2024ರ ಲೋಕಸಭಾ ಚನಾವಣೆಗೆ ರಾಹುಲ್ ಗಾಂಧಿ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ, ಕಮಲ್‌ನಾಥ್ ಭವಿಷ್ಯ!

By Suvarna NewsFirst Published Dec 31, 2022, 5:49 PM IST
Highlights

2024 ಲೋಕಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸುತ್ತಿರುವ ಕಾಂಗ್ರೆಸ್, ಭಾರತ್ ಜೋಡೋ ಸೇರಿದಂತೆ ಹಲವು ಯಾತ್ರೆ ಆರಂಭಿಸಿದೆ. ಇದರ ನಡುವೆ ಮುಂಬರುವ ಚುನಾವಣೆಗೆ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಎಂದು ಹಿರಿಯ ನಾಯಕ ಕಮಲ್ ನಾಥ್ ಘೋಷಿಸಿದ್ದಾರೆ.
 

ನವದೆಹಲಿ(ಡಿ.31): ಕೇಂದ್ರದಲ್ಲಿ ಅಧಿಕಾರಕ್ಕೇರಲು ಕಾಂಗ್ರೆಸ್ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ಕಳೆದೆರಡು ಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿದ ಕಾರಣ ಈ ಬಾರಿ ಭರ್ಜರಿ ತಯಾರಿ ನಡೆಸುತ್ತಿದೆ. ರಾಹುಲ್ ಗಾಂಧಿ, ಭಾರತ್ ಜೋಡೋ ಯಾತ್ರೆ ಮೂಲಕ ಪಕ್ಷ ಸಂಘಟನೆ ನಡೆಸುತ್ತಿದ್ದಾರೆ. ಇತ್ತ ಹಿಮಾಚಲ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಉತ್ಸಾಹ ಹೆಚ್ಚಿಸಿದೆ. ಈ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ, ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಮಹತ್ವದ ಘೋಷಣೆ ಮಾಡಿದ್ದಾರೆ. 2024ರ ಲೋಕಸಭಾ ಚುನಾವಣೆಗೆ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿ ಎಂದಿದ್ದಾರೆ. ಭಾರತ್ ಜೋಡೋ ಯಾತ್ರೆ ಮೂಲಕ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಕಟ್ಟುತ್ತಿದ್ದಾರೆ. ಈ ಹಿಂದೆ ಯಾರು ಮಾಡಿರದ ಕೆಲಸವನ್ನು ರಾಹುಲ್ ಗಾಂಧಿ ಮಾಡುತ್ತಿದ್ದಾರೆ. ಅವರೇ ಮುಂದಿನ ಪ್ರಧಾನಿ ಅಭ್ಯರ್ಥಿ ಎಂದು ಕಮಲನಾಥ್ ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆ ಮೂಲಕ ರಾಹುಲ್ ಗಾಂಧಿ ಯಾವುದೇ ರಾಜಕೀಯ ಮಾಡುತ್ತಿಲ್ಲ. ಜನಸಾಮಾನ್ಯರ ನಾಡಿಮಿಡಿತವನ್ನು ರಾಹುಲ್ ಗಾಂಧಿ ಅರಿತುಕೊಂಡಿದ್ದಾರೆ. ಇತರ ಪಕ್ಷಗಳಂತೆ ಅಧಿಕಾರಕ್ಕೇರಲು ರಾಜಕೀಯ ಮಾಡುವ ಜಾಯಮಾನ ರಾಹುಲ್ ಗಾಂಧಿಗಿಲ್ಲ. ದೇಶದಲ್ಲಿ ಜನಾಂದೋಲನದ ಮೂಲಕ ಪಕ್ಷ ಸಂಘಟನೆ ಮಾಡುವು ನಾಯಕ ರಾಹುಲ್ ಗಾಂಧಿ ಎಂದು ಕಮಲ್ ನಾಥ್ ಹೇಳಿದ್ದಾರೆ. ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿ ಅನ್ನೋ ಕಮಲ್ ನಾಥ್ ಹೇಳಿಕೆ ಇದೀಗ ಕಾಂಗ್ರೆಸ್ ಪಾಳಯದಲ್ಲೇ ಹೊಸ ಸಂಚನ ಸೃಷ್ಟಿಸಿದೆ.

 

ದಿಲ್ಲಿಯಲ್ಲಿ ಭಾರತ್‌ ಜೋಡೋ ಅಬ್ಬರ: ನಟ ಕಮಲ್‌ ಹಾಸನ್ ಸೇರಿ ಅನೇಕರು ಭಾಗಿ

ರಾಹುಲ್ ಗಾಂಧಿಗೆ ಪಕ್ಷವನ್ನು ಮುನ್ನಡೆಸುವ ಶಕ್ತಿ ಇದೆ. ಹೀಗಾಗಿ ದೇಶವನ್ನು ಮುನ್ನಡೆಸಲು ರಾಹುಲ್ ಗಾಂಧಿ ಸೂಕ್ತರಾಗಿದ್ದಾರೆ. ರಾಹುಲ್ ಗಾಂಧಿಯೇ ವಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಎಂದಿದ್ದಾರೆ.  ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಅನ್ನೋ ಹೇಳಿಕೆ ಇದೀಗ ಮತ್ತೆ ಆರಂಭಗೊಂಡಿದೆ. ಈ ಬಾರಿ ಕಮಲ್ ನಾಥ್ ಆರಂಭಿಸಿದ್ದಾರೆ. ಇದರ ಬೆನ್ನಲ್ಲೇ ಹಲವು ನಾಯಕರು ರಾಹುಲ್ ಗಾಂಧಿಗೆ ಪ್ರಧಾನಿ ಅಭ್ಯರ್ಥಿ ಪಟ್ಟ ಕಟ್ಟಲು ತುದಿಗಾಲಲ್ಲಿ ನಿಂತಿದ್ದಾರೆ. 

ಸದ್ಯ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ದೆಹಲಿಯಲ್ಲಿ ಸಂಚರಿಸುತ್ತಿದೆ. ಪಂಜಾಬ್ ಮೂಲಕ ಹಾದು ಹೋಗಲಿರುವ ಯಾತ್ರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸಮಾಪ್ತಿಗೊಳ್ಳಲಿದೆ.

 

ಚೀನಾ ಗಡಿಗೆ ರಾಹುಲ್ ಸೂಚನೆ ಮೇರೆಗೆ ಸೇನೆ ಕಳಿಸಿದ್ದಲ್ಲ: ಜೈಶಂಕರ್‌ ತಿರುಗೇಟು

ರಾಹುಲ್‌ ಯಾತ್ರೆಗೆ ಬನ್ನಿ, ಅಮೇಠಿ ಸಂಸದೆ, ಸಚಿವೆ ಸ್ಮೃತಿಗೆ ಕಾಂಗ್ರೆಸ್‌ ಆಹ್ವಾನ
ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಜ.3ಕ್ಕೆ ಉತ್ತರಪ್ರದೇಶಕ್ಕೆ ಆಗಮಿಸಲಿರುವ ರಾಹುಲ್‌ ಗಾಂಧಿ ಭಾರತ್‌ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ. ಕಾಂಗ್ರೆಸ್‌ ನಾಯಕ ದೀಪಕ್‌ ಸಿಂಗ್‌, ಸಚಿವೆ ಇರಾನಿ ಅವರ ಕಾರ್ಯದರ್ಶಿ ನರೇಶ್‌ ಶರ್ಮಾಗೆ ಆಹ್ವಾನ ಪತ್ರ ತಲುಪಿಸಿದ್ದು, ಕಾಂಗ್ರೆಸ್‌ನ ಹಿರಿಯ ನಾಯರಿಂದ ಸೂಚನೆ ಮೇರೆಗೆ ಆಹ್ವಾನ ತಲುಪಿಸಿದ್ದೇನೆ ಎಂದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಅಖಂಡ ಭಾರತ ತತ್ವದಡಿ ಬಿಜೆಪಿ ಕೆಲಸ ಮಾಡುತ್ತಿದ್ದು, ಒಡೆಯದಿರುವದನ್ನು ಜೋಡಿಸುವ ಮಾತೆಲ್ಲಿ? ಸಾಯುತ್ತಿರುವ ಕಾಂಗ್ರೆಸ್‌ ಪುನರುಜ್ಜೀವನಕ್ಕಾಗಿ ಮಾತ್ರ ಯಾತ್ರೆ ಸೀಮಿತವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ದುರ್ಗೇಶ್‌ ತ್ರಿಪಾಠಿ ಹೇಳಿದ್ದಾರೆ.

click me!