಲಾ ಅಧಿಕಾರಿ ವಸಂತ ಕುಮಾರ್ ಎಚ್.ಎಂ. ಮಾತನಾಡಿ, ಉಡುಪಿ ನಗರದಲ್ಲಿ 3 ಬೋಟ್‌, ಜಿಲ್ಲೆಯಲ್ಲಿ 7 ಬೋಟ್‌ಗಳನ್ನು ಪ್ರವಾಹದಲ್ಲಿ ಸಿಲುಕಿರುವ ಸಾರ್ವಜನಿಕರ ರಕ್ಷಣೆಗೆ ಸಜ್ಜಾಗಿ ಇಟ್ಟುಕೊಂಡಿದ್ದೇವೆ. ರಸ್ತೆಗೆ ಬಿದ್ದ ಮರಗಳನ್ನು ಸಕಾಲದಲ್ಲಿ ತೆರವುಗೊಳಿಸಿ ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಮಾಡಿಕೊಡುತ್ತೇವೆ. ವಿಕೋಪ ಎದುರಿಸುವುದಕ್ಕೆ ಸಿಬ್ಬಂದಿಗಳನ್ನು ಸಜ್ಜಾಗಿ ಇರುವುದಕ್ಕೆ ಸೂಚಿಸಿದ್ದೇವೆ ಎಂದರು. ಶಾಸಕ ಯಶಪಾಲ್ ಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದರು. ಪೌರಾಯುಕ್ತ ರಮೇಶ್ ಪಿ. ನಾಯ್ಕಘಿ, ನಗರಸಭೆ ನಿಕಟಪೂರ್ವ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ, ಶ್ರೀಶ ಕೊಡವೂರು ಉಪಸ್ಥಿತರಿದ್ದರು.

click me!