Bharat Jodo Yatra: ಭಾರತ ಜೋಡೊ ಯಾತ್ರೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪ್ರಜಾಪ್ರಭುತ್ವವನ್ನು ಅಪ್ಪಿಕೊಂಡರೆ ಬಿಜೆಪಿ ಪ್ರಜಾಪ್ರಭುತ್ವದ ವಿರುದ್ಧವಾಗಿದೆ ಎಂದಿದ್ದಾರೆ.
ತುಮಕೂರು: ಭಾರತ ಜೋಡೊ ಯಾತ್ರೆಯಲ್ಲಿ (Bharat Jodo Yatra) ಭಾಗಿಯಾಗಿರುವ ರಾಹುಲ್ ಗಾಂಧಿ (Rahul Gandhi) ಮಾಧ್ಯಮದೊಂದಿಗೆ ಮಾತನಾಡಿದ್ದಾರೆ. ಈ ವೇಳೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಮತ್ತು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ದೇಶವನ್ನು ವಿಭಜಿಸುತ್ತಿರುವುದೇ ಆರ್‌ಎಸ್‌ಎಸ್ ಮತ್ತು ಬಿಜೆಪಿ ಎಂದು ಅವರು ಆರೋಪಿಸಿದ್ದಾರೆ. ಪಿಎಫ್‌ಐ ಸಂಘಟನೆಯನ್ನು ಬ್ಯಾನ್ (Ban on PFI) ಮಾಡಿರುವ ಕುರಿತಂತೆ ಪ್ರತಿಕ್ರಿಯಿಸಿದ ಅವರು ಭಾರತದಲ್ಲಿ ದ್ವೇಷ ಹರಡೋದು ಯಾವುದೇ ಸಂಘಟನೆಯಾಗಲಿ, ಯಾವುದೇ ಸಮುದಾಯವಾಗಲಿ ಅದನ್ನು ಕಾಂಗ್ರೆಸ್ ಪಕ್ಷ ಬೆಂಬಲಿಸುವುದಿಲ್ಲ ಎಂದಿದ್ದಾರೆ. ಅಂತವರ ವಿರುದ್ದ ಹೋರಾಟ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ವಿಶ್ವಾಸವಿಲ್ಲ. ಪತ್ರಕರ್ತರು ಪ್ರಶ್ನೆ ಕೇಳಲು ಅವಕಾಶವೇ ಇಲ್ಲ. ಇಲ್ಲಿಯವರೆಗೆ ಒಂದೇ ಒಂದು ಪತ್ರಿಕಾಗೊಷ್ಠಿಯನ್ನೂ ಪ್ರಧಾನಿ ನರೇಂದ್ರ ಮೋದಿ ಮಾಡಿಲ್ಲ. ಆದರೆ ಕಾಂಗ್ರೆಸ್ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿರುವ ಪಕ್ಷ. ಹಾಗಾಗಿ ಈ ಸುದ್ದಿಗೊಷ್ಠಿಗೆ ಅವಕಾಶ ಮಾಡಿಕೊಟ್ಟಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಜೆಡಿಎಸ್ ಜೊತೆಗಿನ ಒಪ್ಪಂದ ಮಾಡಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ರಾಹುಲ್, ಈ ಬಗ್ಗೆ ರಾಜ್ಯ ನಾಯಕರ ಚರ್ಚೆ ಮಾಡಬೇಕಾಗುತ್ತದೆ. ಕರ್ನಾಟಕದಲ್ಲಿ ಅದರ ಅಗತ್ಯವೇ ಬೀಳುವುದಿಲ್ಲ. ಯಾರ ಸಹಾಯವೂ ಇಲ್ಲದೇ ನಾವು ಚುನಾವಣೆ ಗೆಲ್ಲುತ್ತೇವೆ ಎಂದು ರಾಹುಲ್ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು. ಇತಿಹಾಸ ನೋಡಿದರೆ ಬಿಜೆಪಿ ಆರ್ ಎಸ್ಎಸ್ ಎಲ್ಲಿಯೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯೇ ಆಗಿಲ್ಲ. ಭಾರತವನ್ನು ಒಡೆಯುತ್ತಿರುವುದು ಆರ್ ಎಸ್ ಎಸ್ ಮತ್ತು ಬಿಜೆಪಿ. ಲಕ್ಷಾಂತರ ಮಂದಿ ಭಾರತ್ ಜೋಡೋ ಯಾತ್ರೆ ಮಾಡ್ತಾ ಇದ್ದಾರೆ
ರಾಹುಲ್ ಗಾಂಧಿ ಹೇಳಿದ್ದಾರೆ.
ನಾವು ದ್ವೇಷ ಹರಡುವ ಎಲ್ಲರ ವಿರುದ್ದವೂ ಹೋರಾಡುತ್ತೇವೆ. ಗಾಂಧಿ ಕುಟುಂಬ ಹೊರತುಪಡಿಸಿ ಯಾರೇ ಅಧ್ಯಕ್ಷರಾದರೂ ಏನೂ ಸಮಸ್ಯೆ ಆಗುವುದಿಲ್ಲ. ಎಲ್ಲರೂ ಕಾಂಗ್ರೆಸ್ ಪಕ್ಷದವರೇ. ಆರ್ ಎಸ್ ಎಸ್ ಬ್ರಿಟಿಷರಿಗೆ ಸಹಾಯ ಮಾಡ್ತಾ ಇತ್ತು. ಸಾವರ್ಕರ್ ಬ್ರಿಟಿಷರ ಬಳಿ ಸ್ಟೈಫಂಡ್ ಪಡೆದುಕೊಳ್ತಿದ್ದರು ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂ ಅಭ್ಯರ್ಥಿ ಯಾರು?:
ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ಕಾಂಗ್ರೆಸ್‌ನ ನಾಯಕತ್ವ ಸದೃಢವಾಗಿದೆ. ಹಲವಾರು ಸಶಕ್ತ ನಾಯಕರಿದ್ದಾರೆ. ಚುನಾವಣೆಗೂ ಮುನ್ನ ಅಭ್ಯರ್ಥಿ ಆಯ್ಕೆ ಮಾಡುವುದಿಲ್ಲ. ಚುನಾವಣೆ ಫಲಿತಾಂಶ ಬಂದ ನಂತರ ಮುಖ್ಯಮಂತ್ರಿ ಆಯ್ಕೆಯ ಪ್ರಕ್ರಿಯೆ ಪಕ್ಷದೊಳಗೆ ನಡೆಯುತ್ತದೆ. ಅದಾದ ನಂತರ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಇದನ್ನೂ ಓದಿ: ಹಿಂದಿ ರಾಷ್ಟ್ರಭಾಷೆ ಮಾಡುವ ಕುರಿತು Rahul Gnadhiಗೆ ಪ್ರಶ್ನೆ: ರಾಹುಲ್ ಹೇಳಿದ್ದೇನು
ರಿಮೋಟ್ ಕಂಟ್ರೋಲ್ ಅಧ್ಯಕ್ಷ:
ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಚುನಾವಣೆ ಬಗ್ಗೆ ಕೇಳಿ ಬರುತ್ತಿರುವ ರಿಮೋಟ್ ಕಂಟ್ರೋಲ್ ಅಧ್ಯಕ್ಷ ಎಂಬ ವ್ಯಂಗ್ಯಕ್ಕೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಯಾರೇ ಅಧ್ಯಕ್ಷರಾದರೂ ಅವರಿಗೆ ಸಂಪೂರ್ಣ ಅಧಿಕಾರವಿರಲಿದೆ. ಪಕ್ಷ ಸಂಘಟನೆಯ ಕುರಿತಂತೆ ನಿರ್ಧಾರ ತೆಗೆದುಕೊಳ್ಳುವ ಸ್ವಾತಂತ್ರ್ಯ ಅಧ್ಯಕ್ಷರಾಗಿ ಆಯ್ಕೆಯಾಗುವವರಿಗೆ ಇರಲಿದೆ. ಈ ರೀತಿಯ ಊಹಾಪೋಹ ಹರಡಿಸಿರುವುದು ಅಧ್ಯಕ್ಷೀಯ ಸ್ಥಾನಕ್ಕೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಅವರಿಗೆ ಮಾಡುತ್ತಿರುವ ಅಪಮಾನ. ದಯವಿಟ್ಟು ಈ ರೀತಿಯ ಮಾಡುಗಳನ್ನು ಆಡಬೇಡಿ. ಗಾಂಧಿ ಕುಟುಂಬ ಅಧ್ಯಕ್ಷ ಚುನಾವಣೆ ವಿಚಾರದಲ್ಲಿ ತಟಸ್ತವಾಗಿರಲಿದೆ ಎಂದಿದ್ದಾರೆ.
ಇದನ್ನೂ ಓದಿ: ಮಂಡ್ಯ: ಪಾದಯಾತ್ರೆಯಲ್ಲಿ ರಾಹುಲ್ ಸರಳತೆ ಪ್ರದರ್ಶನ: ಮಗುವನ್ನು ಮುದ್ದಿಸಿ ಚಾಕೋಲೇಟ್ ನೀಡಿದ ಅಧಿನಾಯಕ..!
ಒಪ್ಪಿದರೂ, ಒಪ್ಪದಿದ್ದರೂ ಟಿಪು ಇತಿಹಾಸದ ಭಾಗ; ಪರಮೇಶ್ವರ್:
ಟಿಪ್ಪು ಎಕ್ಸ್‌ಪ್ರೆಸ್ ಹೆಸರು ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ರಾಹುಲ್, ಬಿಜೆಪಿಗೆ ಮಾಡೋಕೆ ಸಾಕಷ್ಟು ಕೆಲಸ ಇದೆ. ನಿರುದ್ಯೋಗ ಕಡಿಮೆ ಮಾಡುವ ಕೆಲಸವಿದೆ, ಸಮಾಜದಲ್ಲಿ ಶಾಂತಿ ಕಾಪಾಡುವ ಕೆಲಸವಿದೆ. ಆದರೆ ಇವರು ಅದನ್ನೆಲ್ಲಾ ಬಿಟ್ಟು ಟ್ರೈನ್‌ನ ಹೆಸರು ಬದಲಾಯಿಸಿಕೊಂಡು ಕುಳಿತಿದ್ದಾರೆ. ಟಿಪ್ಪುಸುಲ್ತಾನ ಇತಿಹಾಸದ ಒಂದು ಭಾಗ. ಯಾರು ಒಪ್ಪುತ್ತಾರೋ ಬಿಡುತ್ತಾರೋ. ಅದನ್ನು ಬದಲಾಯಿಸುವುದರಿಂದ ಇತಿಹಾಸವನ್ನು ಅಳಿಸಿಹಾಕೋಕೆ ಆಗಲ್ಲ, ಎಂದು ಕಾಂಗ್ರೆಸ್ ನಾಯಕ ಡಾ. ಜಿ ಪರಮೇಶ್ವರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜಕೀಯ ಕಾರಣದಿಂದ ತೆಗೆದಿದ್ದರೆ ಅದನ್ನು ವಾಪಸ್ ಪಡೆಯಬೇಕು ಟಿಪ್ಪು ಸುಲ್ತಾನ್ ಹೆಸರನ್ನು ಮತ್ತೆ ಇಡಬೇಕು ಎಂದು ಆಗ್ರಹ ಮಾಡ್ತೀನಿ ಎಂದು ಪರಮೇಶ್ವರ್ ಹೇಳಿದ್ದಾರೆ.