
ಬೆಂಗಳೂರು (ಜು.28): ಹಿರಿಯ ನಾಯಕರಿಗೆ ಬೆದರಿಕೆ ಹಾಕುವ ಉದ್ದೇಶದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂಬ ನಾಟಕ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಹತ್ತು ವರ್ಷಗಳಿಂದ ರಾಜಕೀಯ ನಿವೃತ್ತಿ ಎನ್ನುತ್ತಿದ್ದಾರೆ. ಚುನಾವಣೆ ಸಮೀಪ ಬಂದಾಗ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ. ಹಿರಿಯ ನಾಯಕರಿಗೆ ಬೆದರಿಕೆ ಹಾಕಲು ಅವರು ಈ ರೀತಿ ನಾಟಕ ಮಾಡುತ್ತಿದ್ದಾರೆ. ಯಾವುದೇ ನಾಯಕರು ಶಾಶ್ವತವಲ್ಲ. ಯಾವ ನಾಯಕರು ಹೋದರೂ ಮತ್ತೊಬ್ಬರು ಬೆಳೆಯುತ್ತಾರೆ ಎಂದರು.
ಚುನಾವಣೆಗೆ ಸಮೀಪವಾಗುವಾಗ ಬಿಜೆಪಿ ಮುಖಂಡರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ. ಪ್ರಕಾಶ್ ರಾಜ್, ಭಗವಾನ್ ಮೊದಲಾದವರು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದರೂ ಅವರ ವಿರುದ್ಧ ಕ್ರಮ ಇರುವುದಿಲ್ಲ. ನೀಟ್ ಪ್ರತಿಭಟನೆ ಸಮಯದಲ್ಲಿ ಕೆಲವರು ಪೋಸ್ಟರ್‌ಗಳನ್ನು ಹಿಡಿದು ಪೊಲೀಸರಿಗೆ ಸವಾಲು ಹಾಕಿದ್ದರು. ಅವರ ವಿರುದ್ಧ ಕ್ರಮ ಕೈಗೊಳ್ಳದ ಪೊಲೀಸರು ಸಿ.ಟಿ.ರವಿ ವಿರುದ್ಧ ಮಾತ್ರ ಎಫ್‌ಐಆರ್ ಮಾಡಿದ್ದಾರೆ. ಅವರ ಹೇಳಿಕೆಯನ್ನು ತಿರುಚಲಾಗಿದೆ. ಇದರ ವಿರುದ್ಧ ಚಿಕ್ಕಮಗಳೂರಿನಲ್ಲಿ ಹೋರಾಟ ಮಾಡುವುದಾಗಿ ಅಶೋಕ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.