ರಾಹುಲ್ ಗಾಂಧಿ ಅವರದ್ದು ಮಾನವ ಜಾತಿ ಎಂದು ಸಚಿವ ಕೆ.ವೆಂಕಟೇಶ್ ಹೇಳಿದರು. ಚಾಮರಾಜನಗರದ ಮೂಗೂರು ಕ್ರಾಸ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಹುಲ್ ಗಾಂಧಿ ಜಾತಿ ಬಗ್ಗೆ ಟೀಕಿಸಿದ್ದ ಬಸನಗೌಡ ಯತ್ನಾಳ್ ಮಾತಿಗೆ ಕಿಡಿಕಾರಿದರು.
ಚಾಮರಾಜನಗರ (ಸೆ.16): ರಾಹುಲ್ ಗಾಂಧಿ ಅವರದ್ದು ಮಾನವ ಜಾತಿ ಎಂದು ಸಚಿವ ಕೆ.ವೆಂಕಟೇಶ್ ಹೇಳಿದರು. ಚಾಮರಾಜನಗರದ ಮೂಗೂರು ಕ್ರಾಸ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಹುಲ್ ಗಾಂಧಿ ಜಾತಿ ಬಗ್ಗೆ ಟೀಕಿಸಿದ್ದ ಬಸನಗೌಡ ಯತ್ನಾಳ್ ಮಾತಿಗೆ ಕಿಡಿಕಾರಿದರು. ಯತ್ನಾಳ್ ತಮ್ಮ ತೀಟೆಗಾಗಿ ಆ ರೀತಿ ಮಾತನಾಡುತ್ತಿದ್ದಾರೆ. ನಮ್ಮದೆಲ್ಲ ಮಾನವ ಜಾತಿ, ಯತ್ನಾಳ್‌ಗೆ ಮಾತನಾಡುವ ತೀಟೆ, ಮಾತನಾಡುತ್ತಾರೆ. ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳಬಾರದು ಎಂದರು. ಮುನಿರತ್ನ ಬಂಧನ ವಿಚಾರಕ್ಕೆ ಮಾತನಾಡಿ, ಜಾತಿ ನಿಂದನೆ ಮಾಡಿದವರನ್ನ ಬಂಧಿಸುವುದು ತಪ್ಪಾ? ಬಿಜೆಪಿ ಎಲ್ಲವನ್ನೂ ರಾಜಕೀಯ ಉದ್ದೇಶ ಎನ್ನುತ್ತದೆ.
ಸಿದ್ದರಾಮಯ್ಯ ಮೇಲೆ ಕೇಸ್ ಹಾಕಿದ್ದು ರಾಜಕೀಯ ಉದ್ದೇಶ ಅಲ್ವಾ ಎಂದು ಬಿಜೆಪಿ ವಿರುದ್ಧ ಗುಡುಗಿದರು. ಸಿದ್ದರಾಮಯ್ಯ ಪ್ರಭಾವ ಬೀರಿ ಸೈಟ್ ತಗೊಂಡಿದ್ದಾ? ಬಿಜೆಪಿ ಮಾಡಿದ್ದೆಲ್ಲಾ ಸರಿ, ನಾವು ಮಾಡೋದು ತಪ್ಪಾ.? ಕೇಂದ್ರ ಸರ್ಕಾರ ಇ.ಡಿ, ಸಿಬಿಐ ಬಿಟ್ಟು ಎಲ್ಲರನ್ನೂ ಅರೆಸ್ಟ್ ಮಾಡಿಸಲಿಲ್ವಾ. ಆತ್ಮ ಸಾಕ್ಷಿ ಇಟ್ಟುಕೊಂಡು ಮಾತನಾಡಿ, ರಾಜಕೀಯವಾಗಿ ಮಾತನಾಡಬೇಡಿ. ಕೇಂದ್ರದಲ್ಲಿ ಹಿಂದೆ ನಮ್ಮ ಸರ್ಕಾರ ಇದ್ದಾಗ ಇಡಿ, ಸಿಬಿಐ ಬಳಸಿ ಅರೆಸ್ಟ್ ನಡಿಸಿದ್ವಾ?. ಮುನಿರತ್ನ ಜಾತಿ ನಿಂದನೆ ಮಾಡಿದ್ದಾರೆ , ಅದಕ್ಕೆ ಅರೆಸ್ಟ್ ಮಾಡಿದ್ದಾರೆ. ಅದರಲ್ಲಿ ತಪ್ಪೇನಿದೆ ಎಂದರು.
ಯಾರೂ ಗಲಭೆಗೆ ಅವಕಾಶ ಕೊಡಬಾರದು: ಎಚ್‌ಡಿಕೆಗೆ ಸಚಿವ ಮಧು ಬಂಗಾರಪ್ಪ ಟಾಂಗ್
ಪ್ರಜಾಪ್ರಭುತ್ವ ದಿನದ ಅರ್ಥಪೂರ್ಣ ಆಚರಣೆ: ಗಡಿಜಿಲ್ಲೆ ಚಾಮರಾಜನಗರದಲ್ಲಿಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ವಿಶಿಷ್ಟ, ವಿನೂತನವಾಗಿ ಆಚರಿಸಲಾಯಿತು. ಬೀದರ್‌ನಿಂದ ಚಾಮರಾಜನಗರದವರೆಗೆ ರಾಜ್ಯದ 31 ಜಿಲ್ಲೆಗಳನ್ನೊಳಗೊಂಡ ಅತಿ ಉದ್ದದ ಮಾನವ ಸರಪಳಿಯನ್ನು ರಾಜ್ಯಾದ್ಯಂತ ಏಕಕಾಲದಲ್ಲಿ ಆಯೋಜಿಸಲಾಗಿತ್ತು. ಚಾಮರಾಜನಗರ ಜಿಲ್ಲೆಯ ಸರಹದ್ದು ಆರಂಭವಾಗುವ ಮೂಗೂರು ಕ್ರಾಸ್‌ನಿಂದ ಪಟ್ಟಣದ ರಾಮಸಮುದ್ರದ ಡಾ.ಅಂಬೇಡ್ಕರ್ ಪ್ರತಿಮೆವರೆಗೆ ಏರ್ಪಡಿಸಲಾಗಿದ್ದ 25 ಕಿ.ಮೀ. ಉದ್ದದ ಮಾನವ ಸರಪಳಿ ಕಾರ್ಯಕ್ರಮ ಗಮನ ಸೆಳೆಯಿತು.
ಪಶು ಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಎಂಎಸ್ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಉಗ್ರಾಣ ನಿಗಮದ ಅಧ್ಯಕ್ಷ ಎಸ್. ಜಯಣ್ಣ ಸೇರಿದಂತೆ ಇನ್ನಿತರೆ ಗಣ್ಯರು ಮೂಗೂರು ಕ್ರಾಸ್ ಬಳಿ ಆರಂಭವಾದ ಮಾನವ ಸರಪಳಿಗೆ ಶುಭ ಕೋರಿ ಹಾರೈಸಿದರು. ದಾರಿಯುದ್ದಕ್ಕೂ ಮಾನವ ಸರಪಳಿಯಲ್ಲಿ ಸಮವಸ್ತ್ರ ಧರಿಸಿದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಸಮುದಾಯಗಳ ಮುಖಂಡರು, ಜನಪ್ರತಿನಿಧಿಗಳು, ಸರ್ಕಾರಿ ನೌಕರರು, ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಸೇರಿದಂತೆ ಸರ್ವರೂ ಪ್ರಜಾಪ್ರಭುತ್ವದ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಬಿಂಬಿಸುವ ಮಹತ್ತರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾನವ ಸರಪಳಿಯ ಮೆರಗನ್ನು ಹೆಚ್ಚಿಸಿದರು.
ಬಿಜೆಪಿ ರಾಷ್ಟ್ರದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ: ಬಿ.ಸಿ.ಪಾಟೀಲ್
ಮಾನವ ಸರಪಳಿ ರಚನೆಯಾಗಿದ್ದ ಪ್ರತಿ ಕಿ.ಮೀ.ನಲ್ಲಿ ಡಾ. ಅಂಬೇಡ್ಕರ್ ವೇಷಭೂಷಣ ಹಾಗೂ ಇನ್ನಿತರೆ ಸಾಂಪ್ರದಾಯಿಕ ದಿರಿಸು ಧರಿಸಿದ್ದ ಮಕ್ಕಳು ನಿಂತು ವಿಶೇಷ ಗಮನ ಸೆಳೆದರು. ಮಾರ್ಗಮಧ್ಯೆ ಶಾಲಾ ಮಕ್ಕಳು ಜಿಲ್ಲೆಯ ಬಿಳಿಗಿರಿರಂಗನ ಅರಣ್ಯವಾಸಿಗಳ ನೃತ್ಯ ಪ್ರದರ್ಶಿಸಿದರು. ಗಾರುಡಿ ಗೊಂಬೆ, ಡೊಳ್ಳು, ಇನ್ನಿತರೆ ಕಲಾ ತಂಡಗಳು ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದವು. ಮಾನವ ಸರಪಳಿ ಮಾರ್ಗದಲ್ಲಿ ಬರುವ ಗ್ರಾಮಗಳಲ್ಲಿ ಜನರ ಉತ್ಸಾಹ ಮೇರೆ ಮೀರಿತ್ತು. ಸಾಂಪ್ರದಾಯಿಕ ಉಡುಗೆ-ತೊಡುಗೆ ತೊಟ್ಟು ತ್ರಿವರ್ಣ ಧ್ವಜ ಹಿಡಿದು ಸಂಭ್ರಮಿಸಿದರು. ಸಂವಿಧಾನ ಪೀಠಿಕೆ ವಾಚನ ಮಾಡಿದರು. ಮಾನವ ಸರಪಳಿಗೆ ಕೈ ಜೋಡಿಸಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸಾರ್ಥಕಗೊಳಿಸಿದರು.