
ದಾವಣಗೆರೆ (ಏ.4): ದಾಖಲೆಯ 16 ಬಜೆಟ್ ಮಂಡಿಸಿದ್ದಾಗಿ ಬೀಗುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಣ್ಕಟ್ಟು ವಿದ್ಯೆ ಕಲಿತು, ಅಭಿವೃದ್ಧಿಗೆ ಹಣ ಕೊಡದೆ, ಗ್ಯಾರಂಟಿಗಳನ್ನೂ ಸರಿಯಾಗಿ ಅನುಷ್ಟಾನಗೊಳಿಸದೇ, ಆರ್ಥಿಕ ಶಿಸ್ತು ಪಾಲನೆ ಮಾಡುತ್ತಿರುವುದಾಗಿ ಸುಳ್ಳು ಹೇಳಿ, ಅದೇ ಸುಳ್ಳಿನ ಪುಂಗಿ ಊದುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದೇ ಒಂದು ಅಭಿವೃದ್ಧಿ ಕಾರ್ಯವನ್ನೂ ಕೈಗೊಳ್ಳದ ಸಿದ್ದರಾಮಯ್ಯಗೆ ಸುಳ್ಳುರಾಮಯ್ಯನೆಂಬ ಬಿರುದು ಕೊಡಬೇಕಷ್ಟೇ ಎಂದರು. ಇಂದಿರಾ ಕಿಟ್ ಕೊಡುತ್ತೇವೆಂದರು? ಕಿಟ್ ಎಲ್ಲಿ ಕೊಟ್ಟಿದ್ದಾರೆ? ಸಿದ್ದರಾಮಯ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಕೊಡುತ್ತಿರುವುದೇ ಕೇಂದ್ರ ಸರ್ಕಾರ. ಚೀಲ ಮಾತ್ರ ಸಿದ್ದರಾಮಯ್ಯ ಅವರದ್ದು ಎಂದು ವ್ಯಂಗ್ಯವಾಡಿದರು.
ಗ್ಯಾರಂಟಿಗಳ ವಿಚಾರದಲ್ಲೂ ಸಿಎಂ ಸಿದ್ದರಾಮಯ್ಯ ಸುಳ್ಳಿನ ಪುಂಗಿ ಊದುತ್ತಲೇ ಇದ್ದಾರೆ. ಅಷ್ಟು ಸಾಲದ್ದಕ್ಕೆ ತಾವು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ ಅಂತಾ ತಮ್ಮನ್ನು ತಾವೇ ಹೊಗಳಿಕೊಂಡಿದ್ದಾರೆ. ಇದಕ್ಕಿಂತ ನಾಚಿಕೆಗೇಡಿನದು ಇನ್ನೇನಿದೆ ಎಂದು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.