
ಬೆಂಗಳೂರು (ಏ.23): ಕಾಶ್ಮೀರದಲ್ಲಿ ಉಗ್ರರ ದಾಳಿ ಹಿನ್ನೆಲೆಯಲ್ಲಿ ನೋವಿನ ಆಕ್ರಂದನವಿದ್ದರೂ ಸಾವಿನ ಮನೆಯಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ರಂತಹ ಕಾಂಗ್ರೆಸ್ ನಾಯಕರಿಗೆ ನಿಜಕ್ಕೂ ನಾಚಿಕೆಯಾಗಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಇಡೀ ದೇಶ ಆಘಾತದಲ್ಲಿದೆ. ನೋವಿನ ಮಡುವಿನಲ್ಲಿರುವ ಸಂತ್ರಸ್ತ ಕುಟುಂಬಗಳ ಆಕ್ರಂದನ ಕಂಡು ಕಣ್ಣೀರಿಡುತ್ತಿದೆ. ಇಂತಹ ಸೂಕ್ಷ್ಮ ಸನ್ನಿವೇಶದಲ್ಲಿ, ಸಾವಿನ ಮನೆಯಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ದಿನೇಶ್ ಗುಂಡೂರಾವ್ ಅವರಂತಹ ಕಾಂಗ್ರೆಸ್ ನಾಯಕರಿಗೆ ನಿಜಕ್ಕೂ ನಾಚಿಕೆಯಾಗಬೇಕು.
ಕನಿಷ್ಠ ಸಂವೇದನೆಯೂ ಇಲ್ಲದ, ಯಾವ ಸಂದರ್ಭದಲ್ಲಿ ಏನು ಮಾತನಾಡಬೇಕು ಎನ್ನುವ ಕನಿಷ್ಠ ಜ್ಞಾನವೂ ಇಲ್ಲದ ಇಂತಹವರಿಗೆ ಮಂತ್ರಿಗಿರಿ ಕೊಟ್ಟು ಕೂರಿಸಿರುವ ಪುಣ್ಯಾತ್ಮರು ಯಾರೋ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ದೇಶದ್ರೋಹಿಗಳನ್ನು ಸಮರ್ಥನೆ ಮಾಡಿಕೊಳ್ಳುವ ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಪಾಠ ಕಲಿಯಬೇಕಾ? ಲಜ್ಜೆಗೇಡಿತನಕ್ಕೂ ಒಂದು ಮಿತಿ ಇರಬೇಕು ಎಂದು ಅವರು ಸಾಮಾಜಿಕ ಜಾಲತಾಣದ ಮೂಲಕ ವಾಗ್ದಾಳಿ ನಡೆಸಿದ್ದಾರೆ.
165 ಕೋಟಿ ಗುಳಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಧರ್ಮ, ಜಾತಿ ಒಡೆಯುವುದರಲ್ಲಿ ನಂಬರ್ 1 ಆಗಿದ್ದು, ಈಗ ಜಾತಿ ಗಣತಿ ಹೆಸರಲ್ಲಿ ಹಿಂದೂಗಳನ್ನು ಪೀಸ್, ಪೀಸ್ ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆ-2ಕ್ಕೆ ಚಾಲನೆ ನೀಡಿದ ವೇಳೆ ಮಾತನಾಡಿ, ಜಾತಿ ಗಣತಿ ಮಾಡದೇ ಸಿಎಂ ಸಿದ್ದರಾಮಯ್ಯ ₹165 ಕೋಟಿ ಗುಳುಂ ಮಾಡಿದ್ದಾರೆ. ಅವರು ಧರ್ಮ, ಜಾತಿಗಳನ್ನು ಒಡೆಯುವುದರಲ್ಲಿ ನಂಬರ್ 1 ಆಗಿದ್ದಾರೆ. ಈ ಹಿಂದೆ ವೀರಶೈವ ಲಿಂಗಾಯತ ಧರ್ಮ ಒಡೆಯಲು ಹೋಗಿ ಕಪಾಳ ಮೋಕ್ಷಕ್ಕೆ ಒಳಗಾಗಿದ್ದರು. ಈಗ ಜಾತಿ ಗಣತಿ ವರದಿ ತೋರಿಸಿ ಹಿಂದೂಗಳನ್ನು ಒಡೆಯುತ್ತಿದ್ದಾರೆ. ಮುಸ್ಲಿಂ ಧರ್ಮದಲ್ಲೂ 10 ಜಾತಿಗಳಿವೆ. ಒಂದೂ ಡಿವೈಡ್ ಮಾಡಿಲ್ಲ. ಆದರೆ ಹಿಂದುಗಳನ್ನು ಪೀಸ್ ಪೀಸ್ ಮಾಡಿದ್ದಾರೆ ಎಂದು ಆರೋಪಿಸಿದರು.
ಕರ್ನಾಟಕ ಹೈಕೋರ್ಟ್ ನಾಲ್ವರು ಜಡ್ಜ್‌ಗಳ ವರ್ಗಾವಣೆಗೆ ಶಿಫಾರಸು
ಲೋಕಾಯುಕ್ತ ತನಿಖೆಗೆ ಆಗ್ರಹ ಸಮೀಕ್ಷೆ ಮಾಡಿದವರು ಮನೆ ಮನೆಗೆ ಬಂದಿಲ್ಲ ಎಂದು ಸ್ವತಃ ಕಾಂಗ್ರೆಸ್ ಶಾಸಕರೇ ಹೇಳಿದ್ದಾರೆ. ಮನೆ ಮನೆಗೆ ಹೋಗದೇ ಸರ್ವೇ ಮಾಡಿರುವುದು ಸಿದ್ದರಾಮಯ್ಯ ಅವರ ಟೆಕ್ನಿಕ್. ಸಮೀಕ್ಷೆ ಮಾಡದೇ ಅದಕ್ಕೆ ಮೀಸಲಿಟ್ಟ ₹165 ಕೋಟಿ ಲೂಟಿ ಮಾಡಿದ್ದಾರೆ. ಈ ಬಗ್ಗೆ ಲೋಕಾಯುಕ್ತ ತನಿಖೆ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ದ್ದರಾಮಯ್ಯ ಫೆವಿಕಲ್ ಹಚ್ಚಿಕೊಂಡಂತೆ ಅಧಿಕಾರಕ್ಕೆ ಅಂಟಿಕೊಂಡಿದ್ದಾರೆ. ಅವರು ಫೆವಿಕಾಲ್ ಸಿಎಂ. ಮಾಜಿ ಪ್ರಧಾನಿ ದೇವೇಗೌಡರು ಸಿದ್ದರಾಮಯ್ಯ ಅವರನ್ನು ಡಿಸಿಎಂ, ಹಣಕಾಸು ಮಂತ್ರಿ ಮಾಡಿದರು. ಅಧಿಕಾರ ಇರುವ ತನಕ ಸಿದ್ದರಾಮಯ್ಯ ಜೆಡಿಎಸ್‌ನಲ್ಲಿದ್ದರು. ಅಧಿಕಾರ ಕೊಡಲ್ಲ ಎಂದಾಗ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿ ಸಿಎಂ ಆದರು. ಸಿಎಂ ಬದಲಾವಣೆ ಕುರಿತು ಕಾಂಗ್ರೆಸ್‌ನಲ್ಲಿ ಒಪ್ಪಂದ ಆಗಿರುವುದು ನೂರಕ್ಕೆ ನೂರು ಸತ್ಯ. ಆಗ ಒಪ್ಪಿದ್ದ ಸಿದ್ದರಾಮಯ್ಯ ಈಗ ಮಾತು ತಪ್ಪುತ್ತಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.