ಪುತ್ತೂರಿನಲ್ಲಿ ‌ಮತ್ತೆ ಹಿಂದುತ್ವ ವರ್ಸಸ್ ಬಿಜೆಪಿ ಮಧ್ಯೆ ಬಿಗ್ ಫೈಟ್!

By Govindaraj S  |  First Published Jul 23, 2023, 12:44 PM IST

ಮುಂದಿನ ಲೋಕಸಭಾ ಚುನಾವಣೆಗೆ ಕರಾವಳಿ ಭಾಗದಲ್ಲಿ ಬಿಜೆಪಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ವಿಧಾನಸಭಾ ಚುನಾವಣೆಯ ಸೋಲಿನಿಂದ ಬಿಜೆಪಿ ಎಚ್ಚರಿಕೆ ಹೆಜ್ಜೆ ಇರಿಸುತ್ತಿದೆ. ಈ ಬಾರಿ ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿಯಲ್ಲಿ ಮತ್ತೆ ಹಿಂದುತ್ವ ವರ್ಸಸ್ ಬಿಜೆಪಿ ಮಧ್ಯೆ ಬಿಗ್ ಫೈಟ್ ಏರ್ಪಟ್ಟಿದೆ. 


ಪುತ್ತೂರು (ಜು.23): ಮುಂದಿನ ಲೋಕಸಭಾ ಚುನಾವಣೆಗೆ ಕರಾವಳಿ ಭಾಗದಲ್ಲಿ ಬಿಜೆಪಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ವಿಧಾನಸಭಾ ಚುನಾವಣೆಯ ಸೋಲಿನಿಂದ ಬಿಜೆಪಿ ಎಚ್ಚರಿಕೆ ಹೆಜ್ಜೆ ಇರಿಸುತ್ತಿದೆ. ಈ ಬಾರಿ ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿಯಲ್ಲಿ ಮತ್ತೆ ಹಿಂದುತ್ವ ವರ್ಸಸ್ ಬಿಜೆಪಿ ಮಧ್ಯೆ ಬಿಗ್ ಫೈಟ್ ಏರ್ಪಟ್ಟಿದೆ. ವಿಧಾನಸಭೆ ಸೋಲಿನ ಬಳಿಕ ಬಿಜೆಪಿಗೆ ಮತ್ತೊಂದು ಮಹಾ ಸವಾಲು ಎದುರಾಗಿದ್ದು, ಸಣ್ಣ ಚುನಾವಣೆಯಲ್ಲೂ ದೊಡ್ಡ ಪಕ್ಷಕ್ಕೆ ಮತ್ತೆ ಮಾಡು ಇಲ್ಲವೇ ಮಡಿ ಪರಿಸ್ಥಿತಿ ಎದುರಾಗಿದೆ. 

ಗ್ರಾ.ಪಂ ಉಪಚುನಾವಣೆಯಲ್ಲಿ ಬಿಜೆಪಿಗೆ ಮತ್ತೆ ಪುತ್ತಿಲ ಪರಿವಾರ ಸವಾಲಾಗಿದ್ದು, ಪುತ್ತೂರಿನ ಎರಡು ಗ್ರಾ.ಪಂ ವಾರ್ಡ್‌ಗಳನ್ನ ಗೆಲ್ಲಲು ಬಿಜೆಪಿ ಹರಸಾಹಸ ಪಡಬೇಕಾಗಿದೆ. ಇಂದು ಪುತ್ತೂರಿನ ಎರಡು ವಾರ್ಡ್‌ಗಳಲ್ಲಿ ಮತದಾನ ಆರಂಭವಾಗಿದ್ದು, ನಿಡ್ಪಳ್ಳಿ ಮತ್ತು ಆರ್ಯಾಪು ಗ್ರಾ.ಪಂನ ಎರಡು ವಾರ್ಡ್‌ಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದೆ.ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ವಿರುದ್ಧವೇ ಪುತ್ತಿಲ ಪರಿವಾರ ಸ್ಪರ್ಧೆ  ಏರ್ಪಟ್ಟಿದ್ದು, ಎರಡೂ ವಾರ್ಡ್‌ಗಳಲ್ಲೂ ಬೆಂಬಲಿತ ಅಭ್ಯರ್ಥಿಗಳನ್ನು  ಅರುಣ್ ಪುತ್ತಿಲ ಕಣಕ್ಕಿಳಿಸಿದ್ದಾರೆ. 

Tap to resize

Latest Videos

ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳು ಇಲ್ಲ: ಮಾಜಿ ಸಂಸದ ಉಗ್ರಪ್ಪ

ಅತ್ತ ಕಾಂಗ್ರೆಸ್ ನಿಂದಲೂ ಬೆಂಬಲಿತ ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಪುತ್ತೂರು ಬಿಜೆಪಿ ಮಾಜಿ ಶಾಸಕರ ಹಾದಿಯಾಗಿ ಕೇಸರಿ ನಾಯಕರಿಂದ ಭರ್ಜರಿ ಪ್ರಚಾರ ನಡೆಸಲಾಗಿದೆ. ಗ್ರಾ.ಪಂ ಉಪಚುನಾವಣೆಯಲ್ಲೂ ಬಿಜೆಪಿಗೆ ಪುತ್ತಿಲ ವಿರುದ್ದ ಪ್ರತಿಷ್ಠೆ ಏರ್ಪಟ್ಟಿದ್ದು, ಪುತ್ತಿಲ ಪರಿವಾರದ ವಿರುದ್ದ ಗ್ರಾ.ಪಂ ಸೋತರೇ ಬಿಜೆಪಿಗೆ ಭಾರೀ ಮುಖಭಂಗ ಸಾಧ್ಯತೆಯಿದೆ. ಕಾಂಗ್ರೆಸ್ ಗೆದ್ದರೂ ಬಿಜೆಪಿಗೆ ಭಾರೀ ಹಿನ್ನಡೆಯಾಗುವ ಭೀತಿಯಿದ್ದು, ನಿಡ್ಪಳ್ಳಿ ಮತ್ತು ಆರ್ಯಾಪು ಗ್ರಾ.ಪಂ ಎರಡೂ ವಾರ್ಡ್‌ಗಳಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಿದ್ದಾರೆ. 

ದಲಿತರ ಜಮೀನು ಕಾಪಾಡಲು ಕಾಯ್ದೆ ಶೀಘ್ರ ತಿದ್ದುಪಡಿ: ಸಿದ್ದರಾಮಯ್ಯ

ಇನ್ನು ಸದಸ್ಯರಿಬ್ಬರ ನಿಧನದ ಹಿನ್ನೆಲೆ ಇಂದು ಉಪಚುನಾವಣೆ ನಡೆಯುತ್ತಿದ್ದು,  ಆ ಎರಡೂ ವಾರ್ಡ್‌ಗಳನ್ನು ಮತ್ತೆ ಗೆಲ್ಲುವುದು ಬಿಜೆಪಿಗೆ ಅನಿವಾರ್ಯವಾಗಿದೆ.  ನಿಡ್ಪಳ್ಳಿ ವಾರ್ಡ್ 2ರಲ್ಲಿ ಬಿಜೆಪಿ ಬೆಂಬಲಿತರಾಗಿ ಚಂದ್ರಶೇಖರ ಪ್ರಭು ಹಾಗೂ ಆರ್ಯಾಪು ವಾರ್ಡ್ 2ರಲ್ಲಿ ಜಗದೀಶ್ ಭಂಡಾರಿ ಸ್ಪರ್ಧಿಸಿದ್ದು, ಪುತ್ತಿಲ ಪರಿವಾರದಿಂದ ನಿಡ್ಪಳ್ಳಿ ವಾರ್ಡ್ 2ರಲ್ಲಿ ಜಗನ್ನಾಥ ರೈ ಹಾಗೂ ಆರ್ಯಾಪು ವಾರ್ಡ್ 2ರಲ್ಲಿ ಸುಬ್ರಹ್ಮಣ್ಯ ಬಲ್ಯಾಯ ಸ್ಪರ್ಧಿಸಿದ್ದಾರೆ. ಇಂದು ನಡೆಯುವ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಮತ್ತೊಮ್ಮೆ ಬಿಜೆಪಿ ಭವಿಷ್ಯ ನಿರ್ಧಾರವಾಗಲಿದೆ. 

click me!