* ಚುನಾವಣೆಗೆ 6 ತಿಂಗಳ ಮುಂಚೆ ಟಿಕೆಟ್ ಘೋಷಣೆಗೆ ಕಾಂಗ್ರೆಸ್ ಪ್ರಯತ್ನ
* ಹುಬ್ಬಳ್ಳಿ ಗಲಭೆಗೆ ಬಿಜೆಪಿಯವರೇ ಕಾರಣ
* ಬಿಜೆಪಿಯಿಂದ ಪರಿಶಿಷ್ಟರಿಗೆ ಅನ್ಯಾಯ
ದಾವಣಗೆರೆ(ಏ.24): ರಾಜ್ಯದಲ್ಲಿ(Karnataka) ಅವಧಿಗೆ ಮುನ್ನ ವಿಧಾನಸಭೆ ಚುನಾವಣೆ ಆಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah), ಚುನಾವಣೆಗೆ 6 ತಿಂಗಳ ಮುಂಚೆಯೇ ಕಾಂಗ್ರೆಸ್ ಟಿಕೆಟ್ ಘೋಷಣೆಗೆ ಪ್ರಯತ್ನಿಸುತ್ತಿದೆ ಎಂದು ತಿಳಿಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ(Karnataka Assembly Election) 150 ಸ್ಥಾನ ಗೆಲ್ಲಲೇಬೇಕೆಂದು ರಾಹುಲ್ ಗಾಂಧಿ(Rahul Gandhi) ನಮಗೂ ಹೇಳಿದ್ದಾರೆ ಎಂದರು.
ಕಾಂಗ್ರೆಸ್ಸಿನಿಂದ(Congress) ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬುದನ್ನು ಪಕ್ಷದ ಹೈಕಮಾಂಡ್ ಹಾಗೂ ನಮ್ಮ ಶಾಸಕರು ನಿರ್ಧಾರ ಮಾಡುತ್ತಾರೆ. ಚುನಾವಣೆಗೆ 6 ತಿಂಗಳ ಮುಂಚೆ ಟಿಕೆಟ್ ಘೋಷಣೆಗೆ ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು.
ಕೊಪ್ಪಳದಿಂದ ಸ್ಪರ್ಧೆ ಮಾಡ್ತಾರಾ ಸಿದ್ದರಾಮಯ್ಯ
ವಿಧಾನಸಭೆ ಚುನಾವಣೆ ಮುಗಿಯುವವರೆಗೂ ವಿಶ್ರಾಂತಿ ಪಡೆಯುವುದಿಲ್ಲವೆಂಬ ಹೇಳಿಕೆ ನೀಡಿರುವ ಯಡಿಯೂರಪ್ಪ(BS Yediyurappa) ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು ಹಾಕಿದ್ದಕ್ಕೆ ಹಾಗೆಲ್ಲಾ ಮಾತನಾಡುತ್ತಿದ್ದಾರೆ. ಅಲ್ಲದೆ, ಯಡಿಯೂರಪ್ಪ ಮೇಲೆ ಕೇಸ್‌ಗಳು ಇವೆ. ಹಾಗಾಗಿ ವಿಶ್ರಾಂತಿ ಪಡೆಯುವುದಿಲ್ಲವೆಂಬ ಹೇಳಿಕೆಯನ್ನು ನೀಡಿದ್ದಾರಷ್ಟೇ ಎಂದು ಲೇವಡಿ ಮಾಡಿದರು.
ಹುಬ್ಬಳ್ಳಿ ಗಲಭೆಗೆ(Hubballi Riots) ಬಿಜೆಪಿಯವರೇ(BJP) ಕಾರಣವಾಗಿದ್ದಾರೆ. ವಿವಾದಿತ ಪೋಸ್ಟ್ ಹಾಕಿದ್ದ ಅಭಿಷೇಕ್ ಹಿರೇಮಠ ಯಾರು? ಸರ್ಕಾರವು ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಬೇಕು. ಉತ್ತರ ಪ್ರದೇಶದಂತೆ ಬುಲ್ಡೋಜರ್ ವ್ಯವಸ್ಥೆ ತರಬೇಕೆಂದ ಶ್ರೀರಾಮ ಸೇನೆಗೆ ಮೊದಲು ಬುಲ್ಡೋಜರ್ ಹರಿಸಬೇಕು ಎಂದು ಹರಿಹಾಯ್ದರು.
ಬಿಜೆಪಿಯಿಂದ ಪರಿಶಿಷ್ಟರಿಗೆ ಅನ್ಯಾಯ
ದಾವಣಗೆರೆ: ಪರಿಶಿಷ್ಟ ಜಾತಿ-ಪಂಗಡಗಳ ಜನರಿಗೆ ಉಪಯೋಗಿಸಬೇಕಾದ ಹಣವನ್ನು ರಾಜ್ಯದಲ್ಲಿ ಅನ್ಯ ಉದ್ದೇಶಕ್ಕೆ ಬಳಸುವ ಮೂಲಕ ಪರಿಶಿಷ್ಟರಿಗೆ ಅನ್ಯಾಯ ಮಾಡುತ್ತಿದ್ದು, ಇದೀಗ ಉಚಿತ ವಿದ್ಯುತ್ ಹೇಳಿಕೆ ನೀಡುವ ಮೂಲಕ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸವನ್ನು ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದರು. ಎಸ್‌ಸಿಟಿ-ಟಿಎಸ್‌ಪಿ(SC ST) ಯೋಜನೆಯಲ್ಲಿ ಕೈಗೊಳ್ಳಬೇಕಾದ ಕಾಮಗಾರಿಯ 7889 ಕೋಟಿ ರು. ಹಣವನ್ನು ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಕಾಮಗಾರಿಗೆ ಬಳಸುತ್ತಿದೆ. ಮೊದಲು ಅದನ್ನು ಸರಿಪಡಿಸಲಿ ಎಂದರು.