
ಮಂಡ್ಯ(ಆ.09): ರಾಜ್ಯ ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ನಿಗಮದಲ್ಲಿ ನಡೆಸಿರುವ ಹಣ ದುರುಪಯೋಗ ಹಾಗೂ ಮೈಸೂರು ಮುಡಾ ಹಗರಣದ ಬಗ್ಗೆ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೌಂಡ್‌ಲೆಸ್ ಆಗಿದ್ದರೆ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಾಯ್ಸ್‌ಲೆಸ್ ಆಗಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ.ರವಿ ಟೀಕಿಸಿದರು.
ಖರ್ಗೆ ಮತ್ತು ರಾಹುಲ್ ಅಂತಾರಾಷ್ಟ್ರೀಯ ಬೆಳವಣಿಗೆಗಳ ವಿಚಾರವಾಗಿ ಮಾತನಾಡುತ್ತಾರೆ. ಆದರೆ, ಕಾಂಗ್ರೆಸ್ ಸರ್ಕಾರ ನಡೆಸಿರುವ ಹಗರಣಗಳ ಬಗ್ಗೆ ಬಾಯಿ ಬಿಡುವುದಿಲ್ಲ. ಕರ್ನಾಟಕದಲ್ಲಿ ನಡೆದಿರುವ ಹಣದ ಲೂಟಿಯಲ್ಲಿ ಹೈಕಮಾಂಡ್ ಪಾಲೂ ಇದೆ ಎಂದಂತಾಗಿದೆ. ಭ್ರಷ್ಟಾಚಾರಕ್ಕೆ ಕೈಕಮಾಂಡ್ ಬೆಂಬಲವಾಗಿ ನಿಂತಿರುವುದು ಅವರ ಮೌನದಿಂದಲೇ ತಿಳಿಯುತ್ತದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಕುಟುಕಿದರು.
ಭ್ರಷ್ಟಾಚಾರದಲ್ಲಿ ತೊಡಗಿ ರಾಜ್ಯದ ಸಂಪತ್ತನ್ನು ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ನಿಖಿಲ್ ಕುಮಾರಸ್ವಾಮಿ
ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ಬೇಕಾದಕ್ಕೆಲ್ಲಾ ಬಳಸಿಕೊಳ್ಳಬಹುದು ಎಂಬುದಕ್ಕಾಗಿಯೇ ಯೋಜನೆ ರೂಪಿಸಿದರೇ. ಹಾಗಾದರೆ ಆ ಯೋಜನೆ ಇರೋದು ದಲಿತರ ಉದ್ಧಾರಕ್ಕಲ್ಲ. ವಾಲ್ಮೀಕಿ ನಿಗಮ ಇರುವುದು ಆ ಸಮುದಾಯದವರ ಅಭಿವೃದ್ಧಿಗಲ್ಲ. ಯೋಜನೆಗಳ ಹೆಸರಿನಲ್ಲಿ ಇವರು ಕೊಳ್ಳೆ ಹೊಡೆಯುವುದಕ್ಕಾ ಇರೋದು ಎಂದು ಪ್ರಶ್ನಿಸಿದರು.
ಬಿಜೆಪಿ-ಜೆಡಿಎಸ್‌ನವರದು ಪಾದಯಾತ್ರೆಯಲ್ಲ, ಪಾಪ ವಿಮೋಚನಾ ಯಾತ್ರೆ ಎಂದಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಳಿಸಿರುವ ಪುಣ್ಯ ಎಷ್ಟು ಎನ್ನುವುದನ್ನು ಅವರ ಆ ದಿನಗಳ ಟ್ರ್ಯಾಪ್ ರೆಕಾರ್ಡ್ಸ್ ಹೇಳುತ್ತವೆ. ಅವರು ಗಳಿಸಿದ ಪುಣ್ಯದಿಂದಲೇ ತಿಹಾರ್ ಜೈಲ್‌ಗೆ ಹೋಗಿ ಬಂದಿದ್ದಾರೆ. ಇನ್ನೂ ಬೇಲ್ ಮೇಲೆ ಓಡಾಡುತ್ತಿದ್ದಾರೆ ಎಂದು ಮಾತಿನ ಈಟಿಯಿಂದ ತಿವಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.