ರಾಹುಲ್ ಗಾಂಧಿಯವರು ಲೋಕಸಭಾ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ಸಲಹೆ ನೀಡಿದ್ದೆ. ಬಿಜೆಪಿ ಹಾಗೂ ನರೇಂದ್ರ ಮೋದಿ ಯವರನ್ನು ಎದುರಿಸಬೇಕಾದರೆ ನೀವೇ ವಿರೋಧಪಕ್ಷದ ನಾಯಕರಾಗಬೇಕೆಂದು ಕಾರ್ಯಕಾರಿಣಿ ಸಮಿತಿಯಲ್ಲಿ ನಾನೂ ಒತ್ತಾಯ ಮಾಡಿದ್ದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು(ಜೂ.27): ಕಾಂಗ್ರೆಸ್ ನಾಯಕ ಸಂಸದ ರಾಹುಲ್ ಗಾಂಧಿ ಅವರು ಲೋಕಸಭೆ ವಿಪಕ್ಷ ನಾಯಕ ಸ್ಥಾನವನ್ನು ವಹಿಸಿಕೊಂಡಿದ್ದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು. ಪ್ರಧಾನಿ ಮೋದಿ ಅವರನ್ನು ಎದುರಿಸಲು ಅವರು ಸೂಕ್ತ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಲೋಕಸಭಾ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ಸಲಹೆ ನೀಡಿದ್ದೆ. ಬಿಜೆಪಿ ಹಾಗೂ ನರೇಂದ್ರ ಮೋದಿ ಯವರನ್ನು ಎದುರಿಸಬೇಕಾದರೆ ನೀವೇ ವಿರೋಧಪಕ್ಷದ ನಾಯಕರಾಗಬೇಕೆಂದು ಕಾರ್ಯಕಾರಿಣಿ ಸಮಿತಿಯಲ್ಲಿ ನಾನೂ ಒತ್ತಾಯ ಮಾಡಿದ್ದೆ ಎಂದು ಹೇಳಿದ್ದಾರೆ.
ಆಡಳಿತ ಮಾಡಲಾಗದ ಸಿದ್ದರಾಮಯ್ಯ ಸರ್ಕಾರ ವಿಸರ್ಜಿಸಲಿ: ಶಾಸಕ ಸಿದ್ದು ಸವದಿ
ರಾಹುಲ್ ಗಾಂಧಿಯವರು ಈ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು. ನಾನು ಅವರಿಗೆ ತುಂಬು ಹೃದಯದ ಅಭಿನಂದನೆಗಳನ್ನು ತಿಳಿಸಬಯಸುತ್ತೇನೆ ಎಂದರು.