ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಕಾನೂನು ಸುವ್ಯವಸ್ಥೆ ಎನ್ನುವುದೇ ಇಲ್ಲ: ಆರ್.ಅಶೋಕ್‌

Published : Oct 24, 2025, 05:52 PM IST
Congress law and order

ಸಾರಾಂಶ

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಕಾನೂನು ಸುವ್ಯವಸ್ಥೆ ಇಲ್ಲವೇ ಇಲ್ಲ. ಗೃಹ ಸಚಿವ ಪರಮೇಶ್ವರ ಅವರಿಗೆ ಏನೇ ಕೇಳಿದರೂ ಗೊತ್ತಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಹೇಳಿದರು.

ಹುಬ್ಬಳ್ಳಿ (ಅ.24): ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಕಾನೂನು ಸುವ್ಯವಸ್ಥೆ ಇಲ್ಲವೇ ಇಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮೂವರು ಸೇರಿ ಯುವತಿ ಮೇಲೆ ಅತ್ಯಾ*ಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದರು. ಸಿಎಂ ಮಜಾವಾದಿ, ಡಿಸಿಎಂ ಡಿ.ಕೆ. ಶಿವಕುಮಾರ ಪವರ್ ಗ್ರಾಬಿಂಗ್'ನಲ್ಲಿ ನಿರತರಾಗಿದ್ದಾರೆ. ಇನ್ನು ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಏನೇ ಕೇಳಿದರೂ ಗೊತ್ತಿಲ್ಲ, ವರದಿ ಪಡೆದು ಹೇಳುತ್ತೇನೆ ಎನ್ನುತ್ತಾರೆ. ಹೀಗಾಗಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಕಾನೂನು ಸುವ್ಯವಸ್ಥೆ ಎನ್ನುವುದೇ ಇಲ್ಲ ಎಂದು ಹರಿಹಾಯ್ದರು.

ಕಾಂಗ್ರೆಸ್ ಪಕ್ಷಕ್ಕೆ ಹಣ ಎಲ್ಲಿಂದ ಬರುತ್ತದೆ ಎನ್ನುವುದನ್ನು ಮೊದಲು ಪ್ರಿಯಾಂಕ್‌ ಖರ್ಗೆ ಸ್ಪಷ್ಟಪಡಿಸಲಿ. ಆ ಮೇಲೆ ಸಂಘಕ್ಕೆ ಸಂಬಂಧಪಟ್ಟಂತೆ ಹಣದ ಕುರಿತಂತೆ ಮಾಹಿತಿ ಕೇಳಲಿ. ಸಂಘದ ಹಣದ ಮಾಹಿತಿ ಪಡೆಯಲು ಬೇರೆ ಬೇರೆ ಸಂಸ್ಥೆಗಳಿವೆ. ಅವರ ಪಕ್ಷದ್ದೇ ಊರ ಬಾಗಿಲು ಆಗಿದೆ. ಇನ್ನೊಬ್ಬರ ಮನೆ ಬಾಗಿಲು ಏನು ನೋಡುತ್ತಾರೆ ಎಂದು ತಿರುಗೇಟು ನೀಡಿದರು. ಇನ್ನು ಆರ್‌ಎಸ್‌ಎಸ್ ನೋಂದಣಿ ಪ್ರಶ್ನಿಸುವ ಕಾಂಗ್ರೆಸ್ ಮೊದಲು ಸಂವಿಧಾನದ ಯಾವ ಕಾನೂನಿನಲ್ಲಿ ನೋಂದಣಿ ಕಡ್ಡಾಯವಿದೆ ಎನ್ನುವುದನ್ನು ಹೇ‍ಳಲಿ. ಯಾರು ಬೇಕಾದರೂ ಯಾವುದೇ ಸಂಘಟನೆ ಆರಂಭಿಸಬಹುದು, ನೋಂದಣಿ ಕಡ್ಡಾಯವಲ್ಲ. ಈ ವರೆಗೆ ಸಂಘ ಯಾವುದೇ ನಿವೇಶನ, ಕಟ್ಟಡ ಹೊಂದಿಲ್ಲ, ಕೆಲವೆಡೆ ಕಟ್ಟವಿದ್ದರೂ ಅದು ಅಲ್ಲಿನ ಸ್ಥಳೀಯ ನಾಯಕರ ಹೆಸರಿನಲ್ಲಿ ಇದೆ ಎಂದರು.

ಡಿಕೆಶಿ ಹರಕೆಯ ಕುರಿ: ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಪಕ್ಕಾ, ಇದಕ್ಕೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಜಾರಕಿಹೊಳಿ ಮುಂದಿನ ಸಿಎಂ ಎಂದು ಹೇಳಿರುವುದೇ ಸಾಕ್ಷಿ. ಸಿಎಂ ಸಿದ್ದರಾಮಯ್ಯ ಮನೆಯಲ್ಲಿ ಏನೋ ಚರ್ಚೆ ಆಗಿದೆ, ಅದನ್ನು ಯತೀಂದ್ರ ಹೇಳಿದ್ದಾರೆ. ಹೀಗಾಗಿ, ಟೆಂಪಲ್ ರನ್ ಮಾಡುತ್ತಿರುವ ಡಿಸಿಎಂ ಡಿ.ಕೆ. ಶಿವಕುಮಾರ ಹರಕೆಯ ಕುರಿ ಆಗಲಿದ್ದಾರೆ ಎಂದು ಕಟುಕಿದರು. ಡಿ.ಕೆ. ಶಿವಕುಮಾರ, ಹಾಸನಾಂಬೆ ದರ್ಶನದ ವೇಳೆ ಎರಡು ಹೂ ಬಿದ್ದಿವೆ. ಇದರ ಅರ್ಥ ಜಾತ್ರೆಯಲ್ಲಿ ಕುರಿಗೆ ಮಾಲೆ ಹಾಕಿ ನಂತರ ಅದನ್ನು ಬಲಿ ನೀಡಲಾಗುತ್ತದೆ. ಅದರಂತೆ ಡಿಕೆಶಿ ಅವರನ್ನು ಬಲಿ ನೀಡಲು ಸಿದ್ದರಾಮಯ್ಯ ಕುತಂತ್ರ ರೂಪಿಸಿದ್ದಾರೆ. ಇದು ಕೇವಲ ಟ್ರಯಲ್ ಆಗಿದ್ದು, ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಪಿಕ್ಚರ್ ಬಾಕಿಯಿದೆ ಎಂದರು.

ಸಿಎಂ ಕುರ್ಚಿ ಅಲುಗಾಡುತ್ತಿದ್ದು, ರಾಜ್ಯದಲ್ಲಿ ಬಿದ್ದಿರುವ ತಗ್ಗು-ಗುಂಡಿಗಳನ್ನು ಮುಚ್ಚಲು ಸರ್ಕಾರದ ಬಳಿ ದುಡ್ಡಿಲ್ಲ, ಬೆಳೆ ಹಾನಿಗೆ ಪರಿಹಾರ ನೀಡಲು ಆಗುತ್ತಿಲ್ಲ, ಇದರಿಂದ ಜನರ ದಿಕ್ಕು ತಪ್ಪಿಸಲು ಆರ್‌ಎಸ್‌ಎಸ್ ವಿಚಾರವನ್ನು ಕಾಂಗ್ರೆಸ್ ಮುನ್ನೆಲೆಗೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಚಿವ ಪ್ರಿಯಾಂಕ್ ಖರ್ಗೆ ಬಹಿರಂಗ ಚರ್ಚೆ ಹೇಳಿಕೆ ವಿಚಾರವಾಗಿ ಮಾತನಾಡಿ, ಈ ಕುರಿತು ನಾನು ಪ್ರತಿಕ್ರಿಯೆ ನೀಡುವುದಿಲ್ಲ, ಬೇಕಿದ್ದರೇ ಅವರ ಖಾತೆಯ ಅಭಿವೃದ್ಧಿ ಕುರಿತಂತೆ ಚರ್ಚಿಸಲು ಸಿದ್ಧ. ಅವರು ಐಟಿ-ಬಿಟಿ ಸಚಿವರಾಗಿ ಏನೂ ಅಭಿವೃದ್ಧಿ ಮಾಡಿದ್ದಾರೆ ಎನ್ನುವುದನ್ನು ಹೇಳಿಕೊಳ್ಳಲಿ ಎಂದರು.

ಯಾರಿಗೆ ಬೇಕಾದರೂ ಅನುಮತಿ ನೀಡಲಿ: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಪ್ರತಿಯಾಗಿ ಭೀಮ್‌ ಆರ್ಮಿ ತಮಗೂ ಅನುಮತಿ ನೀಡುವಂತೆ ಕೋರಿದ ಕುರಿತು ಪ್ರತಿಕ್ರಿಯಿಸಿ, ಯಾರಿಗೆ ಬೇಕಾದರೂ ಕಾರ್ಯಕ್ರಮ ಮಾಡಲು ಮತ್ತು ಪಥ ಸಂಚಲನಕ್ಕೆ ಅನುಮತಿ ನೀಡಲಿ, ದಲಿತ, ಲಿಂಗಾಯತ, ಒಕ್ಕಲಿಗರು ಯಾರೇ ಮೆರೆವಣಿಗೆ ಮಾಡಲಿ ನಮ್ಮ ಅಭ್ಯಂತರವಿಲ್ಲ ಎಂದರು.

ಹಾಲು ಜೇನಿನಂತೆ ಇದ್ದೇವೆ

ಬಿಜೆಪಿ-ಜೆಡಿಎಸ್ ಭಿನ್ನಮತ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ನಾವಿಬ್ಬರು ಹಾಲು ಜೇನಿನಂತೆ ಇದ್ದೇವೆ. ನಮ್ಮಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ, ಮುಂದಿನ ಚುನಾವಣೆ ಕುರಿತಂತೆ ಸಮನ್ವಯ ಸಾಧಿಸಲು ಎಚ್.ಡಿ. ಕುಮಾರಸ್ವಾಮಿ ಮಾತನಾಡಿದ್ದಾರೆ. ಆ ಕುರಿತಂತೆ ಪಕ್ಷದ ವರಿಷ್ಠರು ಚರ್ಚೆ ಮಾಡಲಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ
India Latest News Live: ಭಾರತದ ಶಾಶ್ವತ ಬಾಹ್ಯಾಕಾಶ ನಿವಾಸ ಬಿಎಎಸ್-01ಕ್ಕೆ ನೀಲಿ ನಕ್ಷೆ ಅಂತಿಮಗೊಳಿಸಿದ ಇಸ್ರೋ