
ನವದೆಹಲಿ: ಶಿಕ್ಷಣ ವ್ಯವಸ್ಥೆಯ ಮೇಲೆ ಆರ್‌ಎಸ್‌ಎಸ್ ಸಂಪೂರ್ಣ ನಿಯಂತ್ರಣ ಸಾಧಿಸಿದರೆ, ಯಾರಿಗೂ ಉದ್ಯೋಗ ಸಿಗದಂತಾಗಿ ದೇಶವೇ ನಾಶವಾಗುತ್ತದೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಇಂಡಿಯಾ ಕೂಟದ ಅಂಗಸಂಸ್ಥೆಯಾದ ವಿದ್ಯಾರ್ಥಿಗಳ ಸಂಘಟನೆ ಜಂತರ್ ಮಂತರ್‌ನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಸಿದ ರಾಹುಲ್, ‘ನಮ್ಮ ಕೂಟದಲ್ಲಿ ಸೈದ್ಧಾಂತಿಕ ಭಿನ್ನತೆಗಳಿರಬಹುದು. ಆದರೆ ದೇಶದ ಶಿಕ್ಷಣ ವ್ಯವಸ್ಥೆಯೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ’ ಎಂದರು.
ಇದೇ ವೇಳ ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ದೇಶದ ವಿಶ್ವವಿದ್ಯಾಲಯಗಳ ಕುಲಪತಿಗಳು ಸಂಘದ ಪ್ರಾಬಲ್ಯ ಹೊಂದಿದ್ದಾರೆ. ಮುಂದೆ ರಾಜ್ಯಗಳ ವಿವಿಗಳ ಕುಲಪತಿಗಳನ್ನೂ ಆರ್‌ಎಸ್‌ಎಸ್ ಶಿಫಾರಸಿನಂತೆಯೇ ನೇಮಿಸಲಾಗುವುದು. ಇದನ್ನು ತಡೆಯಬೇಕು’ ಎಂದು ಕರೆ ನೀಡಿದ್ದಾರೆ. ತಮಿಳುನಾಡಿನಲ್ಲಿ ಎನ್‌ಇಪಿ ಜಾರಿಗೊಳಿಸುವುದಿಲ್ಲ ಎಂದು ಸಿಎಂ ಇಂಡಿಯಾ ಕೂಟದ ಭಾಗವಾದ ಎಂ.ಕೆ.ಸ್ಟಾಲಿನ್ ಸರ್ಕಾರ ಈ ಹಿಂದೆ ಹೇಳಿತ್ತು.
ಧರ್ಮದ ಆಧಾರದಲ್ಲಿ ಮೀಸಲಿಗೆ ಅವಕಾಶವಿಲ್ಲ : ಆರ್‌ಎಸ್‌ಎಸ್ ಸರ ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ
ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಆರ್‌ಎಸ್‌ಎಸ್ ಕಳವಳ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.